ಶ್ರೀನಗರ : ಭೀಕರ ಅಗ್ನಿ ಅವಘಡದಿಂದಾಗಿ ಮನೆಯಲ್ಲಿ ಮಲಗಿದ್ದ ಆರು ಮಂದಿ ಸಜೀವ ದಹನವಾಗಿದ್ದು, ಇತರ ನಾಲ್ವರು ಗಂಭೀರವಾಗಿ ಗಾಯಗೊಂಡಿವಂತಹ ಘಟನೆ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದಿದೆ.
ಇಂದು (ಡಿಸೆಂಬರ್ 18) ಮುಂಜಾನೆ ಕಥುವಾದಲ್ಲಿ ಮನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಆದರೆ, ಮನೆಯಲ್ಲಿ ಮಲಗಿದ್ದ ಆರು ಮಂದಿ ಬೆಂಕಿಗೆ ಸಿಲುಕಿ ಸಜೀವ ದಹನವಾಗಿದ್ದಾರೆ. ಅಪಘಾತದಲ್ಲಿ ಇತರ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರದೊಯ್ಯಲಾಯಿತು. ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ : ಒಂದು ರಾಷ್ಟ್ರ ಒಂದು ಚುನಾವಣೆ ಅಂಗೀಕರ: ಲೋಕಸಭೆಯಲ್ಲಿ ಪರವಾಗಿ 269 ಮತಗಳು, ವಿರುದ್ಧವಾಗಿ 198 ಮತಗಳು ಚಲಾವಣೆ
ಬೆಂಕಿ ಹೊತ್ತಿಕೊಂಡಿದೆ ಎಂಬ ಮಾಹಿತಿ ಮೇರೆಗೆ ಅಗ್ನಿಶಾಮಕ ದಳ ಹಾಗೂ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಸಂತ್ರಸ್ತರನ್ನು ಆಸ್ಪತ್ರೆಗಳಿಗೆ ಕರೆದೊಯ್ಯಲಾಯಿತು. ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.
ಘಟನೆಯ ಕುರಿತು ಪೊಲೀಸರು ಎಲ್ಲಾ ಕೋನಗಳಿಂದ ತನಿಖೆ ನಡೆಸುತ್ತಿದ್ದಾರೆ. ಮರಣೋತ್ತರ ಪರೀಕ್ಷೆಯ ನಂತರ ಮೃತದೇಹಗಳನ್ನು ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಾಥಮಿಕ ಮಾಹಿತಿ ಪ್ರಕಾರ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿರಬಹುದು.
ಇದ್ನನೂ ನೋಡಿ : ಒಂದು ದೇಶ ಒಂದು ಚುನಾವಣೆ ಸರ್ವಾಧಿಕಾರಕ್ಕೆ ಮುನ್ನುಡಿಯೇ? – ಕೃಷ್ಣ ಪ್ರಸಾದ್ Janashakthi Media