ಬೆಂಗಳೂರು: ಇಂದು ಬುಧವಾರ ರಾಜ್ಯದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, 100ಕ್ಕೂ ಹೆಚ್ಚ ವಾಹನಗಳು ಸುಟ್ಟು ಕರಕಲಾಗಿರುವ ಘಟನೆ ಜೆಡಿಎಸ್ ಕಚೇರಿ ಪಕ್ಕದ ಮೈದಾನದಲ್ಲಿ ನಡೆದಿದೆ. ಬೆಂಗಳೂರು
ಜಪ್ತಿ ಮಾಡಿದ್ದ ವಾಹನಗಳನ್ನು ಪೊಲೀಸರು ಶೇಷಾದ್ರಿಪುರಂ ಬಳಿಯ ಜಕ್ಕರಾಯನ ಕೆರೆ ಗ್ರೌಂಡ್ನಲ್ಲಿ ಪಾರ್ಕ್ ಮಾಡಿದ್ದರು. ಈ ಪ್ರದೇಶದಲ್ಲಿ ಇಂದು ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದೆ.
ಇದನ್ನೂ ಓದಿ: ರಾಯಚೂರು| ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ; ನಾಲ್ವರ ವಿರುದ್ಧ ದೂರು ದಾಖಲು
ಈಗಾಗಲೇ 5 ಕಾರು, 5 ಆಟೋ, 50 ಕ್ಕೂ ಹೆಚ್ಚು ಬೈಕ್ಗಳು ಸುಟ್ಟು ಕರಕಲಾಗಿದ್ದು, ಮತ್ತಷ್ಟು ವಾಹನಗಳಿಗೆ ಬೆಂಕಿ ಕೆನ್ನಾಲಿಗೆ ಹರಡಿದೆ. ಸುದ್ದಿ ತಿಳಿಯುತ್ತಿದ್ದಂತೆಯ ನಾಲ್ಕು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸುವ ಕೆಲಸ ಮಾಡುತ್ತಿದೆ.
ಸಿಗರೇಟ್ ಹಚ್ಚಿ ಬೆಂಕಿ ಕಡ್ಡಿಯನ್ನು ಒಣಗಿದ ಹುಲ್ಲಿನ ಮೇಲೆ ಎಸೆದ ಕಾರಣ ಬೆಂಕಿ ಹೊತ್ತಿಕೊಂಡಿದೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ನೋಡಿ: ಗೋಷ್ಠಿ -1 | ಗಣರಾಜ್ಯ ಭಾರತ @75 – ಅಸ್ಥಿರಗೊಳ್ಳುತ್ತಿರುವ ಪ್ರಜಾಪ್ರಭುತ್ವ – ಜನರ ಕರ್ತವ್ಯ | ಡಾ. ಚಂದ್ರ ಪೂಜಾರಿ