ಕಲಬುರಗಿ: ಫೆಬ್ರವರಿ 25ರ ಬೆಳಗಿನ ಜಾವ ನಗರದ ಹಳೇ ಜೇವರ್ಗಿ ರಸ್ತೆಯಲ್ಲಿರುವ ನಗರದ ರಾಮ ಮಂದಿರ ಸರ್ಕಲ್ ಸಮೀಪದ ಎಲೆಕ್ಟ್ರಿಕಲ್ ಅಂಗಡಿಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದೆ.
ಅಶೋಕ ಪ್ರಜಾಪತಿ ಅವರಿಗೆ ಸೇರಿದ ಅಂಗಡಿಯಲ್ಲಿ ಬೆಳಿಗ್ಗೆ 4 ಗಂಟೆ ಹೊತ್ತಿಗೆ ಸಂಭವಿಸಿದ ದುರಂತದಲ್ಲಿ ₹20 ಲಕ್ಷ ಮೌಲ್ಯದ ಎಲೆಕ್ಟ್ರಿಕ್ ಸಾಮಾನುಗಳು ಸೇರಿದಂತೆ ₹50 ಲಕ್ಷ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ ಎನ್ನಲಾಗಿದೆ.
ಇದನ್ನೂ ಓದಿ: ಹಿಮಾಲಯದ ಒಡಲಲ್ಲಿ ಪರಿಸರ ನಾಶದ ಹಾದಿ – ಭಾಗ 2
ಅಶೋಕನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಈ ಬೆಂಕಿ ಅವಘಡಕ್ಕೆ ವಿದ್ಯುತ್ ಶಾರ್ಟ್ ಸರ್ಕೀಟ್ ಕಾರಣ ಎಂದು ಶಂಕಿಸಲಾಗಿದೆ.
ಬೆಳಿಗ್ಗೆ 4.10ರ ಹೊತ್ತಿಗೆ ದೌಡಾಯಿಸಿ ಅಗ್ನಿಶಾಮಕ ಸಿಬ್ಬಂದಿ ಮೂರು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿ ಜ್ವಾಲೆ ನಂದಿಸಿದ್ದಾರೆ. ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಮಲ್ಲಿಕಾರ್ಜುನ ಮಾರ್ಗದರ್ಶನದಲ್ಲಿ ಸಹಾಯಕ ಅಗ್ನಿಶಾಮಕ ಅಧಿಕಾರಿ ಮಹಾಂತೇಶ, ಸಿಬ್ಬಂದಿ ಅಶ್ಫಾಕ್, ಸುಭಾಷ ಹಾದಿಮನಿ, ಶ್ರೀಕಾಂತ, ಬಸವರಾಜ, ಮಿರಾಜ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಇದನ್ನೂ ನೋಡಿ: ಕೆಂಪು ಪುಸ್ತಕ ದಿನ | ದುಡಿಯುವ ಜನತೆಯ ಕೈಪಿಡಿಹಾಡಿದವರು Janashakthi Media
