ನವದೆಹಲಿ : ಡೆಹ್ರಾಡೂನ್ ನಿಂದ ದೆಹಲಿಗೆ ಹೊರಟ್ಟಿದ್ದ ಶತಾಬ್ದಿ ಎಕ್ಸ್‌ಪ್ರೆಸ್ ರೈಲು ಉತ್ತರಖಂಡದ ಕಾನ್ಸ್ರೋ ಪ್ರದೇಶದಲ್ಲಿ ಬೋಗಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.
ಪ್ರಯಾಣಿಕರಿಗೆ ಗಾಯಗಳು ಅಥವಾ ಪ್ರಾಣಹಾನಿ ಸಂಭವಿಸದಿರುವುದರಿಂದ ಹೆಚ್ಚಿನ ಅನಾಹುತ ತಪ್ಪಿದೆ. ಹಾಗೂ ರೈಲಿನ ಸಿ-5 ಕೋಚ್‌ನಲ್ಲಿ ಕಾಣಿಸಿಕೊಂಡ ಬೆಂಕಿಯು ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಏಕಾಏಕಿಯಾಗಿ ಬೆಂಕಿ ಕಾಣಿಸಿಕೊಂಡಿದೆ ಎಂದು ಉತ್ತರಖಂಡ ಪೊಲೀಸ್ ಮಹಾನಿರ್ದೇಶಕ ಅಶೋಕ್ ಕುಮಾರ್ ಸುದ್ಧಿಗಾರರಿಗೆ ಮಾಹಿತಿ ನೀಡಿದ್ದಾರೆ.
ಪ್ರಯಾಣಿಕರೆಲ್ಲರೂ ಸುರಕ್ಷಿತರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ಬೋಗಿಯಲ್ಲಿ ಸುಮಾರು 35 ಪ್ರಯಾಣಿಕರು ಇದ್ದರು. ಅವರನ್ನು ಸ್ಥಳಾಂತರಿಸಲಾಗಿದೆ ಎಂದು ರೈಲ್ವೇ ಗಾರ್ಡ್ ಮಾಹಿತಿ ನೀಡಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಘಟನೆಯ ನಂತರ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಯನ್ನು ಕಳುಹಿಸಲಾಗಿತ್ತು.
ಬೆಂಕಿ ಕಾಣಿಸುತ್ತಿದ್ದಂತೆ ಬೋಗಿಯನ್ನು ರೈಲ್ವೆ ಸಿಬ್ಬಂದಿಗಳು ಬೋಗಿಯನ್ನು ಬೇರ್ಪಡಿಸಿ ಅನಾಹುತ ಸಂಭವಿಸದಂತೆ ಮುನ್ನಚ್ಚರಿಕೆ ವಹಿಸಿದ್ದಾರೆ ಎಂದು ಅಶೋಕ್ ಕುಮಾರ್ ಮಾಹಿತಿ ನೀಡಿದ್ದಾರೆ.
ಘಟನೆಯ ನಂತರ ಬೆಂಕಿ ಕಾಣಿಸಿಕೊಂಡ ಬೋಗಿಯನ್ನು ಬೇರ್ಪಡಿಸಿ ರೈಲು ತನ್ನ ಪ್ರಯಾಣವನ್ನು ಮುಂದುವರೆಸಿದೆ ಎಂಬ ಮಾಹಿತಿ ಲಭ್ಯವಾಗಿದೆ.