ಸುಗಂಧ ದ್ರವ್ಯಗಳ ಗೋದಾಮಿನಲ್ಲಿ ಬೆಂಕಿ ಅವಘಡ; ಅಪಾರ ನಷ್ಟ

ಬೆಂಗಳೂರು: ಸುಗಂಧ ದ್ರವ್ಯಗಳ ಗೋದಾಮು ಒಂದರಲ್ಲಿ ಸಂಭವಿಸಿದ ಅಗ್ನಿ ಅವಘಡ ಸಂಭವಿಸಿದ್ದು, ಧಗಧಗ ಹೊತ್ತಿ ಉರಿದಿದ್ದು ಅಪಾರ ನಷ್ಟ ಸಂಭವಿಸಿದ ಘಟನೆ ನೆಲಮಂಗಲ ಬಳಿ ಫೆಬ್ರವರಿ 22ರ ಮಧ್ಯಾಹ್ನ ನಡೆದಿದೆ.

ನೆಲಮಂಗಲ ರಸ್ತೆಯ ಮಾಕಳಿ ಬಳಿ ಬೆಂಕಿ ಅವಘಡ ಸಂಭವಿಸಿ ಮುಗಿಲೆತ್ತರಕ್ಕೆ ಬೆಂಕಿಯ ಜ್ವಾಲೆ ಹಬ್ಬಿದ್ದು, ಭಯಾನಕ ಶಬ್ದ ಕೇಳಿಬರುತ್ತಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿದ್ದು, ಬೆಂಕಿ ನಂದಿಸಲು ಹರಸಾಹಸಪಡುತ್ತಿದ್ದಾರೆ. ಸುಗಂಧ

ಇದನ್ನೂ ಓದಿ: ಕಲಬುರಗಿ | ಒಪ್ಪಂದ ಉಲ್ಲಂಘನೆ ಆರೋಪ; ಕಾರ್ಖಾನೆ ವಿರುದ್ಧ ಆಕ್ರೋಶ

ಬೆಂಕಿ ಬೀಳುತ್ತಿದ್ದಂತೆ ಅದರಲ್ಲಿದ್ದ, ೪೦ ಸಿಬ್ಬಂದಿ ಅಲ್ಲಿಂದ ಓಡಿ ಪಾರಾಗಿದ್ದಾರೆ. ಬೆಂಕಿ ಪಕ್ಕದ ಎಸಿ ಗೋಡೌನ್‌ಗೆ ತಗುಲಿದೆ. ಅಲ್ಲದೇ ಗೋಡೌನ್‌ನಲ್ಲಿದ್ದ ವಾಹನಗಳು ಸುಟ್ಟು ಕರಕಲಾಗಿವೆ.ಪ್ರಾಥಮಿಕ ಮಾಹಿತಿಯ ಪ್ರಕಾರ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ

ಸುದ್ದಿ ತಿಳಿದ ತಕ್ಷಣವೇ ನೆಲಮಂಗಲ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

ಇದನ್ನೂ ನೋಡಿ: “ಏನಿದು ‘ಕೆಂಪು ಪುಸ್ತಕ’? ಅದರ ವಿಶೇಷವೇನು?” – ಡಾ. ಕೆ.ಪ್ರಕಾಶ್‌ | ಯು.ಎಸ್‌. ಸಾಮ್ರಾಜ್ಯಶಾಹಿ Janashakthi Media

Donate Janashakthi Media

Leave a Reply

Your email address will not be published. Required fields are marked *