ವಿಜಯಪುರ : ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಕೂಡಗಿ ಬಳಿಯ ಎನ್‌ಟಿಪಿಸಿ ಉಷ್ಣ ವಿದ್ಯುತ್ ಸ್ಥಾವರದಲ್ಲಿ ಭೀಕರ ಅಗ್ನಿ ಅವಘಢ ಸಂಭವಿಸಿದ್ದು, ಕಲ್ಲಿದ್ದಲು ಸಾಗಾಣಿಕೆಯ ಯಂತ್ರ ಹೊತ್ತಿ ಉರಿದಿರುವ ಘಟನೆ ನಡೆದಿದೆ.
ಕೂಡಗಿ ಬಳಿಯ ಎನ್ ಟಿಪಿಸಿ ಉಷ್ಣ ವಿದ್ಯುತ್ ಸ್ಥಾವರದಲ್ಲಿ ಕಲ್ಲಿದ್ದಲು ಘಟಕದ ಬಳಿ ಕಲ್ಲಿದ್ದಲು ಸಾಗಾಣಿಕೆಯ ಯಂತ್ರದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಯಂತ್ರ ಹೊತ್ತಿ ಉರಿದಿದೆ. ಮಾಹಿತಿ ತಿಳಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಘಟನೆಯಲ್ಲಿ ಯಾವುದೇ ಸಾವು-ನೋವಿನ ವರದಿಯಾಗಿಲ್ಲ ಪೊಲೀಸ್ ಮೂಲಗಳು ತಿಳಿಸಿವೆ.
ಶುಕ್ರವಾರ ಬೆಳಿಗ್ಗೆ 8.40 ರ ಸುಮಾರಿಗೆ ಆಕಸ್ಮಿಕ ಅವಘಡ ಸಂಭವಿಸಿದೆ. ದುರಂತ ನಡೆದು ಗಂಟೆ ಮೇಲಾದರೂ ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿಯೇ ಇರಲಿಲ್ಲ. ಹೀಗಾಗಿ ಕೇಂದ್ರ ಸರ್ಕಾರಿ ಒಡೆತನದ ಬೃಹತ್ ವಿದ್ಯುತ್ ಉತ್ಪನ್ನ ಘಟಕದಲ್ಲಿ ಸುರಕ್ಷತೆಯ ಪ್ರಶ್ನೆ ಎದ್ದಿದೆ. ಇಲ್ಲಿ ಕಾರ್ಯ ನಿರ್ವಹಿಸುವ ತುರ್ತು ಸ್ಪಂದನಾ ತಂಡ ವಿಭಾಗದ ಕೆಲಸದ ಬಗ್ಗೆ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.