ಭೋಪಾಲ್: ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಿಂದ ನವದೆಹಲಿಗೆ ತೆರಳುತ್ತಿದ್ದ ವಂದೇ ಭಾರತ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ರಾಣಿ ಕಮಲಾಪತಿ-ಹಜರತ್ ನಿಜಾಮುದ್ದೀನ್ ವಂದೇ ಭಾರತ್ ರೈಲಿನ ಸಿ-12 ಕೋಚ್‌ನ ಒಂದು ಬೋಗಿಯ ಬ್ಯಾಟರಿ ಬಾಕ್ಸ್‌ನಲ್ಲಿ ಸೋಮವಾರ ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ಹಿರಿಯ ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇದನ್ನೂ ಓದಿ:ಮಧ್ಯಪ್ರದೇಶದಲ್ಲಿ ಹಳಿ ತಪ್ಪಿದ ಎಲ್‌ಪಿಜಿ ಸಾಗಿಸುತ್ತಿದ್ದ ಗೂಡ್ಸ್ ರೈಲು: ತಪ್ಪಿದ ಭಾರಿ ಅನಾಹುತ
ಅವಘಡ ಸಂಭವಿಸಿದಾಗ ಕೋಚ್‌ನಲ್ಲಿದ್ದ 20-22 ಪ್ರಯಾಣಿಕರನ್ನು ತಕ್ಷಣವೇ ಬೇರೆ ಕೋಚ್ ಗಳಿಗೆ ಸ್ಥಳಾಂತರಿಸಲಾಗಿದ್ದು, ಘಟನೆಯಿಂದ ಯಾವುದೇ ಪ್ರಾಣಹಾನಿಯಾಗಿಲ್ಲ. ಘಟನೆ ಗೊತ್ತಾಗುತ್ತಿದ್ದಂತೆ ತಕ್ಷಣ ರೈಲು ನಿಲ್ಲಿಸಿ ಪ್ರಯಾಣಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಳಿಗ್ಗೆ 6.45 ರ ಸುಮಾರಿನಲ್ಲಿ ಈ ಘಟನೆ ಸಂಭವಿಸಿದೆ. ರಾಣಿ ಕಮಲಾಪತಿ-ಹಜರತ್ ನಿಜಾಮುದ್ದೀನ್ ವಂದೇ ಭಾರತ್ ರೈಲಿನ ಸಿ-12 ಕೋಚ್‌ನ ಬ್ಯಾಟರಿ ಬಾಕ್ಸ್‌ನಲ್ಲಿ ಬೆಂಕಿಯನ್ನು ಕೆಲ ರೈಲು ಸಿಬ್ಬಂದಿ ಗಮನಿಸಿದ ನಂತರ ತಕ್ಷಣವೇ ವಿದಿಶಾ ಜಿಲ್ಲೆಯ ಕುರ್ವೈ ಮತ್ತು ಕೈಥೋರಾ ನಿಲ್ದಾಣಗಳ ನಡುವೆ ನಿಲ್ಲಿಸಲಾಯಿತು ಎಂದು ಹೇಳಿದರು.
ನೋಡನೋಡುತ್ತಿದ್ದಂತೆ ಬೆಂಕಿ ಹೊತ್ತಿಕೊಂಡು ಉರಿಯಲು ಪ್ರಾರಂಭಿಸಿದೆ. ಸಿ-14 ಕೋಚ್‌ನಲ್ಲಿ ಸುಮಾರು 36 ಪ್ರಯಾಣಿಕರಿದ್ದರು. ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ಎಲ್ಲ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ. ಅಗ್ನಿಶಾಮಕ ವಾಹನಗಳು ತಕ್ಷಣವೇ ಬೆಂಕಿಯನ್ನು ಹತೋಟಿಗೆ ತರಲಾಗಿವಲ್ಲಿ ಯಶಸ್ವಿಯಾಗಿದ್ದು ರೈಲ್ವೆ ಸಿಬ್ಬಂದಿ ದುರಸ್ತಿ ಕಾರ್ಯ ನಡೆಸುತ್ತಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.