ಭೋಪಾಲ್-ದೆಹಲಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ; ಪ್ರಯಾಣಿಕರು ಸುರಕ್ಷಿತ

Please follow and like us:

ಭೋಪಾಲ್: ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಿಂದ ನವದೆಹಲಿಗೆ ತೆರಳುತ್ತಿದ್ದ ವಂದೇ ಭಾರತ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ರಾಣಿ ಕಮಲಾಪತಿ-ಹಜರತ್ ನಿಜಾಮುದ್ದೀನ್ ವಂದೇ ಭಾರತ್ ರೈಲಿನ ಸಿ-12 ಕೋಚ್‌ನ ಒಂದು ಬೋಗಿಯ ಬ್ಯಾಟರಿ ಬಾಕ್ಸ್‌ನಲ್ಲಿ ಸೋಮವಾರ ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ಹಿರಿಯ ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ:ಮಧ್ಯಪ್ರದೇಶದಲ್ಲಿ ಹಳಿ ತಪ್ಪಿದ ಎಲ್‌ಪಿಜಿ ಸಾಗಿಸುತ್ತಿದ್ದ ಗೂಡ್ಸ್‌ ರೈಲು: ತಪ್ಪಿದ ಭಾರಿ ಅನಾಹುತ

ಅವಘಡ ಸಂಭವಿಸಿದಾಗ ಕೋಚ್‌ನಲ್ಲಿದ್ದ 20-22 ಪ್ರಯಾಣಿಕರನ್ನು ತಕ್ಷಣವೇ ಬೇರೆ ಕೋಚ್ ಗಳಿಗೆ ಸ್ಥಳಾಂತರಿಸಲಾಗಿದ್ದು, ಘಟನೆಯಿಂದ ಯಾವುದೇ ಪ್ರಾಣಹಾನಿಯಾಗಿಲ್ಲ. ಘಟನೆ ಗೊತ್ತಾಗುತ್ತಿದ್ದಂತೆ ತಕ್ಷಣ ರೈಲು ನಿಲ್ಲಿಸಿ ಪ್ರಯಾಣಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಳಿಗ್ಗೆ 6.45 ರ ಸುಮಾರಿನಲ್ಲಿ ಈ ಘಟನೆ ಸಂಭವಿಸಿದೆ. ರಾಣಿ ಕಮಲಾಪತಿ-ಹಜರತ್ ನಿಜಾಮುದ್ದೀನ್ ವಂದೇ ಭಾರತ್ ರೈಲಿನ ಸಿ-12 ಕೋಚ್‌ನ ಬ್ಯಾಟರಿ ಬಾಕ್ಸ್‌ನಲ್ಲಿ ಬೆಂಕಿಯನ್ನು ಕೆಲ ರೈಲು ಸಿಬ್ಬಂದಿ ಗಮನಿಸಿದ ನಂತರ ತಕ್ಷಣವೇ ವಿದಿಶಾ ಜಿಲ್ಲೆಯ ಕುರ್ವೈ ಮತ್ತು ಕೈಥೋರಾ ನಿಲ್ದಾಣಗಳ ನಡುವೆ ನಿಲ್ಲಿಸಲಾಯಿತು ಎಂದು ಹೇಳಿದರು.

ನೋಡನೋಡುತ್ತಿದ್ದಂತೆ ಬೆಂಕಿ ಹೊತ್ತಿಕೊಂಡು ಉರಿಯಲು ಪ್ರಾರಂಭಿಸಿದೆ. ಸಿ-14 ಕೋಚ್‌ನಲ್ಲಿ ಸುಮಾರು 36 ಪ್ರಯಾಣಿಕರಿದ್ದರು. ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ಎಲ್ಲ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ. ಅಗ್ನಿಶಾಮಕ ವಾಹನಗಳು ತಕ್ಷಣವೇ ಬೆಂಕಿಯನ್ನು ಹತೋಟಿಗೆ ತರಲಾಗಿವಲ್ಲಿ ಯಶಸ್ವಿಯಾಗಿದ್ದು ರೈಲ್ವೆ ಸಿಬ್ಬಂದಿ ದುರಸ್ತಿ ಕಾರ್ಯ ನಡೆಸುತ್ತಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

Please follow and like us:
Donate Janashakthi Media

Leave a Reply

Your email address will not be published. Required fields are marked *