ಹೊಸಪೇಟೆ: ವಿಜಯನಗರ ಜಿಲ್ಲೆಯ ಹೊಸಪೇಟೆಯ ರಾಹೆ 50ರ ಪಕ್ಕದಲ್ಲಿರೋ ತುಂಗಭದ್ರಾ ಡ್ಯಾಂ ಬಳಿಯ ಗುಡ್ಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಇದೀಗ ಆತಂಕಕ್ಕೆ ಕಾರಣವಾಗಿದೆ.
ಟಿಬಿ ಡ್ಯಾಂ ಹತ್ತಿರದ ಗುಡ್ಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕೆನ್ನಾಲಿಗೆಗೆ ಗುಡ್ಡ ಧಗಧಗನೆ ಹೊತ್ತಿ ಉರಿದಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ.
ಇದನ್ನೂ ಓದಿ: ಜೈಪುರ| ಕುಂಬಾರನಿಗೆ 13 ಕೋಟಿ ರೂ ಠೇವಣಿ ಇಡುವಂತೆ ನೋಟಿಸ್
ಈ ಕುರಿತು ಪರಿಶೀಲಿಸಿರುವ ಅರಣ್ಯಾಧಿಕಾರಿಗಳು ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿರಬಹುದು ಅಥವಾ ಬೀಡಿ, ಸಿಗರೇಟ್ ಕಿಡಿ ಬಿದ್ದಿರಬಹುದೆಂದು ಶಂಕಿಸಿದ್ದಾರೆ.
ಇದನ್ನೂ ನೋಡಿ: “ಛಾವಾ” ಸಿನಿಮಾದಲ್ಲಿನ ಸುಳ್ಳುಗಳು! Janashakthi Media