ಹೈದರಾಬಾದ್: ಆಂಧ್ರಪ್ರದೇಶದ ಅನಕಾಪಲ್ಲಿ ಜಿಲ್ಲೆಯಲ್ಲಿರುವ ಕೈಗಾರಿಕಾ ಘಟಕದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿ, ಇಬ್ಬರು ಸಾವನ್ನಪ್ಪಿರುವ ದುರ್ಘಟನೆ ವರದಿಯಾಗಿದೆ.
ದಕ್ಷಿಣ ಎನರ್ಜಿ ಇಂಡಸ್ಟ್ರಿ ಕಾರ್ಖಾನೆಯಲ್ಲಿ ಹೊತ್ತಿಕೊಂಡ ಬೆಂಕಿ ಕ್ಷಣಾರ್ಧದಲ್ಲೇ ವ್ಯಾಪಿಸಿ, ಸಂಪೂರ್ಣ ಘಟಕವನ್ನು ಆವರಿಸಿದೆ. ಪರಿಣಾಮವಾಗಿ ಕಾರ್ಖಾನೆ ಭಾಗಶಃ ಸುಟ್ಟುಹೋಗಿದ್ದು, ಘಟನಾ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಇದನ್ನೂ ಓದಿ: ಕೆಪಿಸಿಸಿ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್ ಪದಗ್ರಹಣ: ಮಹಿಳೆಯರಿಗೆ 33% ಮೀಸಲು ಘೋಷಣೆ
ಅಗ್ನಿ ಅವಘಡದ ವೇಳೆ ಹಲವರು ಒಳಗೆ ಸಿಲುಕಿಕೊಂಡಿರುವ ಸಾಧ್ಯತೆ ಇದ್ದು, ಅವರನ್ನು ರಕ್ಷಿಸಲು ತುರ್ತು ಕಾರ್ಯಾಚರಣೆ ಮುಂದುವರಿದಿದೆ.
ಸೂಚನೆ ದೊರಕುತ್ತಿದ್ದಂತೆಯೇ ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಿಯಂತ್ರಣಕ್ಕೆ ಹರಸಾಹಸ ಪಡುತ್ತಿವೆ. ಅವಘಡಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ನೋಡಿ: ಕಾಂಗ್ರೆಸ್ ಸರ್ಕಾರಕ್ಕೆ 3 ವರ್ಷ | ಮಹಿಳಾ ಮತ್ತು ಮಕ್ಕಳ ಕಲ್ಯಾಣ: ಘೋಷಣೆ ಎಷ್ಟು? ಸಾಧನೆ ಎಷ್ಟು? Janashakthi Media
