ವಾಷಿಂಗ್ಟನ್: ಎರಡು ಪ್ರತ್ಯೇಕ ಘಟನೆಯಲ್ಲಿ ಗುಂಡಿನ ದಾಳಿ ಸಂಭವಿಸಿದ್ದು, ಒಟ್ಟು ಆರು ಮಂದಿ ಸಾವಿಗೀಡಾಗಿರುವ ಘಟನೆ ಅಮೆರಿಕದ ಹೂಸ್ಟನ್ ನಲ್ಲಿರುವ ಡೆಟ್ರಾಯಿಟ್ ನಗರದಲ್ಲಿ ಸಂಭವಿಸಿದೆ ಎಂದು ವರದಿಯಾಗಿದೆ.
ಮೊದಲ ಘಟನೆಯಲ್ಲಿ ಒಟ್ಟು ನಾಲ್ವರ ಮೇಲೆ ಗುಂಡಿನ ದಾಳಿ ನಡೆದಿದ್ದು, ಐವರು ಬಾಡಿಗೆದಾರರ ಮೇಲೆ ಗುಂಡು ಹಾರಿಸಲಾಗಿದ್ದು ಅದರಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ 3 ಮಂದಿ ಮೃತಪಟ್ಟಿದ್ದಾರೆ. ನಾಲ್ಕನೇ ವ್ಯಕ್ತಿ ಸದ್ಯ ಬದುಕುಳಿದಿದ್ದು, ತುರ್ತು ಚಿಕಿತ್ಸೆಯನ್ನು ಒದಗಿಸಲಾಗುತ್ತಿದೆ.
ಮತ್ತೊಂದು ಘಟನೆಯೊಂದರಲ್ಲಿ ಬಂದೂಕುಧಾರಿಗಳು ಸ್ಥಳೀಯ ಮನೆಗಳಿಗೆ ಬೆಂಕಿ ಹಚ್ಚಿದ್ದಾರೆ. ನಿವಾಸಿಗಳು ಪ್ರಾಣಾಪಾಯದಿಂದ ತಪ್ಪಿಸಿಕೊಳ್ಳುವ ಸಂದರ್ಭದಲ್ಲಿ ಗುಂಡು ಹಾರಿಸಿದ ಬಂದೂಕುಧಾರಿಗಳು ಮೂವರನ್ನು ಕೊಂದಿದ್ದಾರೆ ಅವರಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದರೆ, ಒಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಎಂದು ವರದಿಯಾಗಿದೆ. ಬಳಿಕ ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ.
ಮೊದಲ ಘಟನೆಗೆ ಸಂಬಂಧಿಸಿ ಡೆಟ್ರಾಯಿಟ್ ನಗರದಲ್ಲಿ ಪೊಲೀಸರು ಗುಂಡು ಹಾರಿಸಿದ ಆರೋಪದ ಮೇಲೆ ಶಂಕಿತ ವ್ಯಕ್ತಿಯನ್ನು ಬಂಧಿಸಲು ಶೋಧ ಕಾರ್ಯ ಆರಂಭಿಸಿದ್ದಾರೆ. ಶಂಕಿತ ವ್ಯಕ್ತಿಯ ಬಗ್ಗೆ ತಿಳಿದವರು ಮಾಹಿತಿ ನೀಡಬೇಕೆಂದು ಸ್ಥಳೀಯರಲ್ಲಿ ಮನವಿ ಮಾಡಿದ್ದಾರೆ. ಆರೋಪಿ ಮತ್ತೆ ಗುಂಡಿನ ದಾಳಿ ನಡೆಸಲು ಪ್ರಯತ್ನಿಸುವ ಸಾಧ್ಯತೆ ಇರುವುದರಿಂದ ಪ್ರದೇಶದಲ್ಲಿ ಕಣ್ಗಾವಲು ಹೆಚ್ಚಿಸಲಾಗಿದೆ.
ಈ ನಡುವೆ ರಾಜಧಾನಿ ವಾಷಿಂಗ್ಟನ್‌ನಲ್ಲೂ ಎನ್‌ಎಫ್‌ಎಲ್ ಫುಟ್‌ಬಾಲ್ ಆಟಗಾರನ ಮೇಲೆ ಗುಂಡು ಹಾರಿಸಿರುವುದಾಗಿ ವರದಿಗಳು ತಿಳಿಸಿವೆ. ಸದ್ಯ ಅವರ ಸ್ಥಿತಿ ಸ್ಥಿರವಾಗಿದೆ ಎನ್ನಲಾಗಿದೆ.
ಅಮೆರಿಕದಲ್ಲಿ ಬಂದೂಕು ನಿಯಂತ್ರಣ ಕಾನೂನು ಜಾರಿಗೆ ಬಂದ ನಂತರವೂ ಆಗಾಗ ಗುಂಡಿನ ದಾಳಿಗಳು ನಡೆಯುತ್ತಲೇ ಇವೆ. ವಿಶ್ವದ ಅತ್ಯಂತ ಶಕ್ತಿಶಾಲಿ ರಾಷ್ಟ್ರದಲ್ಲಿ ಇಂತಹ ಘಟನೆಗಳು ಸಾಮಾನ್ಯವಾಗಿವೆ. ಆದರೆ ಜೋ ಬಿಡೆನ್ ಸರ್ಕಾರಕ್ಕೆ ಅದನ್ನು ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ ಏಕೆ ಎಂಬುದು ಪ್ರಶ್ನೆ ಎದ್ದಿದೆ. ಪ್ರತಿ ಗುಂಡಿನ ಘಟನೆಯ ನಂತರ, ದಾಳಿಕೋರನನ್ನು ಹಿಡಿಯಲಾಗುತ್ತದೆ, ಅವನ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುತ್ತದೆ, ಆದರೂ ಯಾರಿಗೂ ಭಯವಿಲ್ಲ. ಈ ವರ್ಷ ಅಮೆರಿಕದಲ್ಲಿ 300ಕ್ಕೂ ಹೆಚ್ಚು ಗುಂಡಿನ ದಾಳಿ ಸಂಭವಿಸಿದ ಘಟನೆಗಳು ವರದಿಯಾಗಿವೆ.