ಪುಣೆ ಕೋರ್ಟ್ ಬಳಿ ಗುಂಡಿನ ದಾಳಿ: ಮಹಾರಾಷ್ಟ್ರ ಸರ್ಕಾರದ ವಿರುದ್ಧ ಆದಿತ್ಯ ಠಾಕ್ರೆ ವಾಗ್ದಾಳಿ

Please follow and like us:
ಮುಂಬೈ: ಮಹಾರಾಷ್ಟ್ರದ ಪುಣೆ ಜಿಲ್ಲಾ ನ್ಯಾಯಾಲಯದ ಹೊರಗೆ ಹಾಡಹಗಲೇ ನಡೆದ ಗುಂಡಿನ ದಾಳಿ ಮತ್ತು ಚಾಕು ಇರಿತ ಪ್ರಕರಣ ರಾಜಕೀಯ ವಾಗ್ದಾಳಿಗೆ ಕಾರಣವಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಶಿವಸೇನೆ (ಯುಬಿಟಿ) ನಾಯಕ ಆದಿತ್ಯ ಠಾಕ್ರೆ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ವಿರುದ್ಧ ಟೀಕಿಸಿದ್ದಾರೆ. ಠಾಕ್ರೆ ವಾಗ್ದಾಳಿ

ಪೊಲೀಸರು ಸಾರ್ವಜನಿಕರ ಸುರಕ್ಷತೆ ಕಡೆಗೆ ಗಮನ ಹರಿಸುವ ಬದಲು ಪ್ರತಿಭಟನಾಕಾರರ ವಿರುದ್ಧ ಕ್ರಮ ಕೈಗೊಳ್ಳುವುದರಲ್ಲಿ ನಿರತರಾಗಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಮುಂಬೈನಲ್ಲಿ ಭದ್ರತಾ ವ್ಯವಸ್ಥೆ ಕುರಿತು ಮಾತನಾಡಿದ ಠಾಕ್ರೆ, ನಗರಗಳಲ್ಲಿ ಗುಂಡು ನಿರೋಧಕ ಗಾಜಿನ ಹಿಂದೆ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಎನ್‌ಸಿಪಿ (ಶರದ್‌ಚಂದ್ರ ಪವಾರ್) ಸಂಸದೆ ಸುಪ್ರಿಯಾ ಸುಳೆ ಕೂಡ ಪುಣೆಯ ಕಾನೂನು ಸುವ್ಯವಸ್ಥೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮುಂದಿನ ಮೂರರಿಂದ ಆರು ತಿಂಗಳೊಳಗೆ ನಗರದಲ್ಲಿ ಭದ್ರತೆ ಸುಧಾರಿಸುವಂತೆ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರದ ಗೋಕುಲ್‌ ಡೈರಿ: ಮತಕಳ್ಳತನದ ಕತೆ

ಇನ್ನೊಂದೆಡೆ, ಶಿವಸೇನೆ ನಾಯಕಿ ಶೈನಾ ಎನ್‌ಸಿ ಘಟನೆ ಖಂಡಿಸಿದರೂ, ಪ್ರತಿಪಕ್ಷಗಳು ಗ್ಯಾಂಗ್‌ವಾರ್ ಪ್ರಕರಣವನ್ನು ರಾಜಕೀಯಗೊಳಿಸುತ್ತಿವೆ ಎಂದು ಆರೋಪಿಸಿದ್ದಾರೆ. ಪೊಲೀಸರು ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನು ಗುರುತಿಸಿ ಎರಡು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಎಐಎಂಐಎಂ ನಾಯಕ ವಾರಿಸ್ ಪಠಾಣ್ ಕೂಡ ರಾಜ್ಯದ ಕಾನೂನು ಸುವ್ಯವಸ್ಥೆ ಬಗ್ಗೆ ಪ್ರಶ್ನೆ ಎತ್ತಿದ್ದಾರೆ. ಹಾಡಹಗಲೇ ಗುಂಡಿನ ದಾಳಿ ನಡೆಯುತ್ತಿದ್ದರೂ ಅಪರಾಧಿಗಳಿಗೆ ಪೊಲೀಸರ ಭಯ ಇಲ್ಲದಂತಾಗಿದೆ ಎಂದು ಟೀಕಿಸಿದ್ದಾರೆ. ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಪೊಲೀಸರ ಮಾಹಿತಿ ಪ್ರಕಾರ, ಬುಧವಾರ ಪುಣೆಯ ಶಿವಾಜಿನಗರ ನ್ಯಾಯಾಲಯದ ಆವರಣದ ಹೊರಗೆ ಮಂದಾರ್ ಕಿವ್ಡೆ ಎಂಬ ವ್ಯಕ್ತಿಯ ಮೇಲೆ ಕನಿಷ್ಠ ನಾಲ್ವರು ದಾಳಿ ನಡೆಸಿದ್ದಾರೆ. ಗುಂಡಿನ ದಾಳಿ ನಡೆಸುವುದರ ಜೊತೆಗೆ ಚಾಕುವಿನಿಂದಲೂ ಹಲ್ಲೆ ಮಾಡಲಾಗಿದೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ  ನೋಡಿ: ಬೆಲೆ ಏರಿಕೆ ಬರೆ: ಕಾಂಗ್ರೆಸ್ ಸರ್ಕಾರಕ್ಕೆ CPI(M) ಖಡಕ್ ಎಚ್ಚರಿಕೆ! Janashakthi Media

Please follow and like us:
Donate Janashakthi Media

Leave a Reply

Your email address will not be published. Required fields are marked *