ನವದೆಹಲಿ: ಇಂದಿನಿಂದ ದೇಶದಲ್ಲಿ ಹೊಸ ಕಾನೂನು ನಿಯಮಗಳು ಜಾರಿಯಾಗಿದ್ದು, ಭಾರತೀಯ ದಂಡ ಸಂಹಿತೆಯ ಬದಲು ಭಾರತೀಯ ನ್ಯಾಯ ಸಂಹಿತೆಯನ್ನು ಅನುಷ್ಠಾನಗೊಳಿಸಲಾಗಿದೆ.
ಇದು ಜಾರಿಯಾದ ಬೆನ್ನಲ್ಲೇ ಭಾರತೀಯ ನ್ಯಾಯ ಸಂಹಿತೆ ಅಡಿ ಮೊದಲ ಪ್ರಕರಣ ದಾಖಲಾಗಿದೆ. ಬ್ರಿಟಿಷರ ಕಾಲದ ದಂಡ ಕಾನೂನುಗಳನ್ನು ಬದಲಿಸಿ, ದೆಹಲಿಯ ಕಮಲಾ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್‌ನ ಮೊದಲ ಎಫ್‌ಐಆರ್ ದಾಖಲಿಸಲಾಗಿದೆ. ನಿಯಮ ಬಾಹಿರವಾಗಿ ದೆಹಲಿ ರೈಲ್ವೇ ಮೇಲ್ಸೇತುವೆಯಲ್ಲಿ ವ್ಯಾಪಾರ ನಡೆಸಿದ್ದಕ್ಕಾಗಿ ಬೀದಿಬದಿ ವ್ಯಾಪಾರಿಯೊಬ್ಬನ ಮೇಲೆ ಬಿಎನ್‌ಎಸ್ ಸೆಕ್ಷನ್ 285ರ ಅಡಿ ಪ್ರಕರಣ ದಾಖಲಿಸಲಾಗಿದೆ.
ಇದನ್ನೂ ಓದಿ: ಅತ್ಯಾಚಾರ ಪ್ರಕರಣ : ಜುಲೈ 8ರವರೆಗೆ ನ್ಯಾಯಾಂಗ ಬಂಧನಕ್ಕೆ ಪ್ರಜ್ವಲ್ ರೇವಣ್ಣ
ಕೇಂದ್ರ ಸರ್ಕಾರ ರೂಪಿಸಿರುವ ಮೂರು ಹೊಸ ಅಪರಾಧ ಕಾನೂನುಗಳು ಇಂದು ಜುಲೈ 1ರಿಂದ ಜಾರಿಗೆ ಬಂದಿವೆ.
ಆತನ ತಾತ್ಕಾಲಿಕ ಅಂಗಡಿಯು ರಸ್ತೆಯಲ್ಲಿ ಸಂಚಾರಕ್ಕೆ ಅಡ್ಡಿ ಉಂಟುಮಾಡುತ್ತಿತ್ತು. ಅದನ್ನು ತೆರವುಗೊಳಿಸುವಂತೆ ಪದೇ ಪದೇ ಆತನಿಗೆ ಸೂಚನೆ ನೀಡಲಾಗಿತ್ತು. ಆದರೆ ಆತ ಅದಕ್ಕೆ ಕಿವಿಗೊಡದ ಕಾರಣ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನೂ ಬೀದಿ ಬದಿ ವ್ಯಾಪಾರಿಗಳಿಗೆ ನಿರ್ಧಿಷ್ಟ ಜಾಗವನ್ನು ನೀಡದಿರುವುದು ಆಳುವ ಸರ್ಕಾರಗಳ ತಪ್ಪು, ಮಳಿಗೆಯಂತಹ ಕಡೆ ಹಣ ನೀಡಿ ವ್ಯಾಪಾರ ಮಾಡಲು ಅವರು ಶಕ್ತರಾಗಿರುವುದಿಲ್ಲ. ಹಾಗಾಗಿ ಬದಲಿ ವ್ಯವಸ್ಥೆ ರೂಪಿಸಬೇಕೆ ಹೊರತು ಪ್ರಕರಣ ದಾಖಲಿಸುವುದು ಅಲ್ಲ ಎಂದು ಸಾರ್ವಜನಿಕರು ಆಕ್ರೋಶ ಹೊರ ಹಾಕಿದ್ದಾರೆ.
ಇದನ್ನೂ ನೋಡಿ: ಅಂಗನವಾಡಿಗಳಲ್ಲಿ LKG – UKG – ಯಾರಿಗೂ ಆತಂಕ ಬೇಡJanashakthi Media