ಕೈ ಅಭ್ಯರ್ಥಿಗಳ ಮೊದಲ ಪಟ್ಟಿ ನಾಳೆ ಬಿಡುಗಡೆ : ಡಿ.ಕೆ.ಶಿವಕುಮಾರ್‌

ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನ ನೂರಕ್ಕೂ ಹೆಚ್ಚು ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದರು.

ಅಮಾವಾಸ್ಯೆ ಪೂಜೆ ಅಂಗವಾಗಿ ನಾಗಮಂಗಲ ತಾಲ್ಲೂಕು ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದ್ದ ಅವರು ಡಾ.ನಿರ್ಮಲಾನಂದನಾಥ ಸ್ವಾಮೀಜಿ ಜೊತೆ ಮಾತುಕತೆ ನಡೆಸಿ ನಂತರ ಸುದ್ದಿಗಾರರ ಜೊತೆ ಮಾತನಾಡಿದರು.

“100 ಕ್ಕೂ ಹೆಚ್ಚು ಜನರ ಮೊದಲ ಪಟ್ಟಿಯು ಬುಧವಾರ (ಮಾರ್ಚ್ 22 ರಂದು) ಬಿಡುಗಡೆಯಾಗಲಿದೆ. ಈ ವರ್ಷ ರಾಜ್ಯದಲ್ಲಿ ದೊಡ್ಡ ಬದಲಾವಣೆ ಆಗಲಿದೆ. ಎಲ್ಲರಿಗೂ ಒಳ್ಳೆಯದಾಗಲಿ ಎಂದು ಪ್ರಾರ್ಥಿಸಿ ಅಮಾವಾಸ್ಯೆ ಪೂಜೆಯಲ್ಲಿ ಪಾಲ್ಗೊಂಡಿದ್ದೇನೆ” ಎಂದು ಹೇಳಿದರು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕರ್ನಾಟಕಕ್ಕೆ ಭೇಟಿ ನೀಡಿ ದೆಹಲಿಗೆ ವಾಪಸ್ ಆದ ಮೇಲೆ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಹೇಳಲಾಗಿತ್ತು. ಅದರಂತೆ ನಾಳೆ ಅಂದರೆ ಯುಗಾದಿ ದಿನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

‘ಸಿದ್ದರಾಮಯ್ಯ ಅವರು ಬಯಸಿದ ಕ್ಷೇತ್ರದಲ್ಲಿ ಸ್ಪರ್ಧಿಸಲು ಅವಕಾಶವಿದೆ. ಕೋಲಾರ, ವರುಣ, ಬಾದಾಮಿ, ಚಾಮುಂಡೇಶ್ವರಿ ಕ್ಷೇತ್ರ ಯಾವುದಾದರೂ ಆಯ್ಕೆ ಮಾಡಿಕೊಳ್ಳಲಿ. ಡಿ.ಕೆ.ಸುರೇಶ್‌ಅವರಿಗೆ ಸಂಸದರಾಗಿಯೇ ಉಳಿಯುವ ಇಚ್ಛೆ ಇದೆ. ಯಾರೇ ಅಭ್ಯರ್ಥಿಯಾದರೂ ಡಿ.ಕೆ.ಶಿವಕುಮಾರ್, ಡಿ.ಕೆ.ಸುರೇಶ್‌ಅವರೇ ಅಭ್ಯರ್ಥಿ ಎಂದು ಮತ ಕೇಳಿ ಗೆಲ್ಲಿಸಿಕೊಂಡು ಬರುತ್ತೇವೆ’ ಎಂದು ಹೇಳಿದರು.

ಇದನ್ನೂ ಓದಿ : ಮುಂದಿನ ವಾರ ಕಾಂಗ್ರೆಸ್‌ ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆಗೆ ಸಿದ್ಧತೆ : ಮಾ.15 ರಂದು ಮಹತ್ವದ ಸಭೆ

‘ಚಿಂಚನಸೂರು ಸ್ವಲ್ಪ ಬದಲಾವಣೆಯಾಗಿ ಪಕ್ಷ ಬಿಟ್ಟಿದ್ದರು. ಈಗ ಮತ್ತೆ ಕಾಂಗ್ರೆಸ್‌ಸೇರಿದ್ದಾರೆ. ಬೇಕಾದಷ್ಟು ಜನರು ನಮ್ಮ ಪಕ್ಷದಿಂದ ಬಿಜೆಪಿಗೆ ಹೋಗಿದ್ದಾರೆ, ಅಲ್ಲಿಂದ ನಮ್ಮಲ್ಲಿಗೆ ಬಂದಿದ್ದಾರೆ. ರಾಜಕೀಯದಲ್ಲಿ ಇವೆಲ್ಲ ಸರ್ವೇ ಸಾಮಾನ್ಯ’ ಎಂದು ತಿಳಿಸಿದರು.

‘ನಟಿ ರಮ್ಯಾ ಸರ್ಧೆ ವಿಚಾರವನ್ನು ಅವರನ್ನೇ ಕೇಳಬೇಕು. ಸಚಿವ ಕೆ.ಸಿ.ನಾರಾಯಣಗೌಡ ಕಾಂಗ್ರೆಸ್‌ಸೇರುವ ಬಗ್ಗೆ ನಾನು ಪ್ರತಿಕ್ರಿಯಿಸುವುದಿಲ್ಲ’ ಎಂದರು.

Donate Janashakthi Media

Leave a Reply

Your email address will not be published. Required fields are marked *