ಬೆಂಗಳೂರು : ಬೆಂಗಳೂರು ನಗರದ ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಚೆಕಪ್‌ಗೆ ಎಸ್‌ಐಟಿ ಅಧಿಕಾರಿಗಳು ಕರೆದುಕೊಂಡು ಹೋಗಿದ್ದರು. ವೈದ್ಯಕೀಯ ತಪಾಸಣೆಯಲ್ಲಿ ಪ್ರಜ್ವಲ್ ಫಿಟ್ ಎಂಡ್ ಫೈನ್ ಆಗಿದ್ದಾರೆ ಎಂಬುದಾಗಿ ಆಸ್ಪತ್ರೆಯ ಮೂಲಗಳು ತಿಳಿಸಿವೆ.
ನಿನ್ನೆ ಮಧ್ಯರಾತ್ರಿ ಜರ್ಮನಿಯಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆಯೇ ಪ್ರಜ್ವಲ್ ರೇವಣ್ಣ ಅವರನ್ನು ಎಸ್‌ಐಟಿ ಬಂಧಿಸಿದ್ದು, ಇಂದು(ಮೇ 31) ಅವರನ್ನು ವೈದ್ಯಕೀಯ ತಪಾಸಣೆ ಮಾಡಿಸಿ ಬಳಿಕ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಿ ವಿಚಾರಣೆ ಅಗತ್ಯವಿರುವುದರಿಂದ ತಮ್ಮ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದೆ.
ಎಸ್‌ಐಟಿ ಮನವಿ ಪುರಸ್ಕರಿಸಿದ ಕೋರ್ಟ್, ಪ್ರಜ್ವಲ್ ರೇವಣ್ಣನನ್ನು ಏಳು ದಿನ ಎಸ್‌ಐಟಿ ಕಸ್ಟಡಿಗೆ ನೀಡಿ ಆದೇಶಿಸಿದೆ. ಎಸ್‌ಐಟಿ ಪರವಾಗಿ ಎಸ್‌ಪಿಪಿ ಅಶೋಕ್ ನಾಯಕ್ ಅವರು ವಾದ ಮಂಡಿಸಿದರೆ, ಪ್ರಜ್ವಲ್ ಪರ ಅರುಣ್ ವಾದ ಮಂಡಿಸಿದರು. ಫಿಟ್
ಎಸ್‌ಐಟಿ ಕಚೇರಿಯಲ್ಲೇ ರಾತ್ರಿ ಕಳೆದ ಪ್ರಜ್ವಲ್ ಅವರನ್ನು ಇಂದು ಬೆಳಗ್ಗೆ ವೈದ್ಯಕೀಯ ಪರೀಕ್ಷೆಗೆ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.
ವೈದ್ಯರು, ಬಿಪಿ, ಶುಗರ್, ಹಾರ್ಟ್ ಬೀಟ್, ಪಲ್ಸ್ ರೇಟ್, ಬಾಡಿ ಟೆಂಪರೇಚರ್, ಆಕ್ಸಿಜನ್ ಲೆವಲ್ ಚೆಕ್ ಮಾಡಿದ್ದಾರೆ. ಎಲ್ಲವೂ ನಾರ್ಮಲ್ ಇರುವುದಾಗಿ ರಿಪೋರ್ಟ್ ಬಂದಿದೆ.
ಇದನ್ನು ಓದಿ : ಹೆಚ್.ಡಿ.ರೇವಣ್ಣ ಜಾಮೀನು ಅರ್ಜಿ ರದ್ದು ಮಾಡುವಂತೆ ಕೋರ್ಟ್ ಮೊರೆ ಹೋದ ಎಸ್‌ಐಟಿ
ಒಟ್ಟಿನಲ್ಲಿ ಪ್ರಜ್ವಲ್ ರೇವಣ್ಣ ಅವರ ದೈಹಿಕ ಆರೋಗ್ಯ ನಾರ್ಮಲ್ ಆಗಿದ್ದು, ಯಾವುದೇ ಸಮಸ್ಯೆ ಇಲ್ಲ ಅಂತಾ ವೈದ್ಯರು ರಿಪೋರ್ಟ್ ಕೊಟ್ಟಿದ್ದಾರೆ ಬೌರಿಂಗ್ ಆಸ್ಪತ್ರೆಯ ವೈದ್ಯರ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
ಇದನ್ನು ನೋಡಿ : ಸರಣಿ ಲೈಂಗಿಕ ದೌರ್ಜನ್ಯ ನಡೆಸಿರುವ ಸಂಸದ ಪ್ರಜ್ವಲ್ ರೇವಣ್ಣ ಬಂಧನಕ್ಕೆ ಒತ್ತಾಯಿಸಿ ಸಹಸ್ರಾರು ಜನರಿಂದ ಬೃಹತ್ ಹೋರಾಟ