ಐದು ದಿನ ಮದ್ಯ ಮಾರಾಟ ನಿಷೇಧ

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಐದು ದಿನಗಳ ಕಾಲ ಮದ್ಯ ನಿಷೇಧವಾಗಲಿದೆ. ಬೆಂಗಳೂರಿನಲ್ಲಿ ಜೂನ್‌ 1 ರಿಂದ 5 ದಿನಗಳ ಕಾಲ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ಐದು

ಲೋಕಸಭಾ ಚುನಾವಣೆ ಹಾಗೂ ವಿಧಾನಪರಿಷತ್‌ ಚುನಾವಣೆಗಳ ಫಲಿತಾಂಶ ಹೊರಬೀಳಲಿರುವ ಹಿನ್ನೆಲೆ ಮದ್ಯ ಮಾರಾಟ ನಿಷೇಧ ಹೇರಲಾಗಿದೆ.

ಇದನ್ನೂ ಓದಿ: ಮತದಾರರ ಪಟ್ಟಿಯಲ್ಲಿ ಮುಸ್ಲಿಂ ಸಮುದಾಯಕ್ಕೆ ಸೇರಿದ ಕೆಲವರ ಹೆಸರೇ ಇಲ್ಲ

ಜೂನ್‌ 3 ರಂದು ಪದವೀಧರ ಕ್ಷೇತ್ರ ಚುನಾವಣೆಯ ಮತದಾನ ನಡೆಯಲಿದೆ. ಈ ಹಿನ್ನೆಲೆ ಜೂನ್‌ 1ರ ಸಂಜೆ 4 ಗಂಟೆಯಿಂದಲೇ ಬಾರ್‌ಗಳು ಬಂದ್‌ ಆಗಲಿವೆ. ಇದಾದ ಬಳಿಕ ಜೂನ್‌ 4 ರಂದು ದೇಶಾದ್ಯಂತ ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬೀಳಲಿದೆ.

ಈ ಹಿನ್ನೆಲೆ ಅಂದು ಕೂಡಾ ಮದ್ಯ ಮಾರಾಟ ಸಂಪೂರ್ಣ ಬಂದ್‌ ಆಗಲಿದೆ. ಜೂನ್‌ 6 ರಂದು ವಿಧಾನಪರಿಷತ್ತು ಚುನಾವಣೆಯ ಮತಎಣಿಕೆ ನಡೆಯಲಿದ್ದು, ಅಂದು ಕೂಡಾ ಬಾರ್‌ಗಳನ್ನು ಬಂದ್‌ ಮಾಡುವಂತೆ ಬೆಂಗಳೂರು ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಇದನ್ನೂ ನೋಡಿ: ಸಮಯಕ್ಕೆ ಸರಿಯಾಗಿ ಊಟ ಇಲ್ಲ, ಸೌಲಭ್ಯವೂ ಇಲ್ಲ : ಅಹೋರಾತ್ರಿ ವಿದ್ಯಾರ್ಥಿನಿಯರ ಪ್ರತಿಭಟನೆJanashakthi Media

Donate Janashakthi Media

Leave a Reply

Your email address will not be published. Required fields are marked *