ಬೆಂಗಳೂರು :ಕೆಲವೇ ಗಂಟೆಗಳಲ್ಲಿ 5 ಗ್ಯಾರಂಟಿ ಯೋಜನೆ’ಗಳನ್ನು ಜಾರಿ ಮಾಡುತ್ತೇವೆ ಎಂದು ರಾಹುಲ್ ಗಾಂಧಿ ಘೋಷಣೆ ಮಾಡಿದರು.
ಪ್ರಮಾಣ ವಚನ ಸ್ವೀಕಾರ ಸಮಾರಂಭದ ಬಳಿಕ ಮಾತನಾಡಿದ ರಾಹುಲ್ ಗಾಂಧಿ, ರಾಜ್ಯದ ಜನತೆಗೆ ನನ್ನ ಕಡೆಯಿಂದ ಹಾಗೂ ಕಾಂಗ್ರೆಸ್ ಪಕ್ಷದಿಂದ ಧನ್ಯವಾದಗಳನ್ನು ತಿಳಿಸುತ್ತೇನೆ. ನಿವೆಲ್ಲರೂ ಕಾಂಗ್ರೆಸ್ ಪಕ್ಷಕ್ಕೆ ಸಂಪೂರ್ಣವಾಗಿ ಬಹುಮತ ಬಂದಿದೆ. ನಾವು ಭ್ರಷ್ಟಾಚಾರ ಮುಕ್ತ ಸರ್ಕಾರವನ್ನು ನಡೆಸುತ್ತೇವೆ. ನಾವು ಕೊಟ್ಟ ಗ್ಯಾರಂಟಿ ಘೋಷಣೆಗಳನ್ನು ಜಾರಿಗೆ ತರುತ್ತೇವೆ ಎಂದು ಹೇಳಿದ್ದಾರೆ.
ಗೃಹಲಕ್ಷ್ಮಿ ಯೋಜನೆ – ಪ್ರತಿತಿಂಗಳು ಮಹಿಳೆಯರಿಗೆ 2 ಸಾವಿರ ರೂ. ಗೃಹಜ್ಯೋತಿ- 200 ಯುನಿಟ್ ವಿದ್ಯುತ್ ಉಚಿತ ಅನ್ನಭಾಗ್ಯ-10 ಕೆಜಿ ಅಕ್ಕಿ ಉಚಿತ, ಶಕ್ತಿ-ಮಹಿಳೆಯರಿಗೆ ಉಚಿತವಾಗಿ ಬಸ್ ಪ್ರಯಾಣ ಯುವನಿಧಿ- ಪದವಿಧರರಿಗೆ 3,000 ರೂ. ಡಿಪ್ಲೋಮಾ ಮಾಡಿದ ನಿರುದ್ಯೋಗಿಗಳಿಗೆ 1,500 ರೂ. ನೀಡುತ್ತೇವೆ ಎಂದರು.
ನಾವು ಕೊಟ್ಟ ಮಾತನ್ನು ನಾವು ಈಡೇರಿಸುತ್ತೇವೆ. ಮೊದಲ ಸಚಿವ ಸಂಪುಟ ಸಭೆ ನಡೆಯಲಿದ್ದು, ಇಂದಿನ ಸಂಪುಟದಲ್ಲೇ 5 ಗ್ಯಾರಂಟಿ ಯೋಜನೆ ಜಾರಿಗೆ ಬರಲಿವೆ ಎಂದು ಹೇಳಿದ್ದಾರೆ.