ಮಣಿಪುರ ಬೆತ್ತಲೆ ಮೆರವಣಿಗೆ  ಐವರು ಪೊಲೀಸರ ಅಮಾನತು

ಇಂಫಾಲ: ಮಣಿಪುರದಲ್ಲಿ ಮೇ 4 ರಂದು ಗುಂಪೊಂದು ಇಬ್ಬರು ಮಹಿಳೆಯರನ್ನು ನಗ್ನಗೊಳಿಸಿ ಮೆರವಣಿಗೆ ಮಾಡಿದ ಘಟನೆಗೆ ಸಂಬಂಧಿಸಿದಂತೆ ಆ ಪ್ರದೇಶದ ಠಾಣಾಧಿಕಾರಿ ಸೇರಿದಂತೆ ಐವರು ಪೊಲೀಸ್ ಸಿಬ್ಬಂದಿಯನ್ನು ಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಹೇಯ ಕೃತ್ಯದ ವಿಡಿಯೊ ಜುಲೈ 19ರಂದು ಸಾಮಾಜಿಕ ಮಾಧ್ಯಮಗಳಲ್ಲಿ ಕಾಣಿಸಿಕೊಂಡಿತ್ತು.ಮಣಿಪುರದಲ್ಲಿ ಕುಕಿ ಬುಡಕಟ್ಟು ಸಮುದಾಯದ ಮೂವರು ಮಹಿಳೆಯರುನ್ನು ಬೆತ್ತಲುಗೊಳಿಸಿ ಲೈಂಗಿಕ ದೌರ್ಜನ್ಯ ನಡಿಸಿದ ಮತ್ತು ಒಬ್ಬ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಕೃತ್ಯದ ದೇಶದ್ಯಾಂತ ಆಘಾತ ಮತ್ತು ಆಕ್ರೋಶ ವ್ಯಕ್ತವಾಗಿತ್ತು.

ಇದನ್ನೂ ಓದಿ:ಮಣಿಪುರ ಹಿಂಸಾಚಾರ | ಪೊಲೀಸ್ ಶಸ್ತ್ರಾಗಾರ ಲೂಟಿ ಮಾಡಿದ ದುಷ್ಕರ್ಮಿಗಳು!

ವಿರೋಧ ಪಕ್ಷಗಳ ನಾಯಕರುಗಳು ಸಹ ಮಣಿಪುರದಲ್ಲಿ ಶಾಂತಿ ಸ್ಥಾಪನೆಗೆ ಸರ್ಕಾರ ತಕ್ಷಣ ಕ್ರಮ ತೆಗೆದುಕೊಳ್ಳಬೇಕು ಎಂದು  ಒತ್ತಾಯಿಸಿದ್ದಾರೆ. ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಈ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು,ಕೇಂದ್ರ ಮತ್ತು ಮಣಿಪುರ ಸರ್ಕಾರವನ್ನು ಟೀಕಿಸಿದ್ದಾರೆ.

ಪ್ರಬಲ ವರ್ಗದ ಗುಂಪೊಂದು ಬಿಷ್ಣುಪುರದ ನರನ್ಸೇನಾದಲ್ಲಿರುವ ಎರಡನೇ ಭಾರತೀಯ ಮೀಸಲು ಪಡೆಯ (ಐಆರ್‌ಬಿ) ಕೇಂದ್ರ ಕಚೇರಿಗೆ  ನುಗ್ಗಿ ರೈಫಲ್‌, ಬುಲೆಟ್‌ಗಳನ್ನು ಸೇರಿದಂತೆ ಹಲವಾರು ಶಸ್ತ್ರಾಸ್ತ್ರಗಳನ್ನು ಕಳ್ಳತನ ಮಾಡಿತ್ತು ಈ ಪ್ರಕರಣ ಸಂಬಂಧ ತನಿಖೆ ತೀವ್ರಗೊಳಿಸಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *