ಖ್ಯಾತ ಆಹಾರ ತಜ್ಞ, ಚಿಂತಕ ಕೆ.ಸಿ.ರಘು ನಿಧನ

ಬೆಂಗಳೂರು :  ಖ್ಯಾತ ಆಹಾರ ತಜ್ಞ ಕೆ.ಸಿ. ರಘು ಅವರು ಅನಾರೋಗ್ಯದಿಂದ ಇಂದು ಬೆಳಗ್ಗೆ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಅವರು ಲಂಗ್ ಕ್ಯಾನ್ಸರ್ ನಿಂದ ಬಳಲುತ್ತಿದ್ದರು.

ಈ ಬಗ್ಗೆ ರಘು ಅವರ ಪತ್ನಿ ಆಶಾ ರಘು ಅವರು ತಮ್ಮ ಫೇಸ್‌ಬುಕ್‌ನಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, ಬೆಳಗಿನ ಜಾವ ಸುಮಾರು 7.30ಕ್ಕೆ ಕೆ.ಸಿ. ರಘು ನಿಧನರಾಗಿದ್ದಾರೆ ಎಂದು ತಿಳಿಸಿದ್ದಾರೆ. ಅಂತಿಮ ದರ್ಶನ ಮಾಡಲು ಇಚ್ಛಿಸುವವರು ದಾಸರಹಳ್ಳಿಯ ಅಮೃತನಗರದ ಮನೆಗೆ ಆಗಮಿಸುವಂತೆ ಮನವಿ ಮಾಡಿದ್ದಾರೆ. ಕೆ.ಸಿ.ರಘು


ಕೆ.ಸಿ. ರಘು ಅವರು ನಾಡಿನ ಹೆಸರಾಂತ ಆಹಾರ ತಜ್ಞರಾಗಿ ಸೇವೆ ಸಲ್ಲಿಸಿದ್ದರು. ಸರಣಿ ಕಾರ್ಯಕ್ರಮಗಳ ಮೂಲಕ ಆಹಾರದ ಮಹತ್ವವನ್ನು ತಿಳಿಸಿ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದರು.  ಅನೇಕ ವರ್ಷಗಳ ಕಾಲ ಫುಡ್ ಅಂಡ್ ನ್ಯೂಟ್ರೇಷನ್ ವರ್ಲ್ಡ್ ಎಂಬ ಆಂಗ್ಲ ನಿಯತಕಾಲಿಕದ ಸಂಪಾದಕರಾಗಿದ್ದರು. ಕೆ.ಸಿ. ರಘು, ಲೇಖಕರಾಗಿ ಆಹಾರಕ್ಕೆ ಸಂಬಂಧಪಟ್ಟ ‘ಆಹಾರ ರಾಜಕೀಯ’ಮತ್ತು ‘ತುತ್ತು ತತ್ವ’ ಪುಸ್ತಕಗಳನ್ನು ಪ್ರಕಟಿಸಿದ್ದಾರೆ. ಇದಲ್ಲದೇ ಅವರು ನವಜಾತ ಶಿಶುಗಳಲ್ಲಿ ಕಂಡುಬರುವ ಮಾರಕ ಕಾಯಿಲೆಗಳಿಗೆ ಪೌಷ್ಟಿಕಾಂಶದ ಪರಿಹಾರವನ್ನು ಸಂಶೋಧನೆಯಿಂದ ಕಂಡುಹಿಡಿದು, ದೇಶಾದ್ಯಂತ ಹಾಗೂ ವಿದೇಶಕ್ಕೂ ಒದಗಿಸುತ್ತಿದ್ದಾರೆ. ಈ ಕಾರ್ಯದಿಂದ ಸುಮಾರು 5 ಸಾವಿರ ನವಜಾತ ಶಿಶುಗಳನ್ನು ಸಾವಿನ ದವಡೆಯಿಂದ ಪಾರು ಮಾಡಿದ್ದರು.

ಇದನ್ನೂ ಓದಿಗಾಯ | ಕಥಾ ಸರಣಿ – ಸಂಚಿಕೆ 03

ಅನೇಕ ವಿಷಯಗಳ ಆಳವಾದ ಆಸಕ್ತಿ ಮತ್ತು ಜ್ಞಾನವನ್ನು ಉಳ್ಳವರಾಗಿ ಸದಾ ಅಧ್ಯಯನದಲ್ಲಿ ತೊಡಗಿಸಿಕೊಂಡಿದ್ದರು.  ಇವರ ಸಾವಿಗೆ ಜನಪರ ಸಂಘಟನೆಗಳು, ಚಿಂತಕರು, ಸಾಹಿತಿಗಳು ಸಂತಾಪವನ್ನು ಸೂಚಿಸಿದ್ದು. ಇವರನ್ನು ಕಳೆದುಕೊಂಡ ಕರ್ನಾಟಕ ಬಡವಾಗಿದೆ ಎಂದು ಕಂಬನಿ ಮಿಡಿದಿದ್ದಾರೆ.

ಈ ವಿಡಿಯೋ ನೋಡಿಹಸುವಿನಲ್ಲಿ”ದೇವರುಗಳಿದ್ದರೆ” ಅದು ಸಾಯುವುದ್ಯಾಕೆ? ಎಷ್ಟೊಂದು ಕ್ರಿಮಿಕೀಟಿಗಳನ್ನು ನಾವು ತಿನ್ನುತ್ತೇವೆ ಗೊತ್ತಾ?! ಕೆ.ಸಿ.ರಘು

 

Donate Janashakthi Media

Leave a Reply

Your email address will not be published. Required fields are marked *