ತಮಿಳುನಾಡು ಚುನಾವಣೆಯಲ್ಲಿ ವಿದೇಶಿಗರ ಮತದಾನ: 10 ಮಂದಿ ಬಂಧನ!

Please follow and like us:
ಚೆನ್ನೈ: ಕೆಲವು ವಿದೇಶಿ ಪ್ರಜೆಗಳು ಏ. 23ರಂದು ನಡೆದ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಮೋಸದಿಂದ ಮತದಾನ ಮಾಡಿರುವುದು ಪತ್ತೆಯಾಗಿದ್ದು, ಇದರ ಕುರಿತು ತನಿಖೆ ಕೈಗೊಳ್ಳಲು ಚುನಾವಣಾ ಆಯೋಗವು ಆದೇಶಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತಮಿಳುನಾಡು

ಇತ್ತೀಚೆಗೆ ವಿಮಾನ ನಿಲ್ದಾಣದಲ್ಲಿ ವಿದೇಶಕ್ಕೆ ಪ್ರಯಾಣಿಸಲು ತೆರಳುತ್ತಿದ್ದ ಕೆಲವು ವಿದೇಶಿ ಪ್ರಜೆಗಳ ತೋರು ಬೆರಳುಗಳ ಮೇಲೆ ಅಳಿಸಲಾಗದ ಶಾಯಿ ಗುರುತನ್ನು ಗಮನಿಸಿದ ವಿಮಾನ ನಿಲ್ದಾಣದ ಸಿಬ್ಬಂದಿಯು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಂತರ, 10 ಜನ ವಿದೇಶಿ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದರು.

ಇದನ್ನೂ ಓದಿ: ಮತದಾರರ ಪಟ್ಟಿ ಪರಿಷ್ಕರಣೆ ಹೆಸರಿನಲ್ಲಿ ಅಲ್ಪಸಂಖ್ಯಾತರು, ಹಿಂದುಳಿದವರು ಹಾಗೂ ದಲಿತರ ಮತ ಕಡಿತ ಯತ್ನ : ಡಿ.ಕೆ. ಶಿವಕುಮಾರ್‌ ಆರೋಪ

ವಿಧಾನಸಭಾ ಚುನಾವಣೆಯಲ್ಲಿ ನಕಲಿ ದಾಖಲೆಗಳನ್ನು ಬಳಸಿಕೊಂಡು ಮತದಾನ ಮಾಡಿದ ಆರೋಪದ ಮೇಲೆ 9 ವಿವಿಧ ಪ್ರಕರಣಗಳಲ್ಲಿ 10 ಜನರನ್ನು ಬಂಧಿಸಲಾಗಿದೆ. ಅವರನ್ನು ಚೆನ್ನೈ ಮತ್ತು ಮಧುರೈ ವಿಮಾನ ನಿಲ್ದಾಣಗಳಲ್ಲಿ ಬಂಧಿಸಲಾಗಿದೆ. ತನಿಖೆಯ ನಂತರ ಅವರು ಶ್ರೀಲಂಕಾ, ಬ್ರಿಟನ್ ಮತ್ತು ಕೆನಡಾದ ಪ್ರಜೆಗಳು ಎನ್ನುವುದು ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ.

ಪೊಲೀಸರ ವರದಿಯ ಆಧಾರದಲ್ಲಿ ಚುನಾವಣಾ ಆಯೋಗವು ಕ್ರಮಕೈಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ನೋಡಿ: ಆರೋಗ್ಯ ಸೇವೆ ಕಾರ್ಪೊರೇಟ್ ಕೈಗೆ? : ಸರ್ಕಾರದ ಕ್ರಮಕ್ಕೆ ತೀವ್ರ ವಿರೋಧ Janashakthi Media

Please follow and like us:
Donate Janashakthi Media

Leave a Reply

Your email address will not be published. Required fields are marked *