ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ಕರ್ತವ್ಯದಲ್ಲಿದ್ದ ಫಾರೆಸ್ಟ್ ಗಾರ್ಡ್ ಶರತ್ ಕುಮಾರ್ (33) 10 ದಿನಗಳಿಂದ ನಾಪತ್ತೆಯಾಗಿದ್ದೂ, ಇದೀಗ ಅವರು ಶವವಾಗಿ ಪತ್ತೆಯಾಗಿದ್ದಾರೆ.. ನೀಲಗಿರಿ ಪ್ಲಾಂಟೇಶನ್ ನಲ್ಲಿ ಅವರ ಶವ ಪತ್ತೆಯಾಗಿದ್ದು, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಫಾರೆಸ್ಟ್ ಗಾರ್ಡ್ ಶರತ್ ನೀಲಗಿರಿ ಪ್ಲಾಂಟೇಶನ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಶರತ್ ಮೂಲತಃ ಕೊಡಗು ಜಿಲ್ಲೆಯ ಆಲೂರು ನಿವಾಸಿಯಾಗಿದ್ದಾರೆ. ಸಖರಾಯಪಟ್ಟಣದ ನೀಲಗಿರಿ ತೋಪಿನಲ್ಲಿ ಶರತ್ ಗಾಗಿ ಹುಡುಕಾಟ ನಡೆಸಲಾಗಿತ್ತು.
ಇದನ್ನೂ ಓದಿ: ಕಾರ್ಪೊರೇಟ್ಗಳಿಗೆ ಸಬ್ಸಿಡಿ ಕೊಡುವ ಇಎಲ್ಐ ಯೋಜನೆಯನ್ನು ರದ್ದುಗೊಳಿಸಿ
ಅರಣ್ಯ ಸಿಬ್ಬಂದಿ ಮತ್ತು ಪೊಲೀಸರು ಶರತ್ ಗಾಗಿ ಹುಡುಕಾಟ ನಡೆಸಿದ್ದರು. ಆದರೆ ಅವರ ಸುಳಿವೇ ಇರಲಿಲ್ಲ. ಇದೀಗ ಅವರು ಶವವಾಗಿ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ.
ಕೊಡಗಿನಿಂದ 3-4 ತಿಂಗಳ ಹಿಂದೆ ಚಿಕ್ಕಮಗಳೂರು ಜಿಲ್ಲೆಗೆ ವರ್ಗಾವಣೆಗೊಂಡಿದ್ದರು. ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದನ್ನೂ ನೋಡಿ: ಸಮಾಜವಾದ, ಸೆಕ್ಯುಲರಿಸಂ ಅಂದರೆ ಆರೆಸ್ಸೆಸ್ ಗೆ ಅಸಹನೆ ಯಾಕೆ? Janashakthi Media
