ಸಿಇಟಿ-2024ರ ಪಠ್ಯಕ್ರಮದಿಂದ ಹೊರತಾಗಿರುವ ಪ್ರಶ್ನೆಗಳ ಬಗ್ಗೆ ಪರಿಶೀಲಿಸಲು ಸರ್ಕಾರದಿಂದ ತಜ್ಞರ ಸಮಿತಿ ರಚನೆ

ಬೆಂಗಳೂರು: ಸಿಇಟಿ-2024ರ ಪಠ್ಯಕ್ರಮದಿಂದ ಹೊರತಾಗಿರುವ ಪ್ರಶ್ನೆಗಳ ಬಗ್ಗೆ ಪರಿಶೀಲಿಸಲು ಸರ್ಕಾರ ತಜ್ಞರ ಸಮಿತಿ ರಚಿಸಿದೆ.

ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿಇಟಿ) ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಏಪ್ರಿಲ್ 18 ಮತ್ತು 19 ರಂದು  ನಡೆಸಿದ್ದು, ಸಿಇಟಿ ಪರೀಕ್ಷೆಯನ್ನು 4 ವಿಷಯಗಳಿಗೆ (ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ ಮತ್ತು ಜೀವಶಾಸ್ತ್ರ) ನಡೆಸಲಾಯಿತು. ರಾಜ್ಯಾದ್ಯಂತ 3 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು, ಪರೀಕ್ಷೆ ಬರೆದಿದ್ದಾರೆ.

ಪರೀಕ್ಷೆಗಳು ನಡೆದ ನಂತರ, ಪತ್ರಿಕೆಗಳ ಹಲವಾರು ಪ್ರಶ್ನೆಗಳು ಸಿಇಟಿಯ ಪಠ್ಯಕ್ರಮದ ಹೊರತಾಗಿವೆ ಎಂದು ಸುದ್ದಿ ವರದಿಗಳು ಉಲ್ಲೇಖಿಸಿವೆ. ಅನೇಕ ಪ್ರಶ್ನೆಗಳು ಪಠ್ಯಕ್ರಮದ ಹೊರತಾಗಿರುವ ಕಾರಣ ಇದು ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರಿದೆ ಎಂದು ಕೋರಿರುವ ಮನವಿಗಳು ಸಹ ಸ್ವೀಕೃತವಾಗಿದೆ. ಆದುದರಿಂದ, ಗ್ರೇಸ್ ಅಂಕಗಳನ್ನು ಒದಗಿಸುವಂತೆ ಅಥವಾ ಪರೀಕ್ಷೆಯನ್ನು ಮರು ನಡೆಸುವಂತೆ ಬೇಡಿಕೆಗಳನ್ನು ಸಹ ಸಲ್ಲಿಸಲಾಗಿದೆ. ಪ್ರಶ್ನೆಗಳಿಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಕೆಇಎಯು ವಿದ್ಯಾರ್ಥಿಗಳಿಗೆ 27ನೇ ಏಪ್ರಿಲ್ 2024 ರವರೆಗೆ ಅವಕಾಶ ನೀಡಿದೆ. ಈ ಸಂಬಂಧ ಸರ್ಕಾರಕ್ಕೆ ವಿಸ್ತ್ರತ ವರದಿ ಸಲ್ಲಿಸುವಂತೆ ‘ಕೆಇಎ’ ಗೆ ಸೂಚಿಸಲಾಗಿದೆ.

ಇದನ್ನೂ ಓದಿ: ನಾಮಪತ್ರ ಹಿಂಪಡೆದ ದಿಂಗಾಲೇಶ್ವರ ಸ್ವಾಮಿ

ಏತನ್ಮಧ್ಯೆ, ಈ ಪ್ರಕರಣದ ಬಗ್ಗೆ ಸರ್ಕಾರವು ಪರಿಶೀಲನೆ ನಡೆಸಿದ ಮತ್ತು ಸಿಇಟಿಯ ಪಠ್ಯಕ್ರಮದಿಂದ ಹೊರತಾಗಿರುವ ಪ್ರಶ್ನೆಗಳ ಸಂಖ್ಯೆಗಳನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು ಪ್ರತಿ 4 ವಿಷಯಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ತಜ್ಞರ ಸಮಿತಿಯನ್ನು ರಚಿಸಿದೆ. ತಜ್ಞರ ಸಮಿತಿಯು ತನ್ನ ವರದಿಯನ್ನು ತಕ್ಷಣವೇ ನೀಡುವಂತೆ ಆದೇಶಿಸಲಾಗಿದೆ.

ಸಿಇಟಿ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ‘ಕೆಇಎ’ ಯು ಕಾರ್ಯನಿರ್ವಹಿಸಲಿದೆ. ತಜ್ಞರ ಸಮಿತಿಯ ವರದಿಯನ್ನು ಆಧರಿಸಿ ಈ ಬಗ್ಗೆ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು. ವಿದ್ಯಾರ್ಥಿಗಳ ಹಿತಾಸಕ್ತಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಮತ್ತು ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗುವುದಿಲ್ಲ.

ಇದನ್ನೂ ನೋಡಿ: ಸಂವಿಧಾನದ ಮೇಲೆ ದಾಳಿ ಮಾಡುತ್ತಿರುವ ಬಿಜೆಪಿಯನ್ನು ದೇಶದಜನ ಸೋಲಿಸಬೇಕು – ಡಾ. ಜಿ. ರಾಮಕೃಷ್ಣ Janashakthi Media

Donate Janashakthi Media

Leave a Reply

Your email address will not be published. Required fields are marked *