ಬೆಂಗಳೂರು: ಇಂದು ಶುಕ್ರವಾರ ಮಾಜಿ ಮುಖ್ಯಮಂತ್ರಿ, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣದಲ್ಲಿ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಮುಖ್ಯಮಂತ್ರಿ
ಧಾರವಾಡದ ಪೀಠದಿಂದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಬಿ.ಎಸ್ ಯಡಿಯೂರಪ್ಪಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ್ದಾರೆ. ತಮ್ಮ ವಿರುದ್ಧದ ದಾಖಲಾಗಿರುವ ಪ್ರಕರಣವನ್ನು ರದ್ದು ಮಾಡಬೇಕೆಂದು ಬಿಎಸ್ವೈ ಅರ್ಜಿ ಸಲ್ಲಿಸಿದ್ದಾರೆ. ಇದನ್ನು ಹೈಕೋರ್ಟ್ ಬಹುತೇಕ ಪುರಸ್ಕರಿಸಿದೆ.
ಇದನ್ನೂ ಓದಿ: ದಯಾನಂದ ಸಾಗರ್ ವಿವಿ ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ : ಕಾರಣವಾದವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಪತ್ರ
ತನಿಖಾಧಿಕಾರಿಗಳು ನೀಡುವ ಅಂತಿಮ ವರದಿ ಆಧಾರದ ಮೇಲೆ ಮುಂದಿನ ನ್ಯಾಯಿಕ ಪ್ರಕ್ರಿಯೆ ಮುಂದುವರೆಸುವಂತೆ ಕೋರ್ಟ್ ಆದೇಶಿಸಿದೆ. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ದವಳಗಿರಿ ನಿವಾಸದಲ್ಲಿ ಫೆಬ್ರವರಿ 2, 2024ರಂದು ಮುಂಜಾನೆ 11 ಗಂಟೆಯಿಂದ 11.30ರ ನಡುವೆ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ಆರೋಪಿಸಲಾಗಿದೆ.
ಮಗಳ ಮೇಲೆ ಲೈಂಗಿಕ ದೌರ್ಜನ್ಯವೆಸಗಲಾಗಿದೆ ಎಂದು ದೂರು ನೀಡಿದ್ದ ಸಂತ್ರಸ್ತೆ ಮಹಿಳೆ ಈಗಾಗ್ಲೇ ಅನಾರೋಗ್ಯದಿಂದ ಮೃತಪಟ್ಟಿದ್ದಾಳೆ. ಯಡಿಯೂರಪ್ಪ ವಿರುದ್ಧ ಪೋಕ್ಸೊ ಪ್ರಕರಣ, ಇವರ ಮೂವರು ಆಪ್ತರ ವಿರುದ್ಧ ಸಾಕ್ಷಿ ನಾಶ ಹಾಗೂ ಗಿಫ್ಟ್ ನೀಡಲು ಬಂದ ಆರೋಪದಡಿ ಪ್ರಕರಣ ದಾಖಲಾಗಿದೆ.
ಇದನ್ನೂ ನೋಡಿ: ಸಾಮಾಜಿಕ ನ್ಯಾಯವನ್ನು ಜಾರಿ ಮಾಡಬೇಕಿರುವ ಸಂಸತ್ತು ಮಾಡುತ್ತಿರುವುದೇನು? ದಿನೇಶ್ ಅಮಿನ್ ಮಟ್ಟು Janashakthi Media