ಬೆಂಗಳೂರು: ಕಾಂಗ್ರೆಸ್ ನೀಡಿರುವ ಆಫರ್ ತಿರಸ್ಕರಿಸಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಮಾತು ತಪ್ಪಲ್ಲ ಅನ್ನೋ ಸಂದೇಶವನ್ನು ರವಾನಿಸಿದ್ದಾರಂತೆ.ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ತೆರಳಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ರಾಜ್ಯ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಈ ವೇಳೆ ಮುಂದಿನ ಲೋಕಸಭಾ ಚುನಾವಣೆ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕಾಂಗ್ರೆಸ್ ನೀಡಿರುವ ಆಫರ್ನ್ನು ಬೇಡ ಎಂದಿದ್ದಾರಂತೆ ಜಗದೀಶ್ ಶೆಟ್ಟರ್. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನ ಗೆಲ್ಲುವುದರ ಜೊತೆಯಲ್ಲಿ ಬಿಜೆಪಿಯ ಪ್ರಮುಖ ನಾಯಕರನ್ನು ಸೋಲಿಸುವ ಗುರಿಯನ್ನು ಹೊಂದಿದೆ ಎನ್ನಲಾಗಿದೆ.
ಇದನ್ನೂ ಓದಿ:ಜನಮತ2023 :ಬಿಜೆಪಿ ತೊರೆದು ಕೈ ಪಕ್ಷಕ್ಕೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸೇರ್ಪಡೆ
ಬಿಜೆಪಿ ಪ್ರಮುಖರಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮೊದಲ ಸ್ಥಾನದಲ್ಲಿದ್ದಾರೆ. ಹಾಗಾಗಿ ಜೋಶಿ ಅವರ ವಿರುದ್ಧ ಶೆಟ್ಟರ್ ಅಸ್ತ್ರ ಬಳಸಲು ಕಾಂಗ್ರೆಸ್ ಮುಂದಾಗಿತ್ತು. ಆದ್ರೆ ಲೋಕಸಭಾ ಚುನಾವಣೆಗೆ ನಿಲ್ಲಲ್ಲ ಎಂಬ ಸಂದೇಶವನ್ನು ಜಗದೀಶ್ ಶೆಟ್ಟರ್ ರವಾನಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಪ್ರಹ್ಲಾದ್ ಜೋಶಿ ವಿರುದ್ಧ ಜಗದೀಶ್ ಶೆಟ್ಟರ್ ಸ್ಪರ್ಧಿಸಿದ್ರೆ ಲಿಂಗಾಯತ ಮತಗಳು, ಕಾಂಗ್ರೆಸ್ ಸಾಂಪ್ರದಾಯಿಕ ಮತಗಳು ಕೈ ಹಿಡಿದರೆ ಗೆಲುವು ಖಚಿತ ಎಂದು ಹೈಕಮಾಂಡ್ ಲೆಕ್ಕ ಹಾಕಿತ್ತು. ಆದ್ರೆ ಲೋಕಸಮರಕ್ಕೆ ನನ್ನ ಹೆಸರು ಬೇಡ ಎಂದು ಹೇಳಿದ್ದಾರಂತೆ ಜಗದೀಶ್ ಶೆಟ್ಟರ್.
ರಣ್ದೀಪ್ ಸುರ್ಜೇವಾಲಾ, ಮಲ್ಲಿಕಾರ್ಜುನ ಖರ್ಗೆ ಲೋಕಸಭೆ ಚುನಾವಣೆ ನಿಲ್ಲುವಂತೆ ಒತ್ತಾಯ ಮಾಡಿದ್ರೂ ಶೆಟ್ಟರ್ ಒಪ್ಪುತ್ತಿಲ್ಲವಂತೆ. ವಿಧಾನಸಭೆ ಚುನಾವಣೆಯೇ ಕೊನೆ ಎಂದಿದ್ದೇನೆ. ಹಾಗಾಗಿ ಲೋಕಸಭೆ ಚುನಾವಣೆಗೆ ನಿಲ್ಲಲ್ಲ. ನೀವು ಯಾರನ್ನೇ ಅಭ್ಯರ್ಥಿ ಮಾಡಿದರೂ ಗೆಲ್ಲಿಸಿಕೊಂಡು ಬರುತ್ತೇನೆ ಎಂದು ಜಗದೀಶ್ ಶೆಟ್ಟರ್ ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.ಲೋಕಸಭಾ ಚುನಾವಣೆ ಸ್ಪರ್ಧೆಗೆ ಒಪ್ಪದ ಜಗದೀಶ್ ಶೆಟ್ಟರ್ ಅವರಿಗೆ ಎಂಎಲ್ಸಿ ಸ್ಥಾನ ನೀಡುವ ಭರವಸೆಯನ್ನು ರಣ್ದೀಪ್ ಸುರ್ಜೇವಾಲಾ ಮತ್ತು ಮಲ್ಲಿಕಾರ್ಜುನ ಖರ್ಗೆ ನೀಡಿದ್ದಾರೆ ಎನ್ನಲಾಗಿದೆ.ವಿಧಾನಸಭಾ ಮೂಲಕ ವಿಧಾನ ಪರಿಷತ್ಗೆ ಶೆಟ್ಟರ್ ಅವರನ್ನು ಆಯ್ಕೆ ಮಾಡಿ, ಲೋಕಸಭಾ ಚುನಾವಣೆಯಲ್ಲಿ ರಾಜ್ಯಾದ್ಯಂತ ಬಿಜೆಪಿ ವಿರುದ್ಧ ಪ್ರಚಾರಕ್ಕೆ ಬಳಸಿಕೊಳ್ಳಲು ಕಾಂಗ್ರೆಸ್ ಪ್ಲಾನ್ ಮಾಡಿದೆ ಎಂದು ಹೇಳಲಾಗುತ್ತಿದೆ.