ತುಮಕೂರು: ಇಂದು ಬೆಳಗ್ಗೆ 8.30ಕ್ಕೆ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ತುಮಕೂರಿನ ಕಾಂಗ್ರೆಸ್ ಮಾಜಿ ಶಾಸಕ ಆರ್. ನಾರಾಯಣ್ (81) ನಿಧನರಾಗಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ನಾರಾಯಣ್ ರನ್ನು ಸಿದ್ದಗಂಗಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಿಸದೇ ಇಂದು ಕೊನೆಯುಸಿರೆಳೆದಿದ್ದಾರೆ. ತುಮಕೂರಿನ ರೈಲ್ವೆ ನಿಲ್ದಾಣದ ಸಿಎಸ್‌ಐ ಲೇಟೌಟ್‌ನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಇದನ್ನೂ ಓದಿ: ‘ಸಮಾಜವಾದ’ ಮತ್ತು ಸಮಾನ ಅವಕಾಶಗಳು
ನಾರಾಯಣ್ ತುಮಕೂರಿನ ಬೆಳ್ಳಾವಿ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಮಾಜಿ ಮುಖ್ಯಮಂತ್ರಿ ದಿವಂಗತ ಎಸ್.ಎಂ.ಕೃಷ್ಣ ಸರ್ಕಾರದಲ್ಲಿ ಕರ್ನಾಟಕ ಹೌಸಿಂಗ್ ಬೋರ್ಡ್ ಅಧ್ಯಕ್ಷರಾಗಿ ಕೆಲಸ ಮಾಡಿದ್ದರು.
ಮಂಗಳವಾರ (ಡಿ.10) ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ನಿಧನರಾದರು. ಅವರ ಅಂತ್ಯಕ್ರಿಯೆ ನಿನ್ನೆ (ಡಿ.11) ಮಂಡ್ಯ ಜಿಲ್ಲೆಯ ಮದ್ದೂರಿನ ಅವರ ಹುಟ್ಟೂರಾದ ಸೋಮನಹಳ್ಳಿಯಲ್ಲಿ ನೆರವೇರಿಸಲಾಯಿತು.
ಇದನ್ನೂ ನೋಡಿ: ಕನ್ನಡ ಸಾಹಿತ್ಯ ಸಮ್ಮೇಳನ |ಮಂಡ್ಯದ ಪ್ರೀತಿಯ ನಾಟಿ ಕೋಳಿ ಸಾರುಮುದ್ದೆ ನೀಡಬೇಕು – ಎಂ.ಜಿ.ಹೆಗಡೆ Janashakthi Media