ಬೆಂಗಳೂರು: ಕಾಂಗ್ರೆಸ್‌ನ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಹಾಗೂ ಅವರ ಪತ್ನಿ ಅಮೃತಾ ರೈ ಅವರು ಇಂದು ಶುಕ್ರವಾರ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಇದನ್ನೂ ಓದಿ:ಕರಾವಳಿ ಜಿಲ್ಲೆಗಳಲ್ಲಿ ಮಳೆ ಹಾನಿ ಅಧಿಕಾರಿಗಳ ಜೊತೆ ಸಿಎಂ ಚರ್ಚೆ: ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆಗೆ ಸೂಚನೆ
ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿಗಳ ಕಚೇರಿ, ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕರಾದ ದಿಗ್ವಿಜಯ್ ಸಿಂಗ್ ಹಾಗೂ ಅವರ ಪತ್ನಿ ಅಮೃತಾ ರೈ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ ಎಂದು ಮಾಹಿತಿ ತಿಳಿದುಬಂದಿದೆ.
ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಡಾ.ಕೆ.ಗೋವಿಂದರಾಜು ಹಾಗೂ ಶಾಸಕ ಲಕ್ಷ್ಮಣ ಸವದಿ ಅವರು ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದರು ಎಂದು ಸಿಎಂ ಕಚೇರಿ ತಿಳಿಸಿದೆ.
ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕರಾದ ದಿಗ್ವಿಜಯ್ ಸಿಂಗ್ ಹಾಗೂ ಅವರ ಪತ್ನಿ ಅಮೃತಾ ರೈ ಅವರು ಇಂದು ಮುಖ್ಯಮಂತ್ರಿ @siddaramaiah ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಡಾ. ಕೆ. ಗೋವಿಂದರಾಜು ಹಾಗೂ ಶಾಸಕರಾದ ಲಕ್ಷ್ಮಣ ಸವದಿ ಅವರು ಈ ವೇಳೆ ಉಪಸ್ಥಿತರಿದ್ದರು. pic.twitter.com/dmSTRGCzdk— CM of Karnataka (@CMofKarnataka) July 28, 2023