ತುಮಕೂರು: ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ವಿರೋಧಿಸಿ ಹೋರಾಟಕ್ಕೆ ಮುಂದಾಗಿದ್ದ ಮಾಜಿ ಸೊಗಡು ಶಿವಣ್ಣರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರತಿಭಟನೆಗೆ
ತುಮಕೂರಿನ ಹೆಗ್ಗರೆ ಸಮೀಪದ ಸಿದ್ದಾರ್ಥ ನಗರದಲ್ಲಿರುವ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ್ ಮನೆ ಮುಂದೆ ಬೆಳಗ್ಗೆ 11 ಗಂಟೆಗೆ ಪ್ರತಿಭಟನೆ ನಡೆಸಲು ಹೋರಾಟಗಾರರು ಮುಂದಾಗಿದ್ದರು. ಆದರೆ ಪ್ರತಿಭಟನೆಗೂ ಮುನ್ನ ಅವರ ನಿವಾಸದ ಬಳಿ ಸೊಗಡು ಶಿವಣ್ಣ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪರಮೇಶ್ವರ್ ಮನೆ ಮುಂದೆ ಪ್ರತಿಭಟನೆ ನಡೆಸಲು ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ವಿರೋಧಿ ಹೋರಾಟ ಸಮಿತಿ ಕರೆ ನೀಡಿತ್ತು.
ಇದನ್ನೂ ಓದಿ: ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಬೃಹತ್ ಪ್ರತಿಭಟನೆ
ಈ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮನೆ ಬಳಿ ತೆರಳಿ ಪ್ರತಿಭಟನೆ ಮಾಡಲು ಸಿದ್ದತೆ ನಡೆಸಲಾಗಿತ್ತು.
ತುಮಕೂರಿನ ಗೊಲ್ಲಹಳ್ಳಿ ಬಳಿ ಮಾಜಿ ಸಚಿವ ಸೊಗಡು ಶಿವಣ್ಣರನ್ನು ವಶಕ್ಕೆ ಪಡೆದ ಪೊಲೀಸರು ಅವರನ್ನು ತುಮಕೂರಿನ ಡಿ.ಆರ್. ಕಚೇರಿಯಲ್ಲಿ ಗೃಹ ಬಂಧನಕ್ಕೊಳಪಡಿಸಲಾಗಿದೆ .ಪ್ರತಿಭಟನೆ ಸಿದ್ಧತೆ ಪರಿಶೀಲನೆಗೆ ತೆರಳಿದ್ದ ಸೊಗಡು ಶಿವಣ್ಣ ಹಾಗೂ ಬಿಜೆಪಿ ಕಾರ್ಯಕರ್ತ ಬೆಳಗುಂಬ ಪ್ರಭಾಕರ್ ತೆರಳಿದ್ದರು.
ಈ ವೇಳೆ ಇಬ್ಬರನ್ನೂ ವಶಕ್ಕೆ ಪಡೆದ ಪೊಲೀಸರು ಡಿಎಆರ್ ಕಚೇರಿಗೆ ಕರೆದೊಯ್ದಿದ್ದಾರೆ. ಇದರಿಂದ ಪ್ರತಿಭಟನೆಗೆ ಹಿನ್ನಡೆಯಾಗಿದೆ. ಸೊಗಡು ಶಿವಣ್ಣ ಅವರನ್ನು ಡಿಎಆರ್ ಕಚೇರಿಯಲ್ಲಿ ಗೃಹ ಬಂಧನದಲ್ಲಿ ಇರಿಸಲಾಗಿದೆ. ಪ್ರತಿಭಟನೆ ಹಿನ್ನೆಲೆಯಲ್ಲಿ ಗೃಹ ಸಚಿವರ ಮನೆ ಸುತ್ತಲೂ ಪೊಲೀಸ್ ಬಿಗಿ ಬಂದೋಬಸ್ತ್ ಆಯೋಜಿಸಲಾಗಿದೆ.
ಸೊಗಡು ಶಿವಣ್ಣ ಬಂಧನ ವಿರೋಧಿಸಿ ಡಿಎಆರ್ ಎದುರು ಬಿಜೆಪಿ, ಕನ್ನಡ ಪರ ಸಂಘಟನೆಗಳು ಸೇರಿದಂತೆ ನಾನಾ ಸಂಘಟನೆಗಳು ಡಿಎಆರ್ ಎದುರು ಕಪ್ಪು ಬಟ್ಟೆ ಧರಿಸಿ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು, ಶಿವಣ್ಣ ಬಿಡುಗಡೆಗೆ ಆಗ್ರಹಿಸಿದರು. ಈ ವೇಳೆ ಅಧಿಕಾರಿಗಳು ತಂದ ಆಹಾರವನ್ನು ಸೇವಿಸದೆ ಶಿವಣ್ಣ ಉಪವಾಸ ಸತ್ಯಾಗ್ರಹ ನಡೆಸಿದ್ದಾರೆ.
ಇದನ್ನೂ ನೋಡಿ: ಏನಿದು ಸಿದ್ರಾಮಯ್ಯನವರೆ ಅನ್ಯಾಯದ ಕಡೆ ವಾಲುತ್ತಿದ್ದೀರಿ!?Janashakthi Media