ಆರ್ಥಿಕ ಸಂಕಷ್ಟ : ಚಾಮರಾಜನಗರದ ಒಂದೇ ಕುಟುಂಬದ ನಾಲ್ವರೂ ಅತ್ಮಹತ್ಯೆ

ಚಾಮರಾಜನಗರ: ಕೊರೋನಾ ಸೋಂಕು ಹಲವರ ಜೀವನದ ಮೇಲೆ ಹಲವು ರೀತಿಯಲ್ಲಿ ಪರಿಣಾಮ ಬೀರಿದೆ. ಹಲವರ ಜೀವನವನ್ನು ಬುಡಮೇಲು ಮಾಡಿದೆ. ಅನೇಕ ಕುಟುಂಬಗಳು ಆರ್ಥಿಕ ಸಂಕಷ್ಟದಿಂದ ಬೀದಿಗೆ ಬಂದಿವೆ. ಚಾಮರಾಜನಗರ ಜಿಲ್ಲೆಯ ಹೆಚ್ ಮುಖಹಳ್ಳಿ ಗ್ರಾಮದ ಒಂದೇ ಕುಟುಂಬದ ನಾಲ್ವರು ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಗ್ರಾಮದ ಮಹದೇವಪ್ಪ 47 ವರ್ಷ, ಅವರ ಪತ್ನಿ ಮಂಗಳಮ್ಮ 40 ವರ್ಷ , ಅವರ ಮಕ್ಕಳಾದ ಜ್ಯೋತಿ 14 ವರ್ಷ, ಶ್ರುತಿ (12 ವರ್ಷ) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಹಾದೇವಪ್ಪ ಒಂದೂವರೆ ಎಕರೆ ಮಳೆ ಆಶ್ರಿತ ಜಮೀನು ಹೊಂದಿದ್ದು, ಕೂಲಿ ಕಾರ್ಮಿಕರಾಗಿದ್ದರು. ಆತ್ಮಹತ್ಯೆ ಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಕಡು ಬಡತನ, ಸಾಲಬಾಧೆಯಿಂದ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ.

ಕುಟುಂಬದ ಯಜಮಾನ ಮಹದೇವಸ್ವಾಮಿ ಇತ್ತೀಚೆಗೆ ಕೋವಿಡ್ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಆದರೆ ತೀವ್ರ ಆರ್ಥಿಕ ಸಂಕಷ್ಟದಿಂದ ಬಳಲುತ್ತಿದ್ದರು. ಲಾಕ್ ಡೌನ್ ನಿಂದಾಗಿ ಕೈಯಲ್ಲಿ ಕೆಲಸವಿರಲಿಲ್ಲ. ಇವರ ಪರಿಸ್ಥಿತಿ ಕಂಡು ನೆರೆಹೊರೆಯವರು ನಿಂದಿಸುತ್ತಿದ್ದರಂತೆ. ಇದರಿಂದ ಮಾನಸಿಕವಾಗಿ ತೀವ್ರ ನೊಂದು ಮಹದೇವಸ್ವಾಮಿ ಹಾಗೂ ಅವರ ಪತ್ನಿ ತಮ್ಮ ಇಬ್ಬರು ಹೆಣ್ಣುಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಗ್ರಾಮದಲ್ಲಿ ಜನ ಮಾತ ನಾಡಿಕೊಳ್ಳುತ್ತಿದ್ದಾರೆ.

ಇಂದು ಬೆಳಿಗ್ಗೆ ಗ್ರಾಮದವರೊಬ್ಬರು ಮಹಾದೇವಪ್ಪ ಅವರನ್ನು, ಕಬ್ಬಿನ ತೊಂಡೆ ತರುವ ಸಲುವಾಗಿ ಕರೆಯಲು ಹೋದಾಗ ಬಾಗಿಲು ತೆರೆಯಲಿಲ್ಲ.‌ ಮನೆಯೊಳಗಿನಿಂದ ಯಾವುದೇ ಶಬ್ದ ಬರಲಿಲ್ಲ. ಆಗ ಮನೆಯ ಮೇಲೆ ಹತ್ತಿ ಹೆಂಚು ತೆರೆದು ನೋಡಿದಾಗ, ನಾಲ್ವರೂ ನೇಣು ಹಾಕಿಕೊಂಡಿರುವುದು ಬೆಳಕಿಗೆ ಬಂದಿದೆ. ಮಹಾದೇವಪ್ಪ ಅವರಿಗೆ ಮೂವರು ಪುತ್ರಿಯರಿದ್ದು, ಹಿರಿಯ ಪುತ್ರಿಗೆ ವಿವಾಹವಾಗಿದೆ. ಪೂರ್ವ ಠಾಣೆ ಪೊಲೀಸರು ಈಗ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *