ಮೈಸೂರು: ಸಿಲಿಂಡರ್ ಸೋರಿಕೆಯಿಂದ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ಸಂಭವಿಸಿದೆ. ಸಿಲಿಂಡರ್
ಸಿಲಿಂಡರ್ ಸೋರಿಕೆಯಿಂದ ಉಸಿರುಗಟ್ಟಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ಯರೆಗನಹಳ್ಳಿಯಲ್ಲಿ ನಡೆದಿದೆ.
ಇದನ್ನೂ ಓದಿ: ಪ್ರಸಾದ ಸೇವಿಸಿ 51 ಮಂದಿ ಅಸ್ವಸ್ಥ, ಐವರ ಸ್ಥಿತಿ ಗಂಭೀರ
ಬಟ್ಟೆ ಐರನ್ ಮಾಡುತ್ತಿದ್ದ ಮಂಜುಳ (39), ಕುಮಾರಸ್ವಾಮಿ (45), ಅರ್ಚನಾ (19), ಸ್ವಾತಿ (19) ಎಂಬುವರ ಶವಗಳು ಪತ್ತೆಯಾಗಿವೆ. ಸಿಲಿಂಡರ್ ಸೋರಿಕೆಯಿಂದ ಈ ದುರಂತ ಸಂಭವಿಸಿದೆ ಎನ್ನಲಾಗಿದೆ.
ಮೈಸೂರು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋಟ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮನೆಯಲ್ಲಿದ್ದ ಮೂರು ಗ್ಯಾಸ್ ಸಿಲಿಂಡರ್‌ಗಳನ್ನು ಪೊಲೀಸರ ಸಮ್ಮುಖದಲ್ಲಿ ತರಲಾಯಿತು. ಈ ಬಗ್ಗೆ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಕಳೆದ ರಾತ್ರಿ ಗ್ಯಾಸ್ ಸೋರಿಕೆಯಿಂದ ಈ ಅವಘಡ ಸಂಭವಿಸಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಇದನ್ನೂ ನೋಡಿ: ಮಣ್ಣಿನ ಮಕ್ಕಳು’ ಎಂದು ಹೇಳಿಕೊಂಡು ದೌರ್ಜನ್ಯ ನಡೆಸಿದ್ದೆ ಜಾಸ್ತಿ | ರೇವಣ್ಣ ರಿಪಬ್ಲಿಕ್Janashakthi Media