ಜಮೀನು ಕಬಳಿಸಲು ನ್ಯಾಯಾಧೀಶರ ಸಹಿಯನ್ನೇ ನಕಲು ಮಾಡಿ ವಂಚನೆ

ನೇಕಲ್: ಪತಿಯನ್ನ ಕಳೆದುಕೊಂಡಿದ್ದ ಮಹಿಳೆಯ ಅಮಾಯಕತನವನ್ನೇ ದುರಪಯೋಗ ಪಡಿಸಿಕೊಂಡ ಭೂಗಳ್ಳರು ಕೋಟ್ಯಂತರ ರೂ ಬೆಲೆಬಾಳುವ ಜಾಗವನ್ನು ಕಬಳಿಸಲು ನ್ಯಾಯಾಧೀಶರ ಸಹಿಯನ್ನೇ ನಕಲು ಮಾಡಿ ವಂಚನೆ ಮಾಡಿದ್ದಾರೆ ಎನ್ನುವ ಗಂಭೀರ ಆರೋಪ ನಗರದಲ್ಲಿ ಕೇಳಿಬಂದಿದೆ. ಜಮೀನು

ಬೆಂಗಳೂರು ನಗರ ಬೆಳೆಯುತ್ತ ಹೋದಂತೆ ಒಂದೊಂದು ಅಡಿಗೂ ಕೂಡ ಚಿನ್ನದ ಬೆಲೆ ಬಂದಿದೆ‌. ಇದನ್ನೇ ಬಂಡವಾಳ ಮಾಡಿಕೊಂಡ ಭೂಗಳ್ಳರು ಜಮೀನು ಕಬಳಿಸುವುದಕ್ಕೆ ಮುಂದಾಗ್ತಾರೆ. ಅದೇ ರೀತಿ ಆನೇಕಲ್ ತಾಲ್ಲೂಕಿನ ಚಿಂತಲಮಡಿವಾಳ ಗ್ರಾಮದ ಸರ್ವೆ ನಂಬರ್ 43/2 ರ 28.8 ಗುಂಟೆ ಜಮೀನಿನ ಪೈಕಿ 14 ಗುಂಟೆ ಜಾಗವನ್ನ ನಕಲಿ ಸಹಿ ಮತ್ತು ನಕಲಿ ದಾಖಲೆಗಳನ್ನ ಸೃಷ್ಟಿಸಿ ಕಬಳಿಕೆ ಮಾಡಿಕೊಂಡಿದ್ದಾರೆ.

ಮೃತ ವೆಂಕಟಸ್ವಾಮಿ ಎಂಬುವವವರ ಹೆಸರಿನಲ್ಲಿದ್ದ ಜಮೀನನ್ನ ಪತ್ನಿ ಜ್ಯೋತಮ್ಮರ ಹೆಸರಿಗೆ ಮಾಡಿಸಿ ಕೊಡುತ್ತೇವೆಂದು ನಂಬಿಸಿದ ಸಂಬಂಧಿ ಮುನಿರಾಜರಾಘವ ಅಲಿಯಾಸ್​ ಮುರಾರಿ ಮುನೇಶ್ವರ್ ರಾವ್ ಅ್ಯಂಡ್​ ಗ್ಯಾಂಗ್ ವಂಚಿಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: ಸಿಂದನೂರು | ಖಾಸಗಿ ಶಾಲೆಯ ವಾಹನಗಳು ನಿಯಮಗಳನ್ನು ಪಾಲಿಸದೆ ಸಾರಿಗೆ ಇಲಾಖೆ ಅಧಿಕಾರಿಗಳು ವಶಕ್ಕೆೆ !

ನ್ಯಾಯಾಧೀಶರ 3 ಸೈನ್, ಜೊತೆಗೆ ಜಮೀನು ಮಾಲೀಕ ಜ್ಯೋತಮ್ಮ, ಆಕೆಯ ಮಕ್ಕಳ ಒಟ್ಟು 16 ಸೈನ್​ಗಳನ್ನ ನಕಲು ಮಾಡಿ ಕೋರ್ಟ್ ಡಿಕ್ರಿ ಬಳಸಿ ಅತ್ತಿಬೆಲೆಯಲ್ಲಿ ರಿಜಿಸ್ಟರ್ ಮಾಡಿ ತದನಂತರ ಜಮೀಮಿನಿನ ಖಾತೆ ಮಾಡಿಸಿಕೊಂಡಿದ್ದಾರೆ. ಬಳಿಕ ಪಡುಗೋಲಸ ಶಿವಪ್ರಸಾದ್ ಎಂಬಾತನಿಕೆ ಜಮೀನು ಮಾರಾಟ ಮಾಡಲಾಗಿದೆ.

ಈ ವಿಚಾರ ಜ್ಯೋತಮ್ಮ ಕುಟುಂಬಕ್ಕೆ ತಿಳಿದ ಕೂಡಲೇ ಆನೇಕಲ್ ಪೊಲೀಸ್ ಠಾಣೆಯಲ್ಲಿ ಮುನಿರಾಜ್ ರಾಘವ, ಆಂಜಿನಪ್ಪ, ಅರುಣಾಕ್ಷಿ, ಪವಿತ್ರ, ಪೂಜಶ್ರೀ, ಸುಶ್ಮಿತ ಈ ಆರು ಜನರ ವಿರುದ್ದ ಪ್ರಕರಣ ದಾಖಲಿಸಿದ್ದಾರೆ.

ಇನ್ನು ಜ್ಯೋತಮ್ಮ ಸಂಬಂಧಿಯೇ ಆದ ಮುನಿರಾಜರಾಘವ ತಾನು ಮಂಗಳೂರಿನ ಇಸ್ಕಾನ್ ಟೆಂಪಲ್​ನಲ್ಲಿ ದೀಕ್ಷೆ ಪಡೆದಿದ್ದೇನೆ. ನಾನೊಬ್ಬ ದೇವ ಮಾನವ ಎಂದೆಲ್ಲಾ ಹೇಳಿ ನಿಮ್ಮ ಪತಿಯ ಹೆಸರಿನಲ್ಲಿರುವ  ಜಮೀನನ್ನ ನಿಮ್ಮ ಹೆಸರಿಗೆ ಮಾಡಿಕೊಡುತ್ತೇನೆಂದು ವಂಚಿಸಿದ್ದಾರೆ.

ಜಮೀನಿನಲ್ಲಿದ್ದ ಜ್ಯೋತಮ್ಮ ಪತಿ ವೆಂಕಟಸ್ವಾಮಿ ಸೇರಿದಂತೆ ಪೂರ್ವಿಕರ ಸಮಾಧಿಗಳನ್ನ ಜೆಸಿಬಿಗಳ ಮೂಲಕ ಧ್ವಂಸ ಮಾಡಲಾಗಿದೆ. ಜಮೀನು ಕಬಳಿಸಲು ನ್ಯಾಯಾಧೀಶರ ಸಹಿಯನ್ನೇ ನಕಲು ಮಾಡಿ ನ್ಯಾಯಾಂಗ ವಂಚನೆ ಎಸಗಲಾಗಿದೆ. ನಮ್ಮ ಜಮೀನು ನಮಗೆ ಕೊಡಿಸಿ, ಆ ಜಮೀನಿನಲ್ಲಿ ನನ್ನ ಪತಿಯ ಸಮಾಧಿ ಇದೆ ಎಂದು ಜ್ಯೋತಮ್ಮ ಕಣ್ಣೀರು ಹಾಕಿ ಗೋಳಾಡಿದ್ದಾರೆ. ವಂಚನೆ ಎಸಗಿದ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಒತ್ತಾಯಿಸಿದ್ದಾರೆ.

ಇನ್ನು ನಕಲಿ ದಾಖಲೆ ಸೃಷ್ಟಿಸಿ ಬೆಲೆ ಬಾಳುವ ಜಮೀನನ್ನ ಲಪಟಾಯಿಸುವ ಭೂಗಳ್ಳರು ಹೆಚ್ಚಾಗುತ್ತಿದ್ದಾರೆ. ಅದೇ ರೀತಿ ಆನೇಕಲ್ ತಾಲೂಕಿನಲ್ಲಿ ನ್ಯಾಯಾಧೀಶರ ಸಹಿಯನ್ನೇ ನಕಲು ಮಾಡಿ ವಂಚನೆ ಮಾಡಿರುವ ಗಂಭೀರ ಆರೋಪ ಕೇಳಿಬಂದಿದೆ‌. ಜಮೀನು ಕಳೆದುಕೊಂಡ ಕುಟುಂಬ ಕಣ್ಣೀರಿನಲ್ಲಿ ಕೈತೊಳೆಯುವಂತಾಗಿದ್ದು, ವಂಚನೆ ಎಸಗಿದ ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಲಾಗಿದೆ.

ಇದನ್ನೂ ನೋಡಿ: ಕಲ್ಯಾಣ ಕರ್ನಾಟಕ ಭಾಗದ ಶಾಲೆಗಳ ಸ್ಥಿತಿಗತಿಯೇನು ಸಚಿವರೇ? Janashakthi Media

Donate Janashakthi Media

Leave a Reply

Your email address will not be published. Required fields are marked *