ಬೆಂಗಳೂರು| ಸಹಾಯವಾಣಿ ಹೆಸರಿನಲ್ಲಿ ಕರೆ ಮಾಡಿ ಮಹಿಳೆಗೆ 2 ಲಕ್ಷ ರೂ. ವಂಚನೆ

ಬೆಂಗಳೂರು: ಸಹಾಯವಾಣಿ ಹೆಸರಿನಲ್ಲಿ ಕರೆ ಮಾಡಿ ಮಹಿಳೆಗೆ 2 ಲಕ್ಷ ರೂ. ವಂಚಿಸಲಾಗಿದ್ದೂ, ಗಿರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗ್ರಾಹಕರ ಸಮಸ್ಯೆಗಳಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಬ್ಯಾಂಕ್​ಗಳು ಸಹಾಯವಾಣಿಗಳನ್ನು ತೆರೆದಿರುತ್ತವೆ. ಬೆಂಗಳೂರು

ಬ್ಯಾಂಕ್‌ಗಳ ಈ ಕ್ರಮವನ್ನು ಸೈಬರ್​ ವಂಚಕರು ದುರ್ಬಳಕೆ ಮಾಡಿಕೊಂಡು ಮಹಿಳೆಗೆ ವಂಚಿಸಿದ್ದಾರೆ.

ನಗರದ 58 ವರ್ಷದ ಮಹಿಳೆಯೊಬ್ಬರಿಗೆ ಬ್ಯಾಂಕ್ ಪ್ರತಿನಿಧಿಯ ಸೋಗಿನಲ್ಲಿ ವಂಚಕ ಕರೆ ಮಾಡಿ, “ನಿಮ್ಮ ಖಾತೆಯಿಂದ ಬೇರೆ ಖಾತೆಗೆ 2 ಲಕ್ಷ ರೂ. ಹಣ ವರ್ಗಾವಣೆಯಾಗುತ್ತಿದೆ, ಈ ಹಣವನ್ನ ನೀವೇ ವರ್ಗಾಯಿಸಿದ್ದರೆ ಮೂರನ್ನು ಒತ್ತಿ, ಇಲ್ಲವಾಗಿದ್ದಲ್ಲಿ ಒಂದನ್ನು ಒತ್ತಿ” ಎಂದಿದ್ದಾನೆ. ಇದರಿಂದ ಗಾಬರಿಗೊಂಡ ಮಹಿಳೆ ಒಂದನ್ನು ಒತ್ತಿದ್ದಾರೆ.

ಇದನ್ನೂ ಓದಿ: ದಾವಣಗೆರೆ| ಫೈನಾನ್ಸ್ ಸಂಸ್ಥೆಗೆ ಮೋಸ ಮಾಡಿದ್ದ ಕಂಪೆನಿ ವ್ಯವಸ್ಥಾಪಕ ಬಂಧನ

ಬಳಿಕ, ವಂಚಕ ನಿಮ್ಮ ಬ್ಯಾಂಕ್ ಮ್ಯಾನೇಜರ್​ರನ್ನು ಸಂಪರ್ಕಿಸಿ ಎಂದು ಕರೆ ಕಟ್ ಮಾಡಿದ್ದಾನೆ. ಅನುಮಾನಗೊಂಡ ಮಹಿಳೆ ಬ್ಯಾಂಕ್‌ಗೆ ತೆರಳಿ ವಿಚಾರಿಸಿದಾಗ ಖಾತೆಯಲ್ಲಿದ್ದ 2 ಲಕ್ಷ ರೂ. ಹಣ ಮಾಯವಾಗಿತ್ತು. ತಕ್ಷಣ ಮಹಿಳೆ ರಾಷ್ಟ್ರೀಯ ಸೈಬರ್ ಕ್ರೈಮ್ ಸಹಾಯವಾಣಿ (1930)ಗೆ ಪ್ರಾಥಮಿಕ ದೂರು ನೀಡಿದ್ದಾಳೆ. ಗಿರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ನೋಡಿ: ನೈತಿಕ ನಿಷ್ಠಾವಂತ, ತಾತ್ವಿಕ ಹೃದಯವಂತ ಜಿ.ಸಿ. ಬಯ್ಯಾರೆಡ್ಡಿ – ಬರಗೂರು ರಾಮಚಂದ್ರಪ್ಪ Janashakthi Media

Donate Janashakthi Media

Leave a Reply

Your email address will not be published. Required fields are marked *