ಸಿಬಿಐ ಅಧಿಕಾರಿ ಹೆಸರಿನಲ್ಲಿ ಮಹಿಳೆಗೆ 24 ಲಕ್ಷ ರೂ. ವಂಚನೆ

ಕಾರ್ಕಳ:  ಜ. 7ರಂದು ಕಾರ್ಕಳದಲ್ಲಿ ಸಿಬಿಐ ಅಧಿಕಾರಿ ಹೆಸರಿನಲ್ಲಿ ಆನ್‌ಲೈನ್ ಮುಖಾಂತರ ಮಹಿಳೆಗೆ 24 ಲಕ್ಷ ರೂ. ವಂಚಿಸಿದ ಘಟನೆ ಸಂಭವಿಸಿದೆ. ಪ್ರೀಮ ಶರಿಲ್ ಡಿಸೋಜ ವಂಚನೆಗೊಳಗಾದವರು.

ಇವರ ಮೊಬೈಲ್‌ಗೆ ಜ. 7 ರಂದು ಅಪರಿಚಿತ ವ್ಯಕ್ತಿಯೊಬ್ಬರು ಕರೆ ಮಾಡಿ ತಾನು ದೆಹಲಿ ಟೆಲಿಕಾಂ ಇಲಾಖೆಯಿಂದ ಕಾಲ್ ಮಾಡುತ್ತಿದ್ದು, ನಿಮ್ಮ ಆಧಾರ್ ನಂಬ್ರದಿಂದ ಉತ್ತರ ಪ್ರದೇಶದಲ್ಲಿ ಬೇರೆ ಸಿಮ್ ಖರೀದಿಸಿ ಬೇರೆ ಬೇರೆ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿ ನಿಮ್ಮ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿದೆ. ಈ ಬಗ್ಗೆ ಸೈಬರ್ ಅಧಿಕಾರಿಯು ನಿಮ್ಮೊಂದಿಗೆ ಮಾತನಾಡುತ್ತಾರೆ ಎಂದು ತಿಳಿಸಿರುತ್ತಾರೆ.

ಇದನ್ನೂ ಓದಿ: ಸುಂಕದ ಗೋಡೆ ಕಟ್ಟುವ ಟ್ರಂಪ್‌ ಬೆದರಿಕೆ

ಆ ಬಳಿಕ ವೀಡಿಯೋ ಕಾಲ್ ಮಾಡಿ ಪೊಲೀಸ್ ಸಮವಸ್ತ್ರ ಧರಿಸಿದ ವ್ಯಕ್ತಿಯು ತಾನು ಸಿಬಿಐ ಅಧಿಕಾರಿ ಎಂದು ತಿಳಿಸಿ ನೀವು ತನಿಖೆಗೆ ಸಹಕರಿಸಬೇಕು ಈ ವಿಚಾರವನ್ನು ಯಾರ ಬಳಿಯಲ್ಲಿಯೂ ಹೇಳುವಂತಿಲ್ಲ ಹೇಳಿದರೆ ನಿಮ್ಮ ಗಂಡ ಮತ್ತು ಮಗುವಿಗೆ ತೊಂದರೆಯಾಗುತ್ತದೆ ಎಂದು ಹೇಳಿ ಪ್ರೀಮ ಶರಿಲ್ ಡಿಸೋಜ ಅವರ ಬ್ಯಾಂಕ್ ಖಾತೆಗಳಲ್ಲಿರುವ ಹಣದ ವಿವರ ಪಡೆದುಕೊಂಡು ಹಣವನ್ನು ಅವರು ತಿಳಿಸಿದ ಖಾತೆಗೆ ವರ್ಗಾವಣೆ ಮಾಡಬೇಕು ಇಲ್ಲವಾದರೆ ಅರೆಸ್ಟ್ ವಾರಂಟ್ ಕಳುಹಿಸುತ್ತೇವೆ ಎಂದು ಹೆದರಿಸಿದ್ದಾನೆ.

ಅದರಂತೆ ಪ್ರೀಮ ಶರಿಲ್ ಡಿಸೋಜ ಆಪಾದಿತರ ಫೆಡರಲ್ ಬ್ಯಾಂಕ್‌ನ ಖಾತೆಗೆ 14 ಲಕ್ಷ ರೂ. ಮತ್ತು ಯೆಸ್ ಬ್ಯಾಂಕ್ ಖಾತೆಗೆ 10 ಲಕ್ಷ ರೂ. ಹಣವನ್ನು ಎಫ್‌ಡಿ ಖಾತೆಯಿಂದ ಆರ್‌ಟಿಜಿಎಸ್ ಮೂಲಕ ವರ್ಗಾವಣೆ ಮಾಡಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಇದನ್ನೂ ನೋಡಿ: 1000 ದಿನಗಳನ್ನು ಪೂರೈಸಿ ಇಂದಿಗೂ ಮುಂದುವರಿದ ಚನ್ನರಾಯಪಟ್ಟಣ ಭೂ ಸ್ವಾಧೀನ ವಿರೋಧಿ ಹೋರಾಟದ ಆಳ ಅಗಲ…

Donate Janashakthi Media

Leave a Reply

Your email address will not be published. Required fields are marked *