ಬೆಂಗಳೂರು: ನಗರದಲ್ಲಿ ಜುಲೈ 11ರಂದು 148 ಹೊಸ ಎಲೆಕ್ಟ್ರಿಕ್ ಬಸ್ಗಳಿಗೆ ಚಾಲನೆ ನೀಡಿ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಕೆಪಿಎಸ್ ಶಾಲೆಗಳಲ್ಲಿ ಓದುವ ಮಕ್ಕಳಿಗೆ ಉಚಿತ ಬಸ್ ಪ್ರಯಾಣದ ಯೋಜನೆ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.
ಜುಲೈ 11 ಬೆಳಗ್ಗೆ ಈ ಕುರಿತು ಟ್ವೀಟ್ ಮಾಡಿದ್ದ ಡಿಕೆ ಶಿವಕುಮಾರ್ ಸರ್ಕಾರಿ ಶಾಲೆಗಳ ಬಲವರ್ಧನೆ ಮಾಡುವ ನಿಟ್ಟಿನಲ್ಲಿ ಶಾಲಾ ಮಕ್ಕಳಿಗೆ ಉಚಿತ ಬಸ್ ಆರಂಭಿಸಲು ತೀರ್ಮಾನಿಸಿದೆ ಎಂದು ಹೇಳಿಕೊಂಡಿದ್ದರು.
ಇದನ್ನೂ ಓದಿ: ದೂರ ತಿರ ಯಾನ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್
ಈ ಟ್ವೀಟ್ ಬಗ್ಗೆ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಉಪ ಮುಖ್ಯಮಂತ್ರಿಯಾಗಿ ಆ ರೀತಿಯ ಸಲಹೆಯನ್ನು ಕೊಟ್ಟಿದ್ದಾರೆ, ಅದು ಮೊದಲು ಹಣಕಾಸು ವಿಭಾಗಕ್ಕೆ ಹೋಗಿ ನಂತರ ಅದರ ವೆಚ್ಚ 10 ಕೋಟಿ ಮೀರಿದರೆ ಸಂಪುಟದಲ್ಲಿ ಚರ್ಚಿಸಿ ನಂತರ ತೀರ್ಮಾನ ತೆಗೆದುಕೊಳ್ಳುತ್ತೇವೆ ಸದ್ಯಕ್ಕೆ ಇನ್ನೂ ತೀರ್ಮಾನ ತೆಗೆದುಕೊಂಡಿಲ್ಲ ಎಂದರು.
ಇದನ್ನೂ ನೋಡಿ: ಪಾಲಾರ್ ಸಿನಿಮಾ | ಚನ್ನರಾಯಪಟ್ಟಣ ಭೂಸ್ವಾಧೀನ ಹೋರಾಟ Janashakthi Media
