ಗೃಹ ಜ್ಯೋತಿ ಯೋಜನೆ : ನೋಂದಣಿಗೆ 20 ರೂ.ಗಿಂತ ಹೆಚ್ಚುವರಿ ಹಣ ಪಡೆದರೆ ಕಠಿಣ ಕ್ರಮ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರದ ಐದು  ಯೋಜನೆಗಳಲ್ಲಿ ಗೃಹ ಜ್ಯೋತಿ ಯೋಜನೆ ಅಡಿಯಲ್ಲಿ 200 ಯೂನಿಟ್ ವರೆಗೆ ಉಚಿತ ವಿದ್ಯುತ್‌ ನೋಂದಾಣಿಯ 18-6- 2023  ರಂದು ಪ್ರಕ್ರೀಯೆ ಪ್ರಾರಂಭವಾಗಿದೆ. ರಾಜ್ಯದ ಗ್ರಾಹಕರು ಗೃಹ ಜ್ಯೋತಿ ಯೋಜನೆಗೆ ನೋಂದಣಿ ಮಾಡಿಸುವಾಗ ಹಣ ಕೇಳುವವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದೆ.  ಸರ್ಕಾರ ನಿಗದಿಪಡಿಸಿದ ಸೇವಾ ಶುಲ್ಕ 20 ರೂಪಾಯಿಗಳನ್ನು ಹೊರತುಪಡಿಸಿ ನೋಂದಣಿಗಾಗಿ ಗ್ರಾಹಕರು ಹೆಚ್ಚುವರಿ ಮೊತ್ತವನ್ನು ಪಾವತಿಸಬೇಕಾಗಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. 200 ಯೂನಿಟ್ ವರೆಗೆ ಉಚಿತ ವಿದ್ಯುತ್‌ ನೋಂದಣಿ ಸಂಪೂರ್ಣ ಉಚಿತವಾಗಿದೆ,

ಬೆಂಗಳೂರು ಒನ್ ಕೇಂದ್ರ, ಕರ್ನಾಟಕ ಒನ್ ಮತ್ತು ಗ್ರಾಮ ಒನ್ ಗಳಲ್ಲಿ ಗ್ರಾಹಕರಿಂದ 20 ರೂಪಾಯಿಗಿಂತ ಹೆಚ್ಚುವರಿ ನೋಂದಣಿ ಶುಲ್ಕ ವಸೂಲಿ ಮಾಡುತ್ತಿರುವ ಪ್ರಕರಣಗಳು ಸರ್ಕಾರದ ಗಮನಕ್ಕೆ ಬಂದಿದೆ. ಯಾವುದೇ ಕೇಂದ್ರಗಳು ನಿಯಮಗಳನ್ನು ಉಲ್ಲಂಘಿಸಿರುವುದು ಕಂಡುಬಂದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಸರ್ಕಾರದ ಅಧಿಕೃತ ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಲಾಗಿದೆ. ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ರವರು ನಿನ್ನೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸುವ ಸಾರ್ವಜನಿಕರಿಂದ ಹಣ ಪಡೆದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ:ಗೃಹಜ್ಯೋತಿಗೆ ಸರ್ವರ್ ಸಮಸ್ಯೆ : ದುಡಿಮೆ ಬಿಟ್ಟು ನಿತ್ಯವೂ ಅಲೆದಾಟ

ನಂತರ ಗೃಹ ಜ್ಯೋತಿ ಯೋಜನೆಗೆ ಅರ್ಜಿ ಹಾಕಲು ಕೆಲವರು ವೈಯಕ್ತಿಕವಾಗಿ ಹಾಗೂ ಕೆಲವು ಏಜೆನ್ಸಿ ಮೂಲಕ ಸಾರ್ವಜನಿಕರಿಂದ ಹಣ ಪಡೆಯುತ್ತಿರುವ ಬಗ್ಗೆ ದೂರುಗಳು ಕೇಳಿಬಂದಿವೆ. ಅರ್ಜಿ ಸಲ್ಲಿಸಲು ನೀವು ಯಾರಿಗೂ ಲಂಚ ನೀಡಬೇಕಾಗಿಲ್ಲ. ನೀವೇ ನಿಮ್ಮ ಮೊಬೈಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಇದಕ್ಕೆ ಸಾರ್ವಜನಿಕರಿಂದ ಹಣ ಪಡೆಯುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಎಂದು ಅವರು ಈ ಬಗ್ಗೆ ಟ್ವೀಟ್ ಕೂಡ ಮಾಡಿದ್ದಾರೆ. 

Donate Janashakthi Media

Leave a Reply

Your email address will not be published. Required fields are marked *