ಮುಂದಿನ ಆರು ತಿಂಗಳವರೆಗೆ ಇಂದಿರಾ ಕ್ಯಾಂಟೀನ್‌ನಲ್ಲಿ ಆಹಾರ ವಿತರಿಸಿ: ಸಿದ್ಧರಾಮಯ್ಯ

ಬೆಂಗಳೂರು: ಇಂದಿರಾ ಕ್ಯಾಂಟೀನ್ ಗಳಲ್ಲಿ ವಿತರಿಸುತ್ತಿರುವ ಉಚಿತ ಆಹಾರವನ್ನು ಮುಂದಿನ ಆರು ತಿಂಗಳವರೆಗೆ ಮುಂದುವರೆಸಬೇಕು.  ಹೆಚ್ಚಿನ ಬೇಡಿಕೆಯಿರುವ ಕಡೆ ಸಂಚಾರಿ ಇಂದಿರಾ ಕ್ಯಾಂಟೀನ್ ಮೂಲಕ ಆಹಾರ ಪೂರೈಕೆ ಮಾಡಬೇಕು ಎಂದು ಸಿದ್ಧರಾಮಯ್ಯ ಅವರು ರಾಜ್ಯ ಸರಕಾರವನ್ನು ಆಗ್ರಹಿಸಿದ್ದಾರೆ.

ಇದನ್ನು ಓದಿ: ಬೆಂಗಳೂರು ಬಿಟ್ಟು ಉಳಿದೆಡೆ ಇಂದಿರಾ ಕ್ಯಾಂಟಿನ್‌ ನಲ್ಲಿ ಉಚಿತ ಊಟ

ಕಾಂಗ್ರೆಸ್‌ ಪಕ್ಷದ ನಾಯಕ ಹಾಗೂ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಅವರು ʻʻಬಡಜನರಿಗೆ ಕೈಗೆಟುಕುವ ದರದಲ್ಲಿ ಆಹಾರ ಪದಾರ್ಥಗಳನ್ನು ವಿತರಣೆ ಮಾಡಬೇಕು ಎಂಬುದು ಇಂದಿರಾ ಕ್ಯಾಂಟೀನ್ ಯೋಜನೆಯ ಉದ್ದೇಶವಾಗಿತ್ತು. ಆದರೆ ಈಗಿನ ಬಿಜೆಪಿ ಸರ್ಕಾರ  ಕ್ಯಾಂಟೀನ್ ಗಳಿಗೆ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಹೆಸರು ಇಡಲಾಗಿದೆ ಎಂಬ ಏಕೈಕ ಕಾರಣದಿಂದ ಕ್ಯಾಂಟೀನ್‌ಗಳಿಗೆ ಅನುದಾನ ಬಿಡುಗಡೆ ಮಾಡದೆ, ಮುಚ್ಚಲು ಹೊರಟಿದೆʼʼ ಎಂದು ಆರೋಪಿಸಿದ್ದಾರೆ.

ಕೊಪ್ಪಳದ ಇಂದಿರಾ ಕ್ಯಾಂಟೀನ್ ಗೆ ಭೇಟಿ ನೀಡಿ ʻʻನಮ್ಮ ಕಾಂಗ್ರೆಸ್‌ ಸರಕಾರದ ಅವಧಿಯಲ್ಲಿ ಬೆಂಗಳೂರು ನಗರದ 198 ವಾರ್ಡ್‌ಗಳು ಹಾಗೂ ರಾಜ್ಯದ ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳು ಸೇರಿದಂತೆ ಒಟ್ಟು 461 ಇಂದಿರಾ ಕ್ಯಾಂಟೀನ್‌ಗಳನ್ನು ಸ್ಥಾಪನೆಗೆ ಕ್ರಮ ವಹಿಸಲಾಗಿತ್ತುʼʼ ಎಂದು ಅವರು ತಿಳಿಸಿದರು.

ಇದನ್ನು ಓದಿ: ಪೌರಕಾರ್ಮಿಕರಿಗೆ ಆಹಾರದ ಕಿಟ್ ವಿತರಿಸಿದ ಜೆಡಿಎಸ್

ಕಳೆದ ಎರಡು ತಿಂಗಳು ಕೋವಿಡ್‌ ತಡೆಗಟ್ಟುವ ನಿಟ್ಟಿನಲ್ಲಿ ಜಾರಿಯಲ್ಲಿದ್ದ ಲಾಕ್‌ಡೌನ್‌ ಪರಿಣಾಮವಾಗಿ ಸಾಕಷ್ಟು ಒತ್ತಡದ ನಂತರ ರಾಜ್ಯ ಸರಕಾರ ಇಂದಿರಾ ಕ್ಯಾಂಟೀನ್‌ನಲ್ಲಿ ಉಚಿತ ಆಹಾರ ವಿತರಣೆ ಮಾಡಿತು. ಆದರೆ, ಈಗ ಲಾಕ್‌ಡೌನ್‌ ತೆರವಾಗಿದ್ದು, ಇಂದಿರಾ ಕ್ಯಾಂಟೀನ್‌ಗಳಲ್ಲಿ ಉಚಿತ ಆಹಾರ ವಿತರಣೆ ಮಾಡಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಸಿದ್ಧರಾಮಯ್ಯ ಅವರು ಒತ್ತಾಯಿಸಿದ್ದಾರೆ.

ರಾಜ್ಯ ಸರ್ಕಾರ ಹಿಂದಿನಂತೆ ಕ್ಯಾಂಟೀನ್ ನಿರ್ವಹಣೆಗೆ ಅನುದಾನ ನೀಡದೆ, ಬೀಗ ಹಾಕಬೇಕಾದ ಸ್ಥಿತಿಗೆ ತಳ್ಳಲಿದೆ. ಈ ಬಗ್ಗೆ ಜನ ಜಾಗೃತರಾಗಬೇಕು. ಇಂಥದ್ದೊಂದು ಜನಪರವಾದ ಯೋಜನೆ ನಿಲ್ಲದಂತೆ ಜನರೇ ಸರ್ಕಾರದ ಕಿವಿಹಿಂಡುವ ಕೆಲಸ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *