ಜೂನ್‌ 01 ರಿಂದ ರಾಜ್ಯದ ಎಲ್ಲ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ – ರಾಮಲಿಂಗಾರೆಡ್ಡಿ ಭರವಸೆ

ಬೆಂಗಳೂರು: ಕಾಂಗ್ರೆಸ್‌ ಗ್ಯಾರಂಟಿಗಳಲ್ಲಿ ಒಂದಾದ ರಾಜ್ಯದ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ಅನುಷ್ಠಾನಕ್ಕೆ ಬರುವುದರಲ್ಲಿ ಯಾವುದೇ ಅನುಮಾನ ಇಲ್ಲ. ಜೂನ್‌ 1 ರಂದು ಮುಖ್ಯಮಂತ್ರಿಗಳು ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ ಎಂದು ನೂತನ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಚಿವ ರಾಮಲಿಂಗಾ ರೆಡ್ಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ವಿಚಾರವಾಗಿ ಸಿಎಂ ನೇತೃತ್ವದಲ್ಲಿ ನಾಳೆ  ಸಭೆ ಜರುಗಲಿದೆ, ಅಲ್ಲಿ ಅನುಷ್ಟಾನದ ಕುರಿತು ಚರ್ಚೆ ಆಗಲಿದೆ ಎಂದಿದ್ದಾರೆ.

ಇನ್ನು ರಾಜ್ಯದ ಎಲ್ಲ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅನುವು ಮಾಡಿಕೊಡಲಾಗುತ್ತದೆ. ಮಹಿಳೆಯರಿಗೆ ಪ್ರತ್ಯೇಕ ಬಸ್ ಇರಲ್ಲ, ನಾಲ್ಕು ನಿಗಮದ ಬಸ್​ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ವ್ಯವಸ್ಥೆ ಮಾಡಲಾಗುತ್ತದೆ ಎಂದೂ ಸಚಿವರು ತಿಳಿಸಿದ್ದಾರೆ. ಈ ಮೂಲಕ ಯಾವುದೇ ನಿರ್ಬಂಧ ಇರಲ್ಲ ಎಂದು ಸಚಿವರು ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ.

ಇದನ್ನೂ ಓದಿಉಚಿತ ಸವಲತ್ತುಗಳ ರಾಜಕೀಯ

ನಮ್ಮ ನಾಲ್ಕು ಸಾರಿಗೆ ಸಂಸ್ಥೆಗಳಲ್ಲಿ 240 ಘಟಕಗಳಿದ್ದು, 21,574 ವಾಹನಗಳನ್ನ ಒಳಗೊಂಡಿದೆ. 4 ನಿಗಮಗಳಿಂದ ಒಟ್ಟು 82.51 ಲಕ್ಷ ಪ್ರಯಾಣಿಕರು ಪ್ರಯಾಣಿಸುತ್ತಿದ್ದಾರೆ. ಇದರೊಂದಿಗೆ ಈ ವರ್ಷ 4,500ಕ್ಕೂ ಹೆಚ್ಚು ಬಸ್‌ಗಳು ಸೇರ್ಪಡೆಯಾಗುತ್ತಿವೆ. ಇನ್ನಷ್ಟು ಹೊಸ ಬಸ್‌ಗಳು ಬರಬೇಕಿದೆ. ಇದರಿಂದ ಪ್ರತಿದಿನ 82.51 ಲಕ್ಷ ಪ್ರಯಾಣಿಕರು ಓಡಾಡಬಹುದು ಎಂದು ಮಾಹಿತಿ ನೀಡಿದ್ದಾರೆ.

ಪ್ರತಿ ವರ್ಷ ನಾಲ್ಕು ನಿಗಮ ಸೇರಿ 8,946 ಕೋಟಿ ಆದಾಯ ಬರುತ್ತದೆ. ಬುಧವಾರ ಮಧ್ಯಾಹ್ನ 12 ಗಂಟೆಗೆ ಸರ್ಕಾರದ ಜೊತೆ ಮತ್ತೊಂದು ಸಭೆ ಇದೆ. ಅಲ್ಲಿ ಸಿಎಂ ಜೊತೆಗೆ ಗ್ಯಾರಂಟಿಗಳ ಬಗ್ಗೆ ಚರ್ಚಿಸಲಾಗುತ್ತದೆ. ಸಿಎಂ ಸಹ ಉಚಿತ ಬಸ್ ಸೇವೆ ಕಲ್ಪಿಸುವ ಬಗ್ಗೆ ಮಾತನಾಡಿದ್ದಾರೆ ಎಂದು ವಿವರಿಸಿದರು.

ಮಹಿಳೆಯರಿಗೆ ಉಚಿತ ಬಸ್ ಸೇವೆ ಜಾರಿಯಾದರೆ, ಪ್ರತಿ ವರ್ಷ ಅಂದಾಜು 3,200 ಕೋಟಿ ರೂ. ಖರ್ಚು ಬೇಕಾಗುತ್ತದೆ. ಸಾರಿಗೆ 4 ನಿಗಮ ನಷ್ಟದಲ್ಲಿವೆ. ಹಾಗಾಗಿ ಸರ್ಕಾರ ಸಹಾಯಧನ ನೀಡಿದರೆ ಯೋಜನೆ ಜಾರಿಗೆ ಅನುಕೂಲವಾಗುತ್ತದೆ. ಕೊರೊನಾ ಸಂದರ್ಭದಲ್ಲಿ ದೊಡ್ಡ ಮಟ್ಟದಲ್ಲಿ ನಷ್ಟ ಉಂಟಾಗಿತ್ತು. ಅದನ್ನು ಸರಿದೂಗಿಸಲು ನಿಗಮದ ಕೆಲವು ಆಸ್ತಿಗಳನ್ನು ಅಡವಿಟ್ಟು ಸಾಲ ಪಡೆಯಲಾಗಿದೆ. ಈಗಾಗಲೇ ಹಲವು ನಿಗಮಗಳಿಂದ ಸಾವಿರಾರು ಕೋಟಿ ಹಣ ಬರಬೇಕಿದೆ ಎಂದು ಅಧಿಕಾರಿಗಳು ಸಚಿವರಿಗೆ ಮನವರಿಕೆ ಮಾಡಿದರು.

Donate Janashakthi Media

Leave a Reply

Your email address will not be published. Required fields are marked *