ಅಧಿಕಾರಿಗಳಿಂದ ರೇವಣ್ಣ ನಿವಾಸದಲ್ಲಿ‌ ಮಹಜರು

ಹಾಸನ: ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಕ್ಕೆ ಸಂಬಂಧಿಸಿದಂತೆ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿರುವ ಮಾಜಿ ಸಚಿವ, ಶಾಸಕ ಎಚ್‌ಡಿ ರೇವಣ್ಣ ನಿವಾಸಕ್ಕೆಎಸ್‌ಐಟಿ ಅಧಿಕಾರಿಗಳು ಐದು ವಾಹನಗಳಲ್ಲಿ ಸಂತ್ರಸ್ತ ಮಹಿಳೆಯೊಂದಿಗೆ  ಭೇಟಿ ನೀಡಿದ್ದು,ಸ್ಥಳ ಮಹಜರು ನಡೆಸಿದ್ದಾರೆ.

ಎಸ್ ಐಟಿ ಅಧಿಕಾರಿಗಳಿಗೆ ಸ್ಥಳೀಯ ಪೊಲೀಸರು ಸಾಥ್ ನೀಡಿದ್ದಾರೆ .ಹೆಚ್ ಡಿ ರೇವಣ್ಣರಿಂದ ಲೈಂಗಿಕ ದೌರ್ಜನ್ಯ ಎಂದು ಆರೋಪಿಸಿ ಸಂತ್ರಸ್ತ ಮಹಿಳೆ ದೂರು ದಾಖಲಿಸಿದ್ದರು.

ಇದನ್ನೂ ಓದಿ: ಪೆನ್ ಡ್ರೈವ್ ವಿಚಾರದಲ್ಲಿ ಕುಮಾರಸ್ವಾಮಿ ಆಗಾಗ್ಗೆ ನಿಲುವು ಬದಲಿಸುತ್ತಿರುವುದೇಕೆ?: ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನೆ

ಸ್ಥಳ ಮಹಜರು ಪ್ರಕ್ರಿಯೆಯನ್ನ ಅಧಿಕಾರಿಗಳು ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದಾರೆ.

ಇದನ್ನೂ ನೋಡಿ: ಹಾಸನ ಪೆನ್ ಡ್ರೈವ್ ಪ್ರಕರಣ: ಕಾಂಗ್ರೆಸ್ ಸುದ್ದಿಗೋಷ್ಠಿ

Donate Janashakthi Media

Leave a Reply

Your email address will not be published. Required fields are marked *