ಕಾಲೇಜು ಪ್ರಾರಂಭದ ಸಿಹಿಯೊಂದಿಗೆ ಹಿಜಾಬ್ ನಿಷೇಧದ ಕಹಿ

ಬೆಂಗಳೂರು: ನಾಳೆಯಿಂದ (9 ಜೂನ್),2022-23 ನೇ ಸಾಲಿನ ಪದವಿ ಪೂರ್ವ ಕಾಲೇಜುಗಳ ತರಗತಿ  ಪ್ರಾರಂಭವಾಗುತ್ತಿರುವದರಿಂದ ಪದವಿ ಪೂರ್ವ ಶಿಕ್ಷಣ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ.

ಕೊರೊನಾ 3 ಅಲೆಗಳ ಆತಂಕದ ನಡುವೆ ಪೂರ್ಣ ಪ್ರಮಾಣದಲ್ಲಿ ಭೌತಿಕ ತರಗತಿಗಳು ಪ್ರಾರಂಭವಾಗುತ್ತಿವೆ. ಕೊರೊನಾ ಹಿನ್ನಲೆಯಲ್ಲಿ ಕಾಲೇಜುಗಳಿಗೆ ರಜೆ ನೀಡಿ, ಆನ್‍ಲೈನ್ ತರಗತಿಗಳನ್ನು ನಡೆಸಲಾಗಿತ್ತು. ಕೋವಿಡ್ ಸೋಂಕಿತರ ಸಂಖ್ಯೆ  ನಿಯಂತ್ರಣದಲ್ಲಿರುವ ಕಾರಣ ಕಾಲೇಜು ಪ್ರಾರಂಭಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈಗಾಗಲೇ ಕಾಲೇಜು ಪ್ರಾರಂಭಕ್ಕೆ ಪಿಯುಸಿ ಬೋರ್ಡ್ ಮಾರ್ಗಸೂಚಿ ಮತ್ತು ವೇಳಾಪಟ್ಟಿ ಪ್ರಕಟ ಮಾಡಿದೆ.

ಕಾಲೇಜುಗಳಲ್ಲಿ ಕಡ್ಡಾಯವಾಗಿ ಸಮವಸ್ತ್ರ ಧರಿಸಬೇಕು ಎಂದು ಮಾರ್ಗಸೂಚಿಯಲ್ಲೆ ತಿಳಿಸಿದೆ. ಕಾಲೇಜು ಅಭಿವೃದ್ಧಿ ಸಮಿತಿ ನಿಗದಿ ಮಾಡಿರುವ ಸಮವಸ್ತ್ರವನ್ನು ವಿದ್ಯಾರ್ಥಿಗಳು ಧರಿಸಬೇಕು. ಸಮವಸ್ತ್ರ ಇಲ್ಲದೆ ಹೋದರೆ ಧಾರ್ಮಿಕ ಭಾವನೆಗೆ ಧಕ್ಕೆ ಆಗದಂತಹ ವಸ್ತ್ರವನ್ನು ವಿದ್ಯಾರ್ಥಿಗಳು ಧರಿಸಬೇಕು ಎಂದು ತಿಳಿಸಲಾಗಿದೆ. ಹೈಕೋರ್ಟ್ ತೀರ್ಪಿನ ಅನ್ವಯ ಸಮವಸ್ತ್ರ ಧರಿಸುವಂತೆ ಮಾರ್ಗಸೂಚಿಯಲ್ಲಿ ಶಿಕ್ಷಣ ಇಲಾಖೆ ಉಲ್ಲೇಖ ಮಾಡಿದೆ.

Donate Janashakthi Media

Leave a Reply

Your email address will not be published. Required fields are marked *