ಶಿರಸಿ : ಖಾಸಗಿ ಸಂಸ್ಥೆಗಳ ಎಫ್‌ಎಸ್‌ಎಲ್ ವರದಿಗಳಿಗೆಲ್ಲಾ ಸರ್ಕಾರ ಮಾನ್ಯತೆ ಕೊಡುವುದಿಲ್ಲ. ಪೊಲೀಸ್ ಇಲಾಖೆ ನೀಡುವ ವರದಿಯೇ ಅಧಿಕೃತ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಖಾಸಗಿ
ಅವರು ಇಂದು ಉತ್ತರ ಕನ್ನಡ ಜಿಲ್ಲೆಯ ಶಿರಸಿ ಯಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸುತ್ತಾ, ಖಾಸಗಿ ಸಂಸ್ಥೆ ನೀಡುವ FSL ವರದಿಯನ್ನು ಸರ್ಕಾರ ಒಪ್ಪುವುದಿಲ್ಲ, ಪೊಲೀಸ್ ಇಲಾಖೆ ನೀಡುವ ವರದಿಯೇ ಅಧಿಕೃತ ಎಂದರು.
ಬಿಜೆಪಿಗೆ ರಾಜಕೀಯ ಮಾಡುವುದು ಬಿಟ್ಟರೆ ಬೇರೆ ಏನೂ ಗೊತ್ತಿಲ್ಲ, ರಾಜ್ಯಸಭಾ ಚುನಾವಣೆಯಲ್ಲಿ ಅವರ ಅಭ್ಯರ್ಥಿ ಸೋತಿರುವ ಹತಾಶೆಯಿಂದ ಏನನ್ನೋ ಮಾತನಾಡುತ್ತಿದ್ದಾರೆ. ತಪ್ಪಿತಸ್ಥರ ಮೇಲೆ ಕ್ರಮ ಜರುಗಿಸಲು ಗೃಹ ಇಲಾಖೆ ಇದೆ. ಸರ್ಕಾರ ಇಲಾಖೆಗೆ ಸಂಪೂರ್ಣ ಸಹಕಾರ ನೀಡುತ್ತಿದೆ ಎಂದರು.
ಬಿಜೆಪಿಯವರು ಕಾಂಗ್ರೆಸ್ ನಾಯಕರನ್ನು ಸೆಳೆಯಲು ಪ್ರಯತ್ನಿಸಿದಾರೆ ಎಂಬ ಬಿ.ಆರ್ ಪಾಟೀಲ್ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಅವರು ಯಾವತ್ತೂ ಜನರ ಆಶಿರ್ವಾದಿಂದ ಅಧಿಕಾರಕ್ಕೆ ಬಂದಿಲ್ಲ. ಬಿಜೆಪಿಯವರು ಆಪರೇಷನ್ ಕಮಲ ಮಾಡುವುದರಲ್ಲಿ ನಿಸ್ಸೀಮರು. ಈಗ ಮತ್ತೆ ಅದೆ ಚಾಳಿಯನ್ನು ಮುಂದುವರಿಸುತ್ತಿದ್ದಾರೆ. ಅವರು ದೇಶದ ಅನೇಕ ರಾಜ್ಯಗಳಲ್ಲಿ ಆಪರೇಷನ್ ಮಾಡಿ ಅಧಿಕಾರಕ್ಕೆ ಬಂದಿದ್ದಾರೆ ಎಂದು ಕುಟಿಕಿದರು. ಖಾಸಗಿ
ಇದನ್ನೂ ಓದಿ : ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಕೂಗಿರುವುದು ಎಫ್ ಎಸ್ ಎಲ್ ನಲ್ಲಿ ಸಾಬೀತು: ಡಾ. ಜಿ ಪರಮೇಶ್ವರ್ ಖಾಸಗಿ
ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಅಧ್ಯತೆಯಲ್ಲಿ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗಿದೆ. ಜಿಲ್ಲಾಧಿಕಾರಿಗಳ ಖಾತೆಯಲ್ಲಿ 854 ಕೋಟಿ ರೂ ಪಿಡಿ ಖಾತೆಯಲ್ಲಿದೆ. ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಉಚಿತ ಸಹಾಯವಾಣಿ ಆರಂಭಿಸಲಾಗುವುದು. ಸಚಿವರು ಮತ್ತು ಶಾಸಕರ ಅಧ್ಯಕ್ಷತೆ ಯ ಜಿಲ್ಲಾ ಮತ್ತು ತಾಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಭೆಗಳನ್ನು ನಡೆಸುವಂತೆ ಸೂಚನೆ ನೀಡಲಾಗಿದೆ. ಪ್ರತೀ ವಾರಕ್ಕೊಮ್ಮೆ ಪಿಡಿಒ ಗಳು ಮತ್ತು ವಿಎ ಗಳ ಸಭೆ ನಡೆಸುವಂತೆ ಸೂಚನೆ ನೀಡಲಾಗಿದೆ. ಈ ಕಾರ್ಯದಲ್ಲಿ ನಿರ್ಲಕ್ಷ್ಯ ವಹಿಸುವ ಡಿಸಿ ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು. ಖಾಸಗಿ
ವಿಡಿಯೋ ನೋಡಿ : ಖಾಸಗಿ ಕೆಲಸಕ್ಕೆ ಸರ್ಕಾರಿ ವಾಹನ!3600 ಕೋಟಿ ರೂ ಅನಗತ್ಯ ಹೊರೆ!!