ಪಿಹೆಚ್‌ಸಿಗಳಲ್ಲಿ ಕಾರ್ಯವೈಖರಿ : ಸೇವೆಗಳ ಲಭ್ಯತೆ ಕುರಿತು ಪರಿಶೀಲಿಸಿ ವರದಿ ನೀಡುವಂತೆ ಸೂಚನೆ

ಬೆಂಗಳೂರು: ಕೋವಿಡ್‌ ಸಂದರ್ಭದಲ್ಲಿ ಆರೋಗ್ಯ ಇಲಾಖೆ ಅಡಿಯಲ್ಲಿ ಬೆಂಗಳೂರಿನ 48 ಪ್ರಾಥಮಿಕ ಆರೋಗ್ಯ ಕೇಂದ್ರಗಳ ನಿರ್ವಹಣೆಯ ಹೊಣೆಯನ್ನು ಬಿಬಿಎಂಪಿ ವ್ಯಾಪ್ತಿಗೆ ವಹಿಸಲಾಗಿತ್ತು. ಅಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರು ಸೇರಿ ಸಿಬ್ಬಂದಿಯ ವೇತನ ಆರೋಗ್ಯ ಇಲಾಖೆಯಿಂದ ಪಾವತಿ ಮಾಡಲಾಗುತ್ತಿದೆ. ಆದರೆ, ಪಿಹೆಚ್‌ಸಿ ಗಳಲ್ಲಿ ಕಾರ್ಯವೈಖರಿ ಸೇವೆಗಳ ಲಭ್ಯತೆ ಕುರಿತು ಆರೋಗ್ಯ ಇಲಾಖೆಗಾಗಲಿ, ಬಿಬಿಎಂಪಿಗಾಗಲಿ ವರದಿ ಸಲ್ಲಿಕೆಯಾಗುತ್ತಿಲ್ಲ ಎಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಪಿಹೆಚ್‌ಸಿ 

ಇದನ್ನು ಗಮನಿಸಿದ ಮುಖ್ಯಮಂತ್ರಿಗಳ ಕಚೇರಿಯ ಕುಂದುಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ಪರಿಶೀಲಿಸಿ ವರದಿ ನೀಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದರು.

ಇದನ್ನೂ ಓದಿ : ಕನ್ನಡ ಸಾಹಿತ್ಯ ಸಮ್ಮೇಳನ ಮಂಡ್ಯ : ಬೇಳೆಯ ಜೊತೆ ಮೂಳೆ… ಹಪ್ಪಳದ ಜೊತೆ ಕಬಾಬ್ ಇರಲಿ!

48 ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮಹದೇವಪುರ ವಲಯದ ಯಮಲೂರು ಆರೋಗ್ಯ ಕೇಂದ್ರವನ್ನು ಮುಚ್ಚಲಾಗಿದ್ದು, ಉಳಿದ 47 ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಖಾಯಂ ಸಿಬ್ಬಂದಿಗಳಿಗೆ ಬೆಂಗಳೂರು ನಗರ ಜಿಲ್ಲೆಯಿಂದ ಹಾಗೂ ಎನ್‌ಯುಹೆಚ್‌ಎಂ ಗುತ್ತಿಗೆ ಸಿಬ್ಬಂದಿಗಳಿಗೆ ಪಾಲಿಕೆಯ ಎನ್‌ಯುಹೆಚ್‌ಎಂ ವಿಭಾಗದಿಂದ ವೇತನವನ್ನು ಪಾವತಿಸಲಾಗುತ್ತಿದೆ.

ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಅನುಷ್ಠಾನ ಮತ್ತು ನಿರ್ವಹಣೆಯನ್ನು ಪಾಲಿಕೆಯ ಆಯಾ ವಲಯಗಳ ಆರೋಗ್ಯಾಧಿಕಾರಿಗಳು ಮತ್ತು ಆರೋಗ್ಯ ವೈದ್ಯಾಧಿಕಾರಿಗಳು ನಿರ್ವಹಿಸುತ್ತಿದ್ದಾರೆ ಎಂದು ಬಿಬಿಎಂಪಿ ಮುಖ್ಯ ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ನೋಡಿ : ಕೋವಿಡ್‌ ಹಣ ತಿಂದವರನ್ನು ಬಿಡಲ್ಲ: ಡಿಸಿಎಂ ಡಿಕೆ ಶಿವಕುಮಾರ್ Janashakthi Media

Donate Janashakthi Media

Leave a Reply

Your email address will not be published. Required fields are marked *