ಗುರ್ಲಾಪುರ : ಮೂಡಲಗಿ ತಾಲ್ಲೂಕಿನ ಗುರ್ಲಾಪುರದಲ್ಲಿ ನಡೆಸಿರುವ ಅನಿರ್ದಿಷ್ಟಾವಧಿ ಧರಣಿ ಎಂಟನೇ ದಿನಕ್ಕೆ ಕಾಲಿಟ್ಟಿದೆ. ಕಬ್ಬಿಗೆ ₹3,500 ದರ ನೀಡಬೇಕು ಎಂದು ಆಗ್ರಹಿಸಿ ರೈತರು ಗುರುವಾರ ಮತ್ತಷ್ಟು ಆಕ್ರೋಶಗೊಂಡ ಪ್ರತಿಭಟನಕಾರರು, ಸಕ್ಕರೆ ಸಚಿವ ಶಿವಾನಂದ ಪಾಟೀಲ ಅವರ ಅಣಕು ಶವಯಾತ್ರೆ ನಡೆಸಿದರು. ‘ಸತ್ತುಹೋದ ಸಕ್ಕರೆ ಸಚಿವ’ ಎಂಬ ಬ್ಯಾನರ್ ಹಾಕಿ, ಬಾಯಿ ಬಾಯಿ ಬಡಿದುಕೊಂಡು ಅತ್ತರು. ಗುರ್ಲಾಪುರ
ಇದನ್ನೂ ಓದಿ : ಬೆಂಗಳೂರು | ಸಾರ್ವಜನಿಕ ಸ್ಥಳದಲ್ಲಿ ಸಭೆಗಳನ್ನು ನಡಸಲು ಅನುಮತಿ ಕಡ್ಡಾಯ – ಹೈಕೋರ್ಟ್ ಆದೇಶ
ಜಿಲ್ಲೆಯ ವಿವಿಧೆಡೆಯಿಂದ 50ಕ್ಕೂ ಹೆಚ್ಚು ಮಠಾಧೀಶರು ಕೂಡ ರೈತರ ಧರಣಿ ಬೆಂಬಲಿಸಿ ಪಾಲ್ಗೊಂಡರು. ಹಲವು ಶಾಲೆ– ಕಾಲೇಜುಗಳ ವಿದ್ಯಾರ್ಥಿಗಳೂ ಗುರ್ಲಾಪುರದತ್ತ ಧಾವಿಸಿದರು.
ರೈತರ ಬಗ್ಗೆ ಕನಿಷ್ಠ ಕಾಳಜಿ ತೋರದ ಸರ್ಕಾರಕ್ಕೆ ಧಿಕ್ಕಾರ. ಮುಖ್ಯಮಂತ್ರಿ ಸಿದ್ದರಾಮಯ್ಯ, ಸಕ್ಕರೆ ಸಚಿವ ಶಿವಾನಂದ ಪಾಟೀಲ ಅವರು ‘ಇದ್ದೂ ಸತ್ತಂತೆ’ ಎಂದು ಘೋಷಣೆ ಮೊಳಗಿಸಿದರು. ತಾಳ್ಮೆ ಕಟ್ಟೆಯೊಡೆದಂತೆ ರೈತರು ಕಟು ಪದಗಳಲ್ಲಿ ಖಂಡಿಸಿದರು.
ರೈತರ ಹೋರಾಟ ಬೆಂಬಲಿಸಿ ಮೂಡಲಗಿ ಬಂದ್ ಮಾಡಲಾಯಿತು. ವ್ಯಾಪಾರಿಗಳು, ಖಾಸಗಿ ವಾಹನಗಳ ಮಾಲೀಕರು, ಶಾಲೆ– ಕಾಲೇಜಗಳ ವಿದ್ಯಾರ್ಥಿಗಳೂ ಇದಕ್ಕೆ ಬೆಂಬಲ ಸೂಚಿಸಿದರು. ಪಟ್ಟಣದ ಎಲ್ಲ ವ್ಯಾಪಾರಿಗಳು ಸ್ವಯಂ ಪ್ರೇರಣೆಯಿಂದಲೇ ಅಂಗಡಿ– ಮುಂಗಟ್ಟುಗಳನ್ನು ಬಂದ್ ಮಾಡಿದರು. ಮುಖ್ಯ ಮಾರುಕಟ್ಟೆಗಳ ಎಲ್ಲ ಮಳಿಗೆಗಳು ಬಾಗಿಲು ಮುಚ್ಚಿದ್ದರಿಂದ ಇಡೀ ಪಟ್ಟಣ ಬಿಕೋ ಎಂದಿತು.
ಮುಗಳಖೋಡದ ಯುವಕರೂ ಧರಣಿ ಬೆಂಬಲಿಸಿ, ಬೈಕ್ ಜಾಥಾ ನಡೆಸಿದರು. ಅಪಾರ ಸಂಖ್ಯೆಯ ಯುವಕರು ಮುಗಳಖೋಡದಿಂದ ಗುರ್ಲಾಪುರದ ಧರಣಿ ಸ್ಥಳದವರೆಗೂ ರ್‍ಯಾಲಿ ನಡೆಸಿದರು.
ಇದನ್ನೂ ನೋಡಿ : ಬಿಹಾರ ಚುನಾವಣೆ | ಭರಪೂರ ಭರವಸೆ -ಬದಲಾವಣೆಯತ್ತ ಮತದಾರರ ಒಲವು Janashakthi Media | Bihar Election 2025
