ಪಾರ್ಕಿಂಗ್ ಸಮಸ್ಯೆ | ಶಾಶ್ವತ ಪರಿಹಾರಕ್ಕೆ ಕ್ರಮ – ಡಾ. ಜಿ.ಪರಮೇಶ್ವರ್

ಬೆಂಗಳೂರು: ಬಿಬಿಎಂಪಿ ಮತ್ತು ಸಾರಿಗೆ ಇಲಾಖೆಯೊಂದಿಗೆ ಚರ್ಚಿಸಿ ನಗರದಲ್ಲಿನ ಪಾರ್ಕಿಂಗ್ ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸುವ ನಿಟ್ಟಿನಲ್ಲಿ  ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪ‌ರಮೇಶ್ವರ್ ತಿಳಿಸಿದರು‌.

ಪಾರ್ಕಿಂಗ್ ಸಮಸ್ಯೆ ಕುರಿತು ವಿಧಾನಸೌಧದಲ್ಲಿ ಪ್ರಶ್ನಾವಳಿ ಅವಧಿ ವೇಳೆ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಕೇಳಿದ ಪ್ರಶ್ನೆಗೆ ಗೃಹ ಸಚಿವ ಡಾ. ಜಿ.ಪರಮೇಶ್ವರ ಉತ್ತರಿಸಿ, ರಸ್ತೆ ಬದಿ ವಾಹನಗಳನ್ನು ನಗರದಲ್ಲಿ ಇನ್ಫ್ರಾಸ್ಟ್ರಕ್ಚರ್‌ಗಳಿಗೆ ನಿಯಮಗಳನ್ನು ರೂಪಿಸದಿರುವ ಹಿನ್ನೆಲೆಯಲ್ಲಿ ಪಾರ್ಕಿಂಗ್ ಮಾಡುತ್ತಿದ್ದಾರೆ‌.‌ ಬಿಬಿಎಂಪಿ, ಸಾರಿಗೆ ಇಲಾಖೆಯವರು ಇದನ್ನು ತಡೆಗಟ್ಟಲು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕು.

ಮನೆಕಟ್ಟುವಾಗ ವಾಹನಗಳ ಪಾರ್ಕಿಂಗ್‌ಗೆ ಸ್ಥಳ ಇದ್ದರೆ ಮಾತ್ರ ಅನುಮತಿ ನೀಡಬೇಕು. ಇಂತಹ ನಿಯಮಗಳನ್ನು ತರಲು ಚರ್ಚೆ ಮಾಡಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಇದನ್ನೂ ಓದಿ: 7ನೇ ವೇತನ ಆಯೋಗದ ಶಿಫಾರಸು ಜಾರಿಗೆ ಸಚಿವ ಸಂಪುಟ ಸಭೆ ನಿರ್ಧಾರ

ಬೆಂಗಳೂರು ನಗರದಲ್ಲಿ 1194 ನೋ ಪಾರ್ಕಿಂಗ್ ರಸ್ತೆಗಳೆಂದು ಗುರುತಿಸಲಾಗಿದೆ. 2022ರಲ್ಲಿ 12,07,651 ಪ್ರಕರಣಗಳಲ್ಲಿ 20,84,56,000 ರೂ. ದಂಡ, 2023ರಲ್ಲಿ 11,30,855 ಪ್ರಕರಣಗಳಿಗೆ ರೂ 37,30,22,000, 2024 (ಜೂನ್ 3ರವರೆಗೆ) 5,21,326 ಪ್ರಕರಣಗಳನ್ನು ದಾಖಲಿಸಿ 5,97,00,200 ರೂ. ದಂಡ ಸಂಗ್ರಹಿಸಲಾಗಿದೆ ಎಂದು ಮಾಹಿತಿ ನೀಡಿದರು.

ಟ್ರಾಫಿಕ್ ಸಮಸ್ಯೆಯನ್ನು ನಿಯಂತ್ರಿಸಲು ಕೆಳಹಂತದ ಸಿಬ್ಬಂದಿಗಳು ಮಾತ್ರವಲ್ಲದೇ ಸಂಚಾರ ವಿಭಾಗದ ಡಿಸಿಪಿ, ಎಸಿಪಿಯವರು ಬೆಳಗ್ಗೆ ಮತ್ತು ಸಂಜೆ ವೇಳೆ ಕನಿಷ್ಟ ಎರಡು ತಾಸು ರಸ್ತೆಗಿಳಿದು ಕೆಲಸ ಮಾಡುವಂತೆ ಈಗಾಗಲೇ ನಿರ್ದೇಶಿಸಲಾಗಿದೆ ಎಂದು ತಿಳಿಸಿದರು‌.

ಇದನ್ನೂ ನೋಡಿ: ‌ಹಟ್ಟಿ ಚಿನ್ನದ ಗಣಿಯಲ್ಲಿ ಭೂಕುಸಿತ – ಕಾರ್ಮಿಕ ಸಾವು, ನಾಲ್ವರಿಗೆ ಗಂಭೀರಗಾಯ Janashakthi Media

Donate Janashakthi Media

Leave a Reply

Your email address will not be published. Required fields are marked *