ನವದೆಹಲಿ: ಭಾರತದಲ್ಲಿ ಮುಂದಿನ ವಾರ ನಡೆಯಲಿರುವ ಜಿ 20 ಶೃಂಗಸಭೆಯಲ್ಲಿ ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಅವರು ಹೊರಗುಳಿದಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ.
ಸೆಪ್ಟೆಂಬರ್ 9-10 ರಂದು ದೆಹಲಿಯಲ್ಲಿ ನಡೆಯಲಿರುವ ಸಭೆಯಲ್ಲಿ ಬೀಜಿಂಗ್ ಪ್ರತಿನಿಧಿಯಾಗಿ ಲಿ ಕಿಯಾಂಗ್ ಅವರು ಭಾಗವಹಿಸುವ ನಿರೀಕ್ಷೆಯಿದೆ ಎಂದು ಹೇಳಲಾಗಿದೆ. ಭಾರತ ಮತ್ತು ಚೀನಾದ ವಿದೇಶಾಂಗ ಸಚಿವಾಲಯಗಳ ವಕ್ತಾರರು ಪಿ ಜಿನ್‌ಪಿಂಗ್ ಭಾಗವಹಿಸುವಿಕೆಗೆ ಸಂಬಂಧಿಸಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಜಿ 20 ಶೃಂಗಸಭೆ ಸಂದರ್ಭದಲ್ಲಿಯೇ ಜಿನ್‌ಪಿಂಗ್ ಬ್ರಿಟನ್ ಪ್ರಧಾನಿ ರಿಷಿ ಸುನಕ್, ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರೊಂದಿಗೆ ಪ್ರತ್ಯೇಕವಾಗಿ ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ. ಅದರೆ ಜಿನ್‌ಪಿಂಗ್ ಅವರು ಶೃಂಗದಲ್ಲಿ ಭಾಗಿಯಾಗುವುದನ್ನು ಖಚಿತಪಡಿಸುವ ಯಾವುದೆ ಮಾಹಿತಿ ಇಲ್ಲ ಎಂದು ಮೂಲಗಳು ಹೇಳಿವೆ.
ಇದನ್ನೂ ಓದಿ:ದೆಹಲಿಯಲ್ಲಿ ನಡೆಯಲಿರುವ ಜಿ-20 ನಾಯಕರ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿರುವ: ಅಮೆರಿಕದ ಅಧ್ಯಕ್ಷ ಜೋ ಬೈಡನ್
ಸೋಮವಾರ ಪ್ರಧಾನಿ ಮೋದಿ ಅವರಿಗೆ ಕರೆ ಮಾಡಿದ್ದ ರಷ್ಯಾ ಅಧ್ಯಕ್ಷ ವ್ಲಾಡಿಮೀರ್ ಪುಟೀನ್, ಸಭೆಯಲ್ಲಿ ತಾವು ಪಾಲ್ಗೊಳ್ಳದಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಮೆಕ್ಸಿಕೊ ಅಧ್ಯಕ್ಷ ಅಂಡ್ರೆಸ್ ಮ್ಯಾನುಯೆಲ್ ಲೋಪೆಜ್ ಒಬ್ರಡಾರ್ ಅವರು ಕೂಡ ಪಾಲ್ಗೊಳ್ಳುತ್ತಿಲ್ಲ.
Chinese President Xi Jinping likely to skip G20 Summit in India, reports Reuters pic.twitter.com/l2eNZjSnNx
— ANI (@ANI) August 31, 2023