ಬೆಂಗಳೂರು: ಗೃಹ ಸಚಿವ ಜಿ. ಪರಮೇಶ್ವರ ಅವರು ದಲಿತ ಎಡಗೈ ಸಮುದಾಯದ ಪ್ರಮುಖ ನಾಯಕರೊಂದಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಒಳ ಮೀಸಲಾತಿ ವಿಚಾರವಾಗಿ ಉದ್ಭವಿಸಿರುವ ಕಗ್ಗಂಟಿನ ಹಿನ್ನೆಲೆಯಲ್ಲಿ ಮಹತ್ವದ ಸಭೆ ನಡೆಸಿದರು.
ಸದಾಶಿವನಗರದಲ್ಲಿರುವ ಪರಮೇಶ್ವರ್ ಅವರ ಸರ್ಕಾರಿ ನಿವಾಸದಲ್ಲಿ ನಡೆದ ಈ ಸಭೆಯಲ್ಲಿ ಒಳ ಮೀಸಲಾತಿ ಜಾರಿಯ ಪ್ರಸ್ತುತ ಸ್ಥಿತಿ ಹಾಗೂ ಸಮುದಾಯದ ಬೇಡಿಕೆಗಳ ಬಗ್ಗೆ ಚರ್ಚೆ ನಡೆಯಿತು. ದಲಿತ
ಇದನ್ನೂ ಓದಿ: ಅಬಕಾರಿ ಇಲಾಖೆ ನೇಮಕಾತಿ ಪರೀಕ್ಷೆಯಲ್ಲಿ ವಂಚನೆ ಆರೋಪ: 12 ಅಭ್ಯರ್ಥಿಗಳ ವಿರುದ್ಧ ಪ್ರಕರಣ ದಾಖಲು
ಸಭೆಗೆ ಸಚಿವರಾದ ಕೆ.ಎಚ್.ಮುನಿಯಪ್ಪ ಹಾಗೂ ಶಿವಾನಂದ್ ಪಾಟೀಲ್ ತಿಮ್ಮಾಪುರ್ ಗೃಹ ಕಚೇರಿಗೆ ಭೇಟಿ ನೀಡಿ ಭಾಗವಹಿಸಿದರು.
ಇದಲ್ಲದೆ, ಮಾಜಿ ಸಚಿವ ಎಚ್.ಆಂಜನೇಯ, ಶಾಸಕ ಎಲ್.ಶ್ರೀನಿವಾಸ್, ಎಲ್. ಹನುಮಂತಯ್ಯ ಸಮುದಾಯದ ಮುಖಂಡ ಧರ್ಮಸೇನ ಗೌತಮ್ ಸೇರಿದಂತೆ ಹಲವು ಸಮುದಾಯದ ಪ್ರಮುಖರು ಉಪಸ್ಥಿತರಿದ್ದರು.
ಒಳ ಮೀಸಲಾತಿ ವಿಚಾರದಲ್ಲಿ ಉಂಟಾಗಿರುವ ಭಿನ್ನಾಭಿಪ್ರಾಯಗಳನ್ನು ಸಮನ್ವಯಗೊಳಿಸುವ ದಿಶೆಯಲ್ಲಿ ಈ ಸಭೆ ಮಹತ್ವ ಪಡೆದಿದ್ದು, ಮುಂದಿನ ದಿನಗಳಲ್ಲಿ ಸರ್ಕಾರದಿಂದ ಸ್ಪಷ್ಟ ನಿರ್ಧಾರ ಹೊರಬರುವ ನಿರೀಕ್ಷೆ ವ್ಯಕ್ತವಾಗಿದೆ.
ಇದನ್ನೂ ನೋಡಿ: ಹೂವಾಗಬೇಕಿದ್ದದ್ದು… ಕ್ಷಿಪಣಿಯಾದದ್ದು | ಬುಷ್ ಅಧ್ಯಕ್ಷರಾಗಿದ್ದಾಗ ಕೃಷ್ಣ ನಾಯಕ ಹಿಚ್ಕಡ ಬರೆದ ಕವಿತೆ Janashakthi
