ನವದೆಹಲಿ: ಲೋಕಸಭೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ರದ್ದುಗೊಳಿಸಿ ಅದರ ಬದಲಿಯಾಗಿ ಕೇಂದ್ರ ಸರ್ಕಾರ ರೂಪಿಸಿದ್ದ ಜಿ ರಾಮ್ ಜಿ ಮಸೂದೆ ಭಾರೀ ಗದ್ಧಲಗಳ ನಡುವೆ ಡಿಸೆಂಬರ್ 18ರಂದು ಅನುಮೋದನೆ ಪಡೆದಿದೆ.
ಲೋಕಸಭೆಯಲ್ಲಿ ಪ್ರತಿಪಕ್ಷಗಳು ಮಸೂದೆಯನ್ನು ಪುನರ್ ಪರಿಶೀಲನಾ ಸಮಿತಿ ಮುಂದೆ ಇಡಬೇಕು ಎಂದು ಆಗ್ರಹಿಸಿದವು. ಆಡಳಿತ ಪಕ್ಷ ಇದನ್ನು ವಿರೋಧಿಸಿ ಮಸೂದೆ ಮತಕ್ಕೆ ಹಾಕಲು ಮುಂದಾದಾಗ ಪ್ರತಿಪಕ್ಷಗಳು ಕಾಗದ ಪತ್ರಗಳನ್ನು ಹರಿದು ಹಾಕಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ: ಬೆಂಗಳೂರು | ಪೌರಕಾರ್ಮಿಕರ ಸುರಕ್ಷತೆಗೆ ಹೆಚ್ಚು ಗಮನಹರಿಸಿ – ಆಯುಕ್ತ ಡಾ. ರಾಜೇಂದ್ರ ಕೆ.ವಿ
ಇದಕ್ಕೂ ಮುನ್ನ ಕಾಂಗ್ರೆಸ್ ಪಕ್ಷದ ಮುಖಂಡರಾದ ಪ್ರಿಯಾಂಕಾ ಗಾಂಧಿ, ಡಿಎಂಕೆ ಮುಖಂಡ ಟಿಆರ್ ಬಾಲು, ಸಮಜವಾದಿ ಪಕ್ಷದ ಧರ್ಮೇಂದ್ರ ಯಾದವ್ ಮಸೂದೆಯನ್ನು ವಿರೋಧಿಸಿ ಮಾತನಾಡಿದರು.

ಮಹಾತ್ಮ ಗಾಂಧಿ ಹೆಸರನ್ನು ಯೋಜನೆಯಿಂದ ಕೈಬಿಡುವುದು ರಾಷ್ಟ್ರಪಿತನಿಗೆ ಮಾಡಿದ ಅಪಮಾನ. ಅಲ್ಲದೇ ಈ ಯೋಜನೆಯಿಂದ ರಾಜ್ಯಗಳ ಮೇಲೆ ಹೆಚ್ಚಿನ ಹೊರೆ ಬೀಳಲಿದೆ ಎಂದು ಪ್ರತಿಪಕ್ಷ ಸಂಸದರು ಆರೋಪಿಸಿದರು.
ಮಸೂದೆಯ ಪರವಾಗಿ ವಾದ ಮಂಡಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್, ಕಾಂಗ್ರೆಸ್ ಕಾನೂನುಗಳಿಗೆ ಗಾಂಧಿ, ನೆಹರೂ ಹೆಸರಿಟ್ಟಿದ್ದು, ಈಗ ಎನ್‌ಡಿಎ ಸರ್ಕಾರವನ್ನು ಪ್ರಶ್ನಿಸುತ್ತಿದೆ ಎಂದು ಹೇಳಿದರು.
ಇದನ್ನೂ ನೋಡಿ: ಧರ್ಮಸ್ಥಳ| ಕೊಂದವರು ಯಾರು?ಏಕವ್ಯಕ್ತಿ ಪ್ರದರ್ಶನ Janashakthi Media
