ಗಣಪತಿ ಮೆರವಣಿಗೆ ಅಪಘಾತ: ಚಾಲಕನ ವಿರುದ್ಧ ದೂರು ದಾಖಲು

ಹಾಸನ: ಸೆಪ್ಟೆಂಬರ್‌ 12 ರಾತ್ರಿ ನಗರದಲ್ಲಿ ನಡೆದ ಗಣಪತಿ ಮೆರವಣಿಗೆಯಲ್ಲಿ ಟ್ರಕ್ ಹರಿದು ಸಂಭವಿಸಿದ ದುರಂತದಲ್ಲಿ ಮೃತಪಟ್ಟವರಿಗೆ ತಲಾ 5 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 50,000 ಪರಿಹಾರ ಘೋಷಿಸಲಾಗಿದೆ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಭೈರೇಗೌಡ ತಿಳಿಸಿದ್ದಾರೆ.

ದುರಂತಕ್ಕೆ ಕಾರಣನಾದ ಟ್ರಕ್ ಚಾಲಕ ಭುವನ್ ವಿರುದ್ಧ ಗೋರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಸ್ಥಳಕ್ಕೆ ಹೆಚ್ಚುವರಿ ಕೆಎಸ್‌ಆರ್‌ಪಿ ತುಕಡಿ ನೇಮಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಬೆಳಗಾವಿ |ವಿವಿದ ಬೇಡಿಕೆ ಈಡೇರಿಸುವಂತೆ ಶಾಸಕರಿಗೆ ಮನವಿ – ವಸತಿ ಶಾಲಾ ವಿಷಯ ಶಿಕ್ಷಕರ ಸಂಘ

ಹಾಸನ ಗಣಪತಿ ಮೆರವಣಿಗೆಯಲ್ಲಿ ಸಂಭವಿಸಿದ ದುರಂತ ಹಾಗೂ ಮುಂದೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ, ಹಾಸನ ಜಿಲ್ಲೆ ಸಂಸದರಾದ ಶ್ರೇಯಸ್ ಪಟೇಲ್ ಹಾಗೂ ಜಿಲ್ಲಾಧಿಕಾರಿ ಲತಾ ಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುಹಮ್ಮದ್ ಸುಜಿತಾ ಜೊತೆ ಚರ್ಚೆ ನಡೆಸಿದರು.

ಘಟನೆ ವಿವರ :

ಶುಕ್ರವಾರ ಹಾಸನದ ಮೊಸಳೆ ಹೊಸಹಳ್ಳಿ ಗ್ರಾಮದಲ್ಲಿ ಗಣಪತಿ ಮೆರವಣಿಗೆ ವೇಳೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ 9 ಮಂದಿ ಮೃತಪಟ್ಟು, ಘಟನೆಯಲ್ಲಿ ಸುಮಾರು 23ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದರು.

ಹಾಸನದಿಂದ ಮೈಸೂರಿನ ಕಡೆಗೆ ಸಂಚರಿಸುತ್ತಿದ್ದ ಟ್ರಕ್ ವೊಂದು ಓವರ್‌ಟೇಕ್ ಮಾಡುವ ರಭಸದಲ್ಲಿ ರಸ್ತೆಯ ಡಿವೈಡರ್‌ಗೆ ಢಿಕ್ಕಿ ಹೊಡೆದು ನಿಯಂತ್ರಣವನ್ನು ಕಳೆದುಕೊಂಡಿದೆ. ನಂತರ ಮೆರವಣಿಗೆಯಲ್ಲಿ ಭಾಗವಹಿಸುತ್ತಿದ್ದ ಗುಂಪಿನ ಮೇಲೆ ನೇರವಾಗಿ ಹರಿದ ಪರಿಣಾಮ ದುರ್ಘಟನೆ ಸಂಭವಿಸಿತ್ತು.

ಇದನ್ನೂ ನೋಡಿ: ಪರಿಷ್ಕೃತ ಜಿಎಸ್ ಟಿ : ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ? Janashakthi Media

Donate Janashakthi Media

Leave a Reply

Your email address will not be published. Required fields are marked *