ಕೋಲಾರ ಜ 31: ದೇಶದ ಸ್ವಾತಂತ್ರ್ಯಕ್ಕಾಗಿ ಸತ್ಯ ಅಹಿಂಸಾತ್ಮಕ ಚಳುವಳಿಯ ಮೂಲಕ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿ ಹುತಾತ್ಮರಾದ ಮಹಾತ್ಮ ಗಾಂಧೀಜಿಯವರ ದಾರಿಯಲ್ಲಿ ನಡೆಯಬೇಕಾಗಿದೆ ಎಂದು ಜಿಲ್ಲಾಧಿಕಾರಿ ಸಿ.ಸತ್ಯಭಾಮ ತಿಳಿಸಿದರು
ನಗರದ ಗಾಂಧೀವನದಲ್ಲಿ ಶನಿವಾರ ಜಿಲ್ಲಾಡಳಿತ ವತಿಯಿಂದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಹುತಾತ್ಮ ದಿನಾಚರಣೆಯಲ್ಲಿ ಗಾಂಧೀಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪಾರ್ಚನೆ ಮಾಡಿ ಮಾತನಾಡಿದ ಅವರು ರಾಷ್ಟ್ರಿಪಿತ ಮಹಾತ್ಮ ಗಾಂಧೀಜಿ ದೇಶಕ್ಕೆ ಸರ್ವ ಧರ್ಮ ಸಮಾನತೆಯ ಆದರ್ಶ ವ್ಯಕ್ತಿಯಾಗಿದ್ದರು ಸತ್ಯ ಅಂಹಿಸೆಯನ್ನು ಜೀವನದಲ್ಲಿ ಅಳವಡಿಸಿಕೊಂಡು ದೇಶಕ್ಕೆ ಸ್ವಾತಂತ್ರ್ಯ ಕೊಟ್ಟ ಮಹಾನ್ ವ್ಯಕ್ತಿಯಾಗಿದ್ದರು
ದೇಶಕ್ಕಾಗಿ ಗಾಂಧೀಜಿ ಯವರ ಆದರ್ಶಗಳನ್ನು ಯುವಜನರು ಊಹಿಸಕೊಳ್ಳಲು ಸಾಧ್ಯವಿಲ್ಲ ಇಂತಹ ವ್ಯಕ್ತಿ ನಮ್ಮ ದೇಶದಲ್ಲಿ ಇದ್ರುಎ ಎಂದು ಐಸ್ಟೀನ್ ರವರು ತಮ್ಮ ಪುಸ್ತಕದಲ್ಲಿ ಬರೆದಿದ್ದಾರೆ ದೇಶದ ಸ್ವಾತಂರ್ತ್ಯಕ್ಕಾಗಿ ಹೋರಾಡಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ್ದಾರೆ ಎಂದರು ಇದೇ ಸಂದರ್ಭದಲ್ಲಿ ಸರ್ವ ಧರ್ಮ ಪ್ರಾರ್ಥನೆಯನ್ನು ನೆರವೇರಿಸಿ ಎರಡು ನಿಮಿಷಗಳ ಕಾಲ ಮೌನಾಚರಣೆ ಮಾಡಿದರು.
ಈ ಕಾರ್ಯಕ್ರಮದಲ್ಲಿ ಭಾರತ ಸೇವಾದಳದ ಜಿಲ್ಲಾಧ್ಯಕ್ಷ ಕೆ.ಎಸ್ ಗಣೇಶ್, ನಗರಸಭೆ ಆಯುಕ್ತ ಶ್ರೀಕಾಂತ್, ಜಿಲ್ಲಾ ಅಥ್ಲೆಟಿಕ್ಸ್ ಅಸೋಷಿಯೇಷನ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯದೇವ್, ರಾಜೇಶ್ ಸಿಂಗ್, ಜಿ ಶ್ರೀನಿವಾಸನ್, ಮತ್ತಿತರರು ಹಾಜರಿದ್ದರು.