ಗಣೇಶೋತ್ಸವ ಮೆರವಣಿಗೆ ಅಪಘಾತ: ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆ

ಹಾಸನ: ಸೆಪ್ಟೆಂಬರ್‌ 12 ರಾತ್ರಿ ನಗರದ ಮೊಸಳೆ ಹೊಸಳ್ಳಿಯಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ಸೆಪ್ಟೆಂಬರ್‌ 13ರಂದು 10ಕ್ಕೆ ಏರಿಕೆಯಾಗಿದೆ.

ಟ್ರಕ್‌ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿದ್ದ ಚಂದನ್‌ ಎಂಬ ಯುವಕ ಸೆಪ್ಟೆಂಬರ್‌ 14ರಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಗಣೇಶೋತ್ಸವ

ಅಪಘಾತದಲ್ಲಿ 22ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಹಾಸನ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಚಿವ ಕೃಷ್ಣ ಬೈರೇಗೌಡ ಅವರು ಹಾಸನ ಆಸ್ಪತ್ರೆಗೆ ಭೇಟಿ ನೀಡಿ, ಗಾಯಾಳುಗಳ ಆರೋಗ್ಯ ವಿಚಾರಿಸಿದರು.

ಇದನ್ನೂ ಓದಿ: ವಿಜಯಪುರ | 33 ಪ್ರವಾಸಿ ತಾಣಗಳನ್ನೂ ಗುರುತಿಸಲಾಗಿದೆ – ಉಪನಿರ್ದೇಶಕ ಅರವಿಂದ ಹೂಗಾರ

ಕೃಷ್ಣ ಬೌರೇಗೌಡ ಅವರು ಗಾಯಾಳುಗಳ ಆರೋಗ್ಯ ಸ್ಥಿತಿಯ ಬಗ್ಗೆ ವಿಚಾರಿಸಿದರು ಮತ್ತು ಅವರ ಕುಟುಂಬಗಳೊಂದಿಗೆ ಮಾತುಕತೆ ನಡೆಸಿದರು ಎಂದು ಸಚಿವರ ಕಚೇರಿಯ ಪ್ರಕಟಣೆ ತಿಳಿಸಿದೆ.

ಇದಕ್ಕು ಮುನ್ನ ಕೃಷ್ಣ ಬೈರೇಗೌಡ ಅವರು ಅಪಘಾತ ನಡೆದ ಸ್ಥಳಕ್ಕೆ ಭೇಟಿ ನೀಡಿ, ಸ್ಥಳೀಯರು ಹಾಗೂ ಅಧಿಕಾರಿಗಳ ಜತೆ ಮಾತುಕತೆ ನಡೆಸಿದರು. ಈ ವೇಳೆ, ಜನರು ಪರಿಹಾರ ಕಡಿಮೆ ಎಂಬ ವಿಚಾರವಾಗಿ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರದಿಂದ ಘೋಷಿಸಲಾಗಿರುವ ಐದು ಲಕ್ಷ ರೂಪಾಯಿ ಪರಿಹಾರ ಸಾಕಾಗುವುದಿಲ್ಲ ಎಂದು ಜನ ಹೇಳಿದ್ದು, ಹೆಚ್ಚಿನ ಪರಿಹಾರ ನೀಡಬೇಕೆಂದು ಆಗ್ರಹಿಸಿದರು.

ಜನರನ್ನು ಸಮಾಧಾನಪಡಿಸಿದ ಸಚಿವರು, ಹೆಚ್ಚಿನ ಪರಿಹಾರಕ್ಕಾಗಿ ಮುಖ್ಯಮಂತ್ರಿಗಳೊಂದಿಗೆ ಮಾತನಾಡುವುದಾಗಿ ಭರವಸೆ ನೀಡಿದರು.

ಇದನ್ನೂ ನೋಡಿ: ನಾಲ್ಕು ದಶಕಗಳಿಂದ ಧರ್ಮಸ್ಥಳದಲ್ಲಿ ಕೊಲೆ, ದೌರ್ಜನ್ಯ, ಅತ್ಯಾಚಾರಗಳು ನಡೆಯುತ್ತಿವೆ – ಡಾ. ಕೆ.ಪ್ರಕಾಶ್‌ Janashakthi

Donate Janashakthi Media

Leave a Reply

Your email address will not be published. Required fields are marked *