ಬೆಂಗಳೂರು :ನಗರದ ಕೆಆರ್ ಮಾರುಕಟ್ಟೆ ಬಳಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿದ್ದು ಈ ಸಂಬಂಧ ಎಸ್.ಜೆ. ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಮಿಳುನಾಡು ಮೂಲದ ಮಹಿಳೆಯ ಮೇಲೆ ಇಬ್ಬರು ಅತ್ಯಾಚಾರ ಎಸಗಿ ಮೊಬೈಲ್ ಹಾಗೂ ಚಿನ್ನದ ಸರ ದರೋಡೆ ನಡೆಸಿದ್ದಾರೆ.
ಭಾನುವಾರ ರಾತ್ರಿ 11.39ಕ್ಕೆ ಕೆ.ಆರ್.ಮಾರ್ಕೆಟ್ ಬಳಿಯ ಗೋಡೌನ್ ಸ್ಟ್ರೀಟ್ ನಲ್ಲಿ ಈ ಘಟನೆ ನಡೆದಿದ್ದು,
ಮನೆಯಲ್ಲಿ ಕುಟುಂಬದ ಜತೆಗೆ ಗಲಾಟೆ ಮಾಡಿಕೊಂಡಿದ್ದ ಮಹಿಳೆ ತಮಿಳುನಾಡಿನಿಂದ ಬೆಂಗಳೂರಿಗೆ ಬಂದಿದ್ದರು. ಕೆಆರ್ ಮಾರುಕಟ್ಟೆಯಲ್ಲಿ ಬಸ್‌ಗಾಗಿ ಕಾಯುತ್ತಿದ್ದರು. ಆಗ ಇಬ್ಬರು ಆರೋಪಿಗಳು ಮಹಿಳೆಯನ್ನು ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸಂತ್ರಸ್ತೆ ನೀಡಿರುವ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಸಿಸಿಟಿವಿ ಕ್ಯಾಮೆರಾ ಪರಿಶೀಲನೆ ನಡೆಸಲಾಗುತ್ತಿದೆ. ಕೆಲವು ಸ್ಥಳಗಳಲ್ಲಿ ಅಳವಡಿಸಿರುವ ಸಿಸಿಟಿವಿ ಕ್ಯಾಮೆರಾಗಳಲ್ಲಿ ಆರೋಪಿಗಳು ಓಡಾಟ ನಡೆಸಿರುವ ದೃಶ್ಯಸೆರೆಯಾಗಿದೆ. ಆರೋಪಿಗಳ ಪತ್ತೆಗೆ ಪ್ರತ್ಯೇಕ ತಂಡ ರಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.