ಬೆಂಗಳೂರು: ನಗರದಲ್ಲಿ ಕಸದ ಸಮಸ್ಯೆ ಹೆಚ್ಚಳವಾಗಿದ್ದು, ಎಲ್ಲೆಂದರಲ್ಲಿ ಕಸಕ್ಕೆ ಬೆಂಕಿ ಹಾಕುತ್ತಿದ್ದಾರೆ. ಕಸ ವಿಲೇವಾರಿ ಸಮಸ್ಯೆಯು ಕಳೆದ 15 ದಿನಗಳಿಂದ ಹೆಚ್ಚಾಗಿದೆ. ಇದೀಗ ಇಲ್ಲಿ ಕಸದ ಸಮಸ್ಯೆ ವಿಪರೀತವಾಗಿದ್ದು, ಕೆಲವು ಕಡೆಗಳಲ್ಲಿ ಮೂಗು ಮುಚ್ಚಿಕೊಂಡು ನಡೆದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಬೆಂಗಳೂರು
ಆದರೆ, ಬಿಬಿಎಂಪಿ ವ್ಯಾಪ್ತಿಯಲ್ಲಿ ಹೆಚ್ಚಾಗಿದ್ದ ಕಸದ ಸಮಸ್ಯೆಯನ್ನು ನಿವಾರಣೆ ಮಾಡಲಾಗಿದೆ ಎಂದು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ. ಪಾಲಿಕೆ ವ್ಯಾಪ್ತಿಯಲ್ಲಿ ವಿವಿಧ ವಿಷಯಗಳ ಕುರಿತು ಮಾತನಾಡಿರುವ ಅವರು, ನಗರದಲ್ಲಿ ಮಿಟ್ಟಗಾನಹಳ್ಳಿ ಹಾಗೂ ಕಣ್ಣೂರು ಭೂಭರ್ತಿ ಪ್ರದೇಶದದಲ್ಲಿ ಕಸ ವಿಲೇವಾರಿ ಮಾಡುವ ವಿಚಾರವಾಗಿ ಸ್ಥಳೀಯರಿಂದ ಆಗಿದ್ದ ಸಮಸ್ಯೆಯನ್ನು ಬಹುತೇಕ ಬಗೆಹರಿಸಲಾಗಿದೆ. ಬೆಂಗಳೂರು
ಎಂದಿನಂತೆ ಕಸ ವಿಲೇವಾರಿ ಕಾರ್ಯವನ್ನು ನಡೆಸಲಾಗುತ್ತಿದೆ ಎಂದಿದ್ದಾರೆ. ಆದರೆ ಮಂಗಳವಾರವೂ ನಗರದ ವಿವಿಧ ಭಾಗದಲ್ಲಿ ಕಸಕ್ಕೆ ಬೆಂಕಿ ಹಾಕುತ್ತಿರುವುದು ಮುಂದುವರಿದಿದೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಕಸಕ್ಕೆ ಸಂಬಂಧಿಸಿದಂತೆ ಮಿಶ್ರ ಕಸವನ್ನು ಭೂಭರ್ತಿ ಘಟಕ, ಹಸಿ ಕಸವನ್ನು ಸಂಸ್ಕರಣಾ ಘಟಕಗಳು ಹಾಗೂ ಒಣ ಕಸವನ್ನು ಕಸ ತ್ಯಾಜ್ಯ ಸಂಗ್ರಹಣಾ ಘಟಕಗಳಿಗೆ ಕಳುಹಿಸಲಾಗುತ್ತಿದೆ. ಘನತ್ಯಾಜ್ಯಕ್ಕಾಗಿ ಹೊಸ ಯೋಜನೆಯಂತೆ ಟೆಂಡರ್ ಕರೆಯಲಾಗಿತ್ತು. ಆ ಟೆಂಡರ್‌ನಲ್ಲಿ ಭಾಗವಹಿಸಿದ್ದವರ ಸಂಖ್ಯೆ ತುಂಬಾ ಕಡಿಮೆಯಾಗಿತ್ತು.
ಇದನ್ನೂ ಓದಿ: ಕಾಡುವ ವಲಸಿಗ ಫಿಲಂಗಳು -1: ‘ಕಾಣದ ನಾಡಿನತ್ತ’ ಮತ್ತು ‘ಸುಲೈಮಾನ್ ಕತೆ’
ಹೀಗಾಗಿ, ಟೆಂಡರ್‌ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗುತ್ತಿಗೆದಾರರು ಯಾಕೆ ಭಾಗವಹಿಸಿಲ್ಲ ಎನ್ನುವ ಕಾರಣಗಳನ್ನು ಗುರುತಿಸಲಾಗಿದೆ. ಇದೀಗ ಎಲ್ಲಾ ಅಂಶಗಳನ್ನು ಸೇರ್ಪಡೆ ಮಾಡಿ ಪುನರ್ ಟೆಂಡರ್ ಕರೆಯಲಾಗುತ್ತಿದೆ. ಅಲ್ಲದೆ ಘನತ್ಯಾಜ್ಯ ಸಮಗ್ರ ವಿಲೇವಾರಿಗಾಗಿ ಹೊಸದಾಗಿ ಜಾಗಗಳನ್ನು ಕೂಡಾ ಗುರುತಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಮಿಟ್ಟಗಾನಹಳ್ಳಿ, ಕಣ್ಣೂರಿನ ಬಳಿ ಸ್ಥಳೀಯರು ಹಾಗೂ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆದಾರರ ನಡುವೆ ಕೆಲ ಭಿನ್ನಾಭಿಪ್ರಾಯಗಳಿಂದ ಕಸದ ಸಮಸ್ಯೆ ಉಂಟಾಗಿತ್ತು. ಬಹುತೇಕ ಸಮಸ್ಯೆಯನ್ನು ಬಗೆಹರಿಸಲಾಗಿದೆ. 500 ಕೋಟಿ ರೂ. ವೆಚ್ಚದಲ್ಲಿ ಗ್ರಾಮೀಣಾಭಿವೃದ್ಧಿ ಕಾಮಗಾರಿಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಅಭಿವೃದ್ಧಿಗಾಗಿ ವ್ಯಯಿಸಬೇಕಿರುವ ಹಣದ ವಿಚಾರವಾಗಿ ಟೆಂಡರ್ ಮಾಡಿ ಕಾರ್ಯಾದೇಶ ನೀಡಿ ಶೀಘ್ರ ಕೆಲಸ ಪ್ರಾರಂಭಿಸಲಾಗುವುದು ಎಂದು ಹೇಳಿದರು.
ಮಿಟ್ಟಗಾನಹಳ್ಳಿ, ಕಣ್ಣೂರಿನ ಬಳಿ ರಾತ್ರಿ ವೇಳೆ ಕಸ ವಿಲೇವಾರಿ ಮಾಡಲಾಗುತ್ತಿದೆ. ಹಗಲಿನಲ್ಲಿಯೂ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಲಾಗುವುದು. ಇರುವ ಸಣ್ಣ-ಪುಟ್ಟ ಸಮಸ್ಯೆಗಳನ್ನು ಬಗೆಹರಿಸುವ ಸಲುವಾಗಿ ಜಿಲ್ಲಾ ಪಂಚಾಯ್ತಿಯ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಯು ಕೂಡಾ ಸ್ಥಳಕ್ಕೆ ಭೇಟಿ ನೀಡಿ ಇರುವ ಸಮಸ್ಯೆಗಳನ್ನು ಬಗೆಹರಿಸಲಿದ್ದಾರೆ ಎಂದು ಹೇಳಿದರು.
ಲಿಚೆಟ್ ಸಂಸ್ಕರಣೆಗೆ ಕ್ರಮ: ಮಿಟ್ಟಗಾನಹಳ್ಳಿ ಭೂಭರ್ತಿ ಘಟಕದಲ್ಲಿ 275 ಕೋಟಿ ಲೀಟರ್ ಲಿಚೆಟ್ ಸಂಗ್ರಹವಾಗಿದೆ. ಈ ನೀರಿನ್ನು ಸಂಸ್ಕರಿಸಲು ಟೆಂಡರ್ ಕರೆಯಲಾಗಿದ್ದು. 3 ರಿಂದ 4 ವರ್ಷಗಳಲ್ಲಿ ಸಮಸ್ಯೆ ಬಗೆಹರಿಸಲು ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇದೀಗ 100 ಕೆ.ಎಲ್.ಡಿ ಹಾಗೂ 25 ಕೆ.ಎಲ್.ಡಿ ಸಂಸ್ಕರಣ ಘಟಕಗಳಿವೆ. ಹೊಸದಾಗಿ 2000 ಕೆ.ಎಲ್.ಡಿ ಘಟಕವನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ. ಇದರ ಮೂಲಕ ಲಿಚೆಟ್ ಅನ್ನು ಸಂಸ್ಕರಿಸಲಾಗುವುದು. ಲಿಚೆಟ್ ಸಂಸ್ಕರಣೆಗಾಗಿ ಸರಾಸರಿ 474 ಕೋಟಿ ರೂಪಾಯಿ ವ್ಯಯಿಸಲಾಗುತ್ತಿದೆ ಎಂದಿದ್ದಾರೆ.
ಇದನ್ನೂ ನೋಡಿ: ಎಲ್ಲಾ ವಲಯಗಳಲ್ಲಿ ಮಹಿಳೆಯರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಿ – ರೂಪಾ ಹಾಸನ Janashakthi Media